Kia: ನಿನ್ನೆಯಷ್ಟೇ ಪರಿಚಯ.. ಕೊರಿಯಾ ಪವರ್ ತೋರಿಸಿದ ಕಿಯಾ, ಹೊಸ ಸೆಲ್ಟೋಸ್ SUV ಕುರಿತ ಪ್ರಮುಖಾಂಶಗಳು!
ನಿನ್ನೆ ಹೊಸ ತಲೆಮಾರಿನ 2026ರ ಕಿಯಾ ಸೆಲ್ಟೋಸ್ (Kia Seltos) ಎಸ್‌ಯುವಿಯನ್ನು ಪರಿಚಯಿಸಲಾಗಿದೆ. ಈ ಕಾರು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಇಂದಿನಿಂದ ಬುಕ್ಕಿಂಗ್ ಶುರುವಾಗಿದೆ. ಆಸಕ್ತ ಗ್ರಾಹಕರು ರೂ.25,000 ಮುಂಗಡ ಹಣವನ್ನು ಪಾವತಿಸಿ, ಆರ್ಡರ್ ಮಾಡಬಹುದು. ನಾವಿಲ್ಲಿ ಈ ಎಸ್‌ಯುವಿಯ ನಿರೀಕ್ಷಿತ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು (Price & Variants):
ನೂತನ 'ಕಿಯಾ ಸೆಲ್ಟೋಸ್' ಕಾರು ಸ್ಪರ್ಧಾತ್ಮಕ ದರದಲ್ಲಿ ಖರೀದಿಗೆ ಲಭ್ಯವಾಗಬಹುದು ಎನ್ನಲಾಗಿದೆ. ಜನವರಿ 2ರಂದು ಬೆಲೆಯನ್ನು ಘೋಷಣೆ ಮಾಡಲಾಗುತ್ತದೆ. ಈ ಕಾರು ರೂ.11 ಲಕ್ಷದಿಂದ ರೂ.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಹೆಚ್‌ಟಿಇ, ಹೆಚ್‌ಟಿಇ (ಒ), ಹೆಚ್‌ಟಿಕೆ, ಹೆಚ್‌ಟಿಕೆ (ಒ), ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ (ಎ), ಜಿಟಿಎಕ್ಸ್, ಜಿಟಿಎಕ್ಸ್ (ಎ) ಹಾಗೂ ಎಕ್ಸ್-ಲೈನ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colors):
ಈ ಕಾರಿನ ವಿನ್ಯಾಸವು ನವೀನವಾಗಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಬಂಪರ್, ಟೈಗರ್ ನೋಸ್ ಗ್ರಿಲ್, ಎಲ್ಇಡಿ ಪ್ರೊಜೆಕ್ಷನ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್-ಡೋರ್ ಹ್ಯಾಂಡಲ್‌ಗಳು ಹಾಗೂ 18-ಇಂಚಿನ ಕ್ರಿಸ್ಟಲ್ ಕಟ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಮಾರ್ನಿಂಗ್ ಹೇಸ್, ಮ್ಯಾಗ್ಮಾ ರೆಡ್, ಫ್ರಾಸ್ಟ್ ಬ್ಲೂ ಮತ್ತು ಐವರಿ ಸಿಲ್ವರ್ ಗ್ಲೋಸ್, ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ ಮತ್ತು ಅರೋರಾ ಬ್ಲ್ಯಾಕ್ ಪರ್ಲ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimensions):
ಇದು ಸಾಕಷ್ಟು ವಿಶಾಲ ಗಾತ್ರದಲ್ಲಿರುವ ಕಾರಾಗಿದೆ. ಬರೋಬ್ಬರಿ 4,460 ಎಂಎಂ ಉದ್ದ, 1,830 ಎಂಎಂ ಅಗಲ ಹಾಗೂ 1,635 ಎಂಎಂ ಎತ್ತರವಿದೆ. ಜೊತೆಗೆ 2,690 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಪಡೆದಿರಬಹುದು ಎಂದು ಹೇಳಲಾಗಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಹೊಸ 'ಕಿಯಾ ಸೆಲ್ಟೋಸ್' ಎಸ್‌ಯುವಿಯು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 447 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.
ಕಾರ್ಯಕ್ಷಮತೆ (Performance):
ಈ ಕಾರು ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, 7-ಸ್ಪೀಡ್ ಡಿಸಿಟಿ (ಡುಯೆಲ್ ಕ್ಲಚ್ ಟ್ರಾಸ್ಮಿಷನ್) ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.

ಒಳಾಂಗಣ & ವೈಶಿಷ್ಟ್ಯಗಳು (Interior & Features):
ಇದರ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ಸ್ ಡಿಸ್‌ಪ್ಲೇಗಾಗಿ 12.3-ಇಂಚಿನ ಡುಯಲ್ ಸ್ಕ್ರೀನ್ ಸೆಟಪ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, 64-ಕಲರ್ ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ನೂತನ 'ಕಿಯಾ ಸೆಲ್ಟೋಸ್' ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಡಿಸೆಂಟ್ ಕಂಟ್ರೋಲ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications








