7-ಸೀಟರ್.. ಸದ್ದಿಲ್ಲದೇ ಆನೆ ಗಾತ್ರದ ಈ Toyota ಕಾರಿಗೆ ಹೊಸ ರೂಪ, ಬಿಡುಗಡೆ ಯಾವಾಗ.. ಬೆಲೆ ಎಷ್ಟಿರಲಿದೆ?
ಟೊಯೊಟಾ ಫಾರ್ಚುನರ್ (Toyota Fortuner) ಫುಲ್ ಸೈಜ್ ಎಸ್‌ಯುವಿಯಾಗಿದ್ದು, ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸದ್ದಿಲ್ಲದೇ ಕಂಪನಿಯು 2026ರ ದ್ವಿತೀಯಾರ್ಧದಲ್ಲಿ ಹೊಸ ತಲೆಮಾರಿನ 'ಫಾರ್ಚೂನರ್'ನ್ನು ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಇದು ಹಿಲಕ್ಸ್ ಪಿಕ್ಅಪ್ ಟ್ರಕ್‌ನ್ನು ಆಧಾರಿಸಿರಲಿದೆ ಎನ್ನಲಾಗಿದೆ. ಬನ್ನಿ, ನೂತನ ಕಾರಿನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಯೋಣ.
ಮುಂಬರಲಿರುವ ಟೊಯೊಟಾ ಫಾರ್ಚುನರ್ ಎಸ್‌ಯುವಿಯು ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿರುವ ನಿರೀಕ್ಷೆಯಿದೆ. ಬಹುಮುಖ್ಯವಾಗಿ ನವೀನವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿರಲಿದೆ ಎನ್ನಲಾಗಿದೆ. ಜೊತೆಗೆ ಪ್ಲಾಟಿನಂ ವೈಟ್ ಪರ್ಲ್, ಸ್ಪಾರ್ಕ್ಲಿಂಗ್ ಬ್ಲ್ಯಾಕ್ ಕ್ರಿಸ್ಟಲ್ ಶೈನ್ ಮತ್ತು ಫ್ಯಾಂಟಮ್ ಬ್ರೌನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗಬಹುದು ಎಂದು ಅಂದಾಜಿಸಲಾಗಿದೆ.

ನೂತನ ಕಾರಿನ ಗಾತ್ರದಲ್ಲೂ ಯಾವುದೇ ವ್ಯತ್ಯಾಸವಿರುವುದಿಲ್ಲ ಎಂದು ಹೇಳಲಾಗಿದೆ. ಇದು 4795 ಎಂಎಂ ಉದ್ದ, 1855 ಎಂಎಂ ಅಗಲ ಹಾಗೂ 1835 ಎಂಎಂ ಎತ್ತರವು ಇರಲಿದೆ. 225 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2745 ವೀಲ್‌ಬೇಸ್‌ನ್ನು ಒಳಗೊಂಡಿರಲಿದ್ದು, 7-ಆಸನಗಳನ್ನು ಪಡೆದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 296 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ.
ಟೊಯೊಟಾ ಫಾರ್ಚುನರ್ ಎಸ್‌ಯುವಿಯು ಶಕ್ತಿಯುತ ಪವರ್‌ಟ್ರೇನ್‌ನ್ನು ಹೊಂದಿರಲಿದೆ ಎನ್ನಲಾಗಿದೆ. ಇದರ 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 245 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಲಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿರಲಿದೆ ಎಂದು ಹೇಳಲಾಗಿದೆ.

ಮತ್ತೊಂದು 2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್, 204 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 500 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಿದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ ಎಂದು ಎನ್ನಲಾಗಿದೆ. ಈ ಕಾರು 11 ಕಿ.ಮೀ ವರೆಗೆ ಮೈಲೇಜ್ ನೀಡಬಹುದು. ಇದರೊಂದಿಗೆ 2ಡಬ್ಲ್ಯೂಡಿ (ಟೂ ವೀಲ್ ಡ್ರೈವ್) ಮತ್ತು 4ಡಬ್ಲ್ಯೂಡಿ (ಫೋರ್ ವೀಲ್ ಡ್ರೈವ್) ಟೆಕ್ನಾಲಜಿಯನ್ನು ಹೊಂದಿರುವ ಸಾಧ್ಯತೆಯಿದೆ.
ನೂತನ ಟೊಯೊಟಾ ಫಾರ್ಚುನರ್ ಎಸ್‌ಯುವಿ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿರಲಿದೆ. 8-ಇಂಚಿರುವ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕನೆಕ್ಟ್ಡ್ ಕಾರ್ ಟೆಕ್, 6 ಸ್ಪೀಕರ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಚಾರ್ಜರ್, ಕಿಕ್-ಟು-ಓಪನ್ ಪವರ್ಡ್ ಟೈಲ್‌ಗೇಟ್, ಡುಯಲ್ - ಜೋನ್ ಎಸಿ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಬಹುದು ಎನ್ನಲಾಗಿದೆ.

ಇದು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರಲಿದ್ದು, ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲಿದೆ. ಅದಕ್ಕಾಗಿ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟ್ರಾಕ್ಷನ್ ಕಂಟ್ರೋಲ್, ಹಿಲ್-ಸ್ಟಾರ್ಟ್ ಅಸಿಸ್ಟ್ ಹಾಗೂ ಡೌನ್‌ಹಿಲ್ ಅಸಿಸ್ಟ್ ಕಂಟ್ರೋಲ್ ಸೇರಿದಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.
ಹೊಸ ಟೊಯೊಟಾ ಫಾರ್ಚುನರ್ ಎಸ್‌ಯುವಿ ಕೊಂಚ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ರೂಪಾಂತರಗಳನ್ನು ಅವಲಂಭಿಸಿ, ರೂ.35 ಲಕ್ಷದಿಂದ ರೂ.50 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಇದಕ್ಕೆ ಎಂಜಿ ಗ್ಲೋಸ್ಟರ್, ಜೀಪ್ ಮೆರಿಡಿಯನ್ ಹಾಗೂ ಸ್ಕೋಡಾ ಕೊಡಿಯಾಕ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.


Click it and Unblock the Notifications








