Renault Duster: ಬ್ಯಾಡ್ ನ್ಯೂಸ್.. ಈ ವರ್ಷ ಲಕ್ಸುರಿ ಫೀಚರ್ಸ್‌ನ 'ರೆನಾಲ್ಟ್ ಡಸ್ಟರ್' ಕಾರು ಬಿಡುಗಡೆಯಾಗಲ್ಲ!

ಫ್ರಾನ್ಸ್ ಮೂಲದ ರೆನಾಲ್ಟ್ (Renault) ಪ್ರಮುಖ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಕ್ವಿಡ್, ಕಿಗರ್ ಹಾಗೂ ಟ್ರೈಬರ್ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿವೆ. ಕೆಲವೇ ದಿನಗಳ ಹಿಂದೆ, ನೂತನ 'ಡಸ್ಟರ್' ಎಸ್‌ಯುವಿಯನ್ನು ಮತ್ತೆ ಬಿಡುಗಡೆಗೊಳಿಸಲು ಕಂಪನಿಯು ತಯಾರಿ ನಡೆಸುತ್ತಿದೆ ಎಂದು ವರದಿಯಾಗಿತ್ತು. ಸದ್ಯ, ಕಾರಿನ ಕುರಿತಂತೆ ಮಹತ್ವದ ಮಾಹಿತಿಯೊಂದು ಲಭ್ಯವಾಗಿದೆ.

ಹೊಸ ತಲೆಮಾರಿನ ರೆನಾಲ್ಟ್ ಡಸ್ಟರ್ (New Generation Renault Duster) ಎಸ್‌ಯುವಿಯನ್ನು ಇದೇ ವರ್ಷದ (2025) ದೀಪಾವಳಿ ಆಸುಪಾನಲ್ಲಿ ಪರಿಚಯಿಸಬಹುದು ಎಂಬ ನಿರೀಕ್ಷೆಯಿತ್ತು. ಇದೀಗ, ಈ ನೂತನ ಕಾರಿನ ಬಿಡುಗಡೆಯನ್ನು ಏಕಾಏಕಿ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ. ಅದಕ್ಕೆ ಸಂಬಂಧಿಸಿದ ಯಾವುದೇ ಕಾರಣವನ್ನು ಕಂಪನಿಯು ಬಹಿರಂಗಪಡಿಸಿಲ್ಲ.

New Generation Renault Duster Not Launch This Year In India Postpone 2026 Details

ಇತ್ತೀಚೆಗೆ ರೈಟ್ ಹ್ಯಾಂಡ್ ಡ್ರೈವ್ (ಆರ್‌ಹೆಚ್‌ಡಿ) ಆಯ್ಕೆಯಿರುವ 'ರೆನಾಲ್ಟ್ ಡಸ್ಟರ್' ಕಾರನ್ನು ದಕ್ಷಿಣ ಆಫ್ರಿಕಾದಲ್ಲಿ ಅನಾವರಣ ಮಾಡಲಾಗಿತ್ತು. ಭಾರತದಲ್ಲಿಯೂ ಇದೇ ರೀತಿಯ ಡ್ರೈವಿಂಗ್ ವ್ಯವಸ್ಥೆ ಹೊಂದಿರುವ ಕಾರುಗಳನ್ನು ಮಾರಾಟಗೊಳಿಸುವ ಹಿನ್ನೆಲೆ, ಆದಷ್ಟು ಬೇಗ ಈ ಕಾರು ಮಾರಾಟಕ್ಕೆ ಬರಲಿದೆ ಎನ್ನಲಾಗಿತ್ತು. ಈಗ ಆ ನೀರಿಕ್ಷೆ ಕೂಡ ಹುಸಿಯಾಗಿದೆ ಎಂದು ಹೇಳಬಹುದು.

ದ.ಆಫ್ರಿಕಾದಲ್ಲಿ ಪ್ರದರ್ಶಿಸಲಾದ ಹೊಚ್ಚ ಹೊಸ 'ರೆನಾಲ್ಟ್ ಡಸ್ಟರ್' ಎಸ್‌ಯುವಿ ಹೊರಭಾಗದಲ್ಲಿ ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಬೃಹತ್ ಗಾತ್ರದ ಗ್ರಿಲ್, ಅತ್ಯುತ್ತಮವಾಗಿರುವ ಹೆಡ್‌ಲೈಟ್‌ಗಳು, ಇಂಗ್ಲಿಷ್ ಭಾಷೆಯ 'ವೈ' - ಅಕ್ಷರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು, ಸರ್ಕ್ಯುಲರ್ ಫಾಗ್ ಲೈಟ್‌ಗಳು, ಟೈಲ್‌ಲೈಟ್‌ಗಳು ಮತ್ತು ರೂಫ್ ಸ್ಪಾಯ್ಲರ್ ಅನ್ನು ಒಳಗೊಂಡಿದೆ.

New Generation Renault Duster Not Launch This Year In India Postpone 2026 Details

ಈ ಕಾರು ಹೆಚ್ಚು ವಿಶಾಲವಾಗಿದೆ. 4,343 ಎಂಎಂ ಉದ್ದ, 1,813 ಎಂಎಂ ಅಗಲ, 1,661 ಎಂಎಂ ಎತ್ತರ ಮತ್ತು 2,657 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಟಚ್‌ಸ್ಕ್ರೀನ್‌ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10 - ಇಂಚು), ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ (7 - ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್ ಹಾಗೂ ನಾಲ್ಕು ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ನೂತನ ರೆನಾಲ್ಟ್ ಡಸ್ಟರ್ ಎಸ್‌ಯುವಿ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ದೂರದ ಊರುಗಳಿಗೆ ತೆರಳಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 472 ಲೀಟರ್‌ನ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಆದರೆ, ಪವರ್‌ಟ್ರೇನ್ ಬಗ್ಗೆ ಯಾವುದೇ ವಿವರಗಳು ದೊರೆತ್ತಿಲ್ಲ.

New Generation Renault Duster Not Launch This Year In India Postpone 2026 Details

ಇನ್ನು, ಮುಂದಿನ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಈ ಹೊಚ್ಚ ಹೊಸ ರೆನಾಲ್ಟ್ ಡಸ್ಟರ್ ಎಸ್‌ಯುವಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಇದು ರೂ.9 ಲಕ್ಷದಿಂದ ರೂ.10 ಲಕ್ಷ ಆರಂಭಿಕ ದರವನ್ನು ಪಡೆದಿರಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ನೂತನ ಕಾರಿನ ಆಗಮನಕ್ಕೆ ಗ್ರಾಹಕರು ಕೂಡ ಕಾದು ಕುಳಿತಿರುವುದು ಮಾತ್ರ ಸುಳ್ಳಲ್ಲ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, January 7, 2025, 17:09 [IST]
English summary
New generation renault duster not launch this year in india postpone 2026 details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+