ಬಿಡುಗಡೆಗೂ ಮೊದಲೇ ಸದ್ದು ಮಾಡುತ್ತಿವೆ ಈ 5 ಹೊಸ ಕಾರುಗಳು.. ಟಾಟಾ, ಮಾರುತಿ & ಮಹೀಂದ್ರಾ​​ಗಳದ್ದೇ ಅಬ್ಬರ!

ಭಾರತವು ವಿಶಾಲವಾದ ಕಾರು ಮಾರುಕಟ್ಟೆಯನ್ನು ಹೊಂದಿದೆ. ಪ್ರತಿ ತಿಂಗಳು ಒಂದಿಲ್ಲೊಂದು ಕಾರು ಬಿಡುಗಡೆಯಾಗುತ್ತಿರುತ್ತವೆ. ಈ ವರ್ಷದ ನವೆಂಬರ್ ಹಾಗೂ ಡಿಸೆಂಬರ್ ತಿಂಗಳು ದೇಶೀಯ ವಾಹನ ತಯಾರಕರಿಗೆ ಹೆಚ್ಚು ಮಹತ್ವದಾಗಿದೆ. ಪ್ರಮುಖವಾಗಿ ಟಾಟಾ, ಮಾರುತಿ ಸುಜುಕಿ ಹಾಗೂ ಮಹೀಂದ್ರಾ ಕಂಪನಿಯ 5 ಮಿಡ್-ಸೈಜ್ ಎಸ್‌ಯುವಿಗಳು ಅದ್ದೂರಿಯಾಗಿ ಮಾರಾಟಕ್ಕೆ ಬರಲಿವೆ. ಬನ್ನಿ, ಈ ಕಾರುಗಳ ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರವನ್ನು ತಿಳಿಯೋಣ.

ಟಾಟಾ ಸಿಯೆರಾ (Tata Sierra):

ಕಳೆದ ಶನಿವಾರ ನೂತನ 'ಸಿಯೆರಾ'ವನ್ನು ಅದ್ದೂರಿಯಾಗಿ ಪರಿಚಯಿಸಲಾಗಿದೆ. ಸದ್ಯ ಐಸಿಇ ಮಾಡೆಲ್‌ನ್ನು ಅನಾವರಣಗೊಳಿಸಲಾಗಿದೆ. ಇದೇ 25ರಂದು ಬಿಡುಗಡೆಗೊಳಿಸಲಾಗಿತ್ತದೆ. ಈ ಕಾರು ರೂ.11 ಲಕ್ಷದಿಂದ ರೂ.20 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಖರೀದಿದಾರರಿಗೆ ಲಭ್ಯವಾಗುವ ನಿರೀಕ್ಷೆಯಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಹಾಗೂ ಪ್ರಿಸ್ಟೀನ್ ವೈಟ್ ಎಂಬ 6 ಬಣ್ಣಗಳೊಂದಿಗೆ ಲಭ್ಯವಾಗುತ್ತದೆ.

New 5 Mid-Size SUVs Launch Soon Sierra e Vitara XEV 9e Safari And Harrier

ಹೊಸ 'ಟಾಟಾ ಸಿಯೆರಾ' 1.5-ಲೀಟರ್ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ದೊರೆಯುವ ಸಾಧ್ಯತೆಯಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್-ಸೈಡ್ ಡಿಸ್​ಪ್ಲೇ), ಪನೋರಮಿಕ್ ಸನ್‌ರೂಫ್‌ ಹಾಗೂ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ. ಎಲೆಕ್ಟ್ರಿಕ್ ಚಾಲಿತ 'ಸಿಯೆರಾ' 2026ರ ಜನವರಿಯಲ್ಲಿ ಮಾರಾಟಕ್ಕೆ ಬರಲಿದೆ.

ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara):

ಬಹುನಿರೀಕ್ಷಿತ 'ಇ-ವಿಟಾರಾ' ಡಿಸೆಂಬರ್ 2 ರಂದು ಬಿಡುಗಡೆಯಾಗಲಿದೆ. ರೂ.17 ಲಕ್ಷದಿಂದ ರೂ.22.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರುವ ನಿರೀಕ್ಷೆಯಿದೆ. ಡೆಲ್ಟಾ, ಜಿಟಾ ಮತ್ತು ಆಲ್ಫಾ ಎಂಬ 3 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. 180 ಮಿ.ಮಿ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,700 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

New 5 Mid-Size SUVs Launch Soon Sierra e Vitara XEV 9e Safari And Harrier

ಈ ಕಾರು 5 ಆಸನಗಳನ್ನು ಪಡೆದಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 7 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಮಹೀಂದ್ರಾ ಎಕ್ಸ್ಇವಿ 9ಎಸ್ (Mahindra XEV 9S):

ಇದೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ನ.27 ರಂದು ಅದ್ದೂರಿಯಾಗಿ ಮಾರಾಟಕ್ಕೆ ಬರಲಿದೆ. ರೂ.21 ಲಕ್ಷದಿಂದ ರೂ.31.70 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು.

New 5 Mid-Size SUVs Launch Soon Sierra e Vitara XEV 9e Safari And Harrier

ನೂತನ 'ಮಹೀಂದ್ರಾ ಎಕ್ಸ್ಇವಿ 9ಎಸ್' 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 542 ರಿಂದ 656 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟೂ ಸ್ಪೋಕ್ ಸ್ಟೀರಿಂಗ್ ವೀಲ್, ವೈರ್‌ಲೆಸ್ ಚಾರ್ಜರ್‌ಗಳು, ಕೀಲೆಸ್ ಎಂಟ್ರಿ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ 7 ಏರ್‌ಬ್ಯಾಗ್‌ಗಳನ್ನು ಒಳಗೊಂಡಿರುವ ಎಲ್ಲ ಲಕ್ಷಣಗಳಿವೆ.

ಟಾಟಾ ಸಫಾರಿ & ಹ್ಯಾರಿಯರ್ (Tata Safari & Harrier):

ಈ ಡಿಸೆಂಬರ್ 9ರಂದು ಸಫಾರಿ & ಹ್ಯಾರಿಯರ್ ಎಸ್‌ಯುವಿಗಳು ಹೊಸ ಎಂಜಿನ್‌ ಆಯ್ಕೆಯಲ್ಲಿ ಬಿಡುಗಡೆಯಾಗಲಿವೆ. ಇವುಗಳು 1.5-ಲೀಟರ್ ಟರ್ಬೊ ಪೆಟ್ರೋಲ್ ಪವರ್‌ಟ್ರೇನ್‌ನ್ನು ಪಡೆದಿರಲಿವೆ. ಅದು 170 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ ಪವರ್) ಮತ್ತು 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಬಲ್ಲದು. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.

Article Published On: Monday, November 17, 2025, 8:52 [IST]
English summary
New 5 mid size suvs launch soon sierra e vitara xev 9e safari and harrier
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+