kia: ಶುಭ ಶುಕ್ರವಾರದಂದು ಹೊಸ ಕಿಯಾ ಕಾರು ಬಿಡುಗಡೆ.. 5-ಸೀಟರ್, ಬೆಲೆ ಎಷ್ಟು.. ವಿಶೇಷತೆಗಳೇನು?
ಹೊಸ ತಲೆಮಾರಿನ ಕಿಯಾ ಸೆಲ್ಟೋಸ್ (Kia Seltos) ಎಸ್‌ಯುವಿ, ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈ ಕಾರಿನ ಬರುವಿಕೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ಜನವರಿ 2ರಂದು (ಶುಕ್ರವಾರ) ನೂತನ 'ಸೆಲ್ಟೋಸ್'ನ್ನು ಅದ್ದೂರಿಯಾಗಿಯೂ ಮಾರಾಟಕ್ಕೆ ತರಲಾಗುತ್ತದೆ. ಈಚೆಗೆ ಹೈದರಾಬಾದ್‌ನಲ್ಲಿ ಜರುಗಿದ ಸಮಾರಂಭದಲ್ಲಿ ಇದೇ ಕಾರನ್ನು ಪರಿಚಯಿಸಲಾಗಿತ್ತು. ಅಲ್ಲಿ ಬೆಲೆ ಹೊರತುಪಡಿಸಿ, ಉಳಿದೆಲ್ಲ ವಿವರಗಳನ್ನು ಬಹಿರಂಗಪಡಿಸಲಾಯಿತು.
ನವೀನ 'ಕಿಯಾ ಸೆಲ್ಟೋಸ್' ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ಸಾಧ್ಯತೆಯಿದೆ. ರೂ.10.99 ಲಕ್ಷದಿಂದ ರೂ.20.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಈಗಾಗಲೇ ಬುಕ್ಕಿಂಗ್ ಕೂಡ ಶುರುವಾಗಿದೆ. ಆಸಕ್ತರು ರೂ.25,000 ಮುಂಗಡ ಹಣವನ್ನು ಪಾವತಿಸಿ ಕಾಯ್ದಿರಿಸಬಹುದು. ಈ ಕಾರು ಹೆಚ್‌ಟಿಇ, ಹೆಚ್‌ಟಿಇ (ಒ), ಹೆಚ್‌ಟಿಕೆ, ಹೆಚ್‌ಟಿಕೆ (ಒ), ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ (ಎ), ಜಿಟಿಎಕ್ಸ್ ಮತ್ತು ಜಿಟಿಎಕ್ಸ್ (ಎ) ಎಂಬ ರೂಪಾಂತರಗಳೊಂದಿಗೂ ಲಭ್ಯವಾಗಲಿದೆ.

ಹೊಚ್ಚ ಹೊಸ 'ಸೆಲ್ಟೋಸ್' ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಪ್ರೊಜೆಕ್ಷನ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್-ಡೋರ್ ಹ್ಯಾಂಡಲ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಈ ಕಾರು ಹೆಚ್ಚು ವಿಶಾಲವಾಗಿದ್ದು, 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,690 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಇದು ಮಾರ್ನಿಂಗ್ ಹೇಸ್, ಮ್ಯಾಗ್ಮಾ ರೆಡ್, ಫ್ರಾಸ್ಟ್ ಬ್ಲೂ, ಐವರಿ ಸಿಲ್ವರ್ ಗ್ಲೋಸ್, ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ ಹಾಗೂ ಅರೋರಾ ಬ್ಲ್ಯಾಕ್ ಪರ್ಲ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು ಹೆಚ್ಚಿನ ಲಗೇಜ್ ಕೊಂಡೊಯ್ಯಲು 447 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈಗಾಗಲೇ, ನೂತನ 'ಕಿಯಾ ಸೆಲ್ಟೋಸ್' ತಯಾರಿಕೆಯೂ ಶುರುವಾಗಿದೆ. ಇದು ಬಲಿಷ್ಠವಾದ ಮೂರು ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 115 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 144 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.
ಇನ್ನೊಂದು 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 160 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 253 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್, 116 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 250 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.
ಈ ಕಾರು 17 ರಿಂದ 20 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ಸ್ ಡಿಸ್‌ಪ್ಲೇಗಾಗಿ 12.3-ಇಂಚು ಅಳತೆಯುಳ್ಳ ಡುಯಲ್ ಸ್ಕ್ರೀನ್ ಸೆಟಪ್, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಪನೋರಮಿಕ್ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಸ 'ಕಿಯಾ ಸೆಲ್ಟೋಸ್' ಸುರಕ್ಷತೆಯಿಂದಲೂ ಮನೆ ಮಾತಾಗಿದ್ದು, ಪ್ರಯಾಣಿಕರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು 360-ಡಿಗ್ರಿ ಕ್ಯಾಮೆರಾದಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.


Click it and Unblock the Notifications








