Maruti Baleno: 6 ಏರ್‌ಬ್ಯಾಗ್‌ನ ಜನಪ್ರಿಯ ಮಾರುತಿ ಬಲೆನೊ ಕಾರಿನ ಬೆಲೆ.. ಮೈಲೇಜ್ & ವೈಶಿಷ್ಟ್ಯಗಳ ಕುರಿತ ವಿವರಗಳಿವು!
ಇತ್ತೀಚೆಗೆ ಮಾರುತಿ ಸುಜುಕಿ ಬಲೆನೊ (Maruti Suzuki Baleno) ಕಾರನ್ನು ನವೀಕರಿಸಿ ಬಿಡುಗಡೆಗೊಳಿಸಲಾಯಿತು. ಇದೊಂದು ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ಈ ಕಾರಿನ ಎಲ್ಲ ರೂಪಾಂತರಗಳನ್ನು (ವೇರಿಯೆಂಟ್) 6 ಏರ್‌ಬ್ಯಾಗ್‌ಗಳೊಂದಿಗೆ ಮೇಲ್ದರ್ಜೆರಿಸಲಾಗಿದೆ. ಅದಕ್ಕೆ ತಕಂತೆ ಬೆಲೆಯನ್ನು ಕೂಡ ಪರಿಷ್ಕರಣೆ ಮಾಡಲಾಗಿದೆ. ನಾವಿಲ್ಲಿ ನೂತನ ಬಲೆನೊ ಹ್ಯಾಚ್‌ಬ್ಯಾಕ್‌ನ ದರ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು (Price & Variants):
ಹೊಸ ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್ ಬೆಲೆ ಏರಿಕೆಯ ಹೊರತಾಗಿಯೂ ಕೈಗೆಟುಕುವ ಬೆಲೆಯಲ್ಲಿಯೇ ಲಭ್ಯವಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಇದು ಕನಿಷ್ಠ ರೂ.6.70 ಲಕ್ಷ ಹಾಗೂ ಗರಿಷ್ಠ 9.92 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಜಿಟಾ ಹಾಗೂ ಆಲ್ಪಾ ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colors):
ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಅದು ನೋಡುಗರನ್ನು ಸೆಳೆಯುವಂತಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಸಿಗ್ನೇಚರ್ ಎಲ್ಇಡಿ ಡಿಆರ್‌ಎಲ್‌ಗಳು, 'ಸಿ' ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು 15-ಇಂಚಿನ ಸ್ಟೀಲ್ ವೀಲ್‌ಗಳನ್ನು ಹೊಂದಿದೆ. ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಲಕ್ಸ್ ಬೀಜ್, ಒಪುಲೆಂಟ್ ರೆಡ್ & ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimensions):
ನೂತನ ಮಾರುತಿ ಸುಜುಕಿ ಬಲೆನೊ ಕೊಂಚ ಮಟ್ಟಿಗೆ ವಿಶಾಲ ಗಾತ್ರದಲ್ಲಿದೆ. 3990 ಎಂಎಂ ಉದ್ದ, 1745 ಎಂಎಂ ಅಗಲ ಹಾಗೂ 1500 ಎಂಎಂ ಎತ್ತರವಿದೆ. 170 ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2520 ಎಂಎಂ ಉದ್ದದ ವೀಲ್‌ಬೇಸ್‌ನ್ನು ಒಳಗೊಂಡಿದೆ. ಜೊತೆಗೆ ರೂಪಾಂತರಗಳನ್ನು ಅವಲಂಭಿಸಿ, 920 ರಿಂದ 955 ಕೆಜಿ ತೂಕವು ಇದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಇರರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾದ್ಯವಾಗುವಂತೆ 318 ಲೀಟರ್ ಸಾಮರ್ಥ್ಯವಿರುವ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance):
ಹೊಸ ಬಲೆನೊ 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 22 ರಿಂದ 30 ಕಿ.ಮೀವರೆಗೂ ಮೈಲೇಜ್ ಕೊಡುತ್ತದೆ. 37 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. ಹಾಗೆಯೇ 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 12.1 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ವೈಶಿಷ್ಟ್ಯಗಳು (Features):
ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ರೇರ್ ಎಸಿ ವೆಂಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕೋಲ್ಡ್ ಗ್ಲೋವ್‌ಬಾಕ್ಸ್, ಪವರ್ ಸ್ಟೀರಿಂಗ್, ಫಾಸ್ಟ್ ಚಾರ್ಜಿಂಗ್ ಯುಎಸ್‌ಬಿ ಪೋರ್ಟ್‌ಗಳು ಮತ್ತು ಕೀಲೆಸ್ ಎಂಟ್ರಿಯನ್ನು ಒಳಗೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ನೂತನ ಬಲೆನೊ ಹ್ಯಾಚ್‌ಬ್ಯಾಕ್ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಭಾರತ್ ಎನ್‌ಸಿಎಪಿಯಿಂದ 4-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆಯುವಲ್ಲಿಯೂ ಯಶಸ್ವಿಯಾಗಿದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ರೇರ್ ಪಾರ್ಕಿಂಗ್ ಸೇನಾರ್ಸ್ & 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications