Toyota: ಇದೇ ಬಲಭೀಮ.. ಸೋಮವಾರ ಹೊಸ ಟೊಯೊಟಾ ಕಾರು ಅನಾವರಣ, ಯಾವುದು?

ಹೊಸ ತಲೆಮಾರಿನ ಟೊಯೊಟಾ ಹಿಲಕ್ಸ್ (New Generation Toyota Hilux) ಪಿಕ್ಅಪ್ ಟ್ರಕ್‌ ಅನಾವರಣಕ್ಕೆ ದಿನಗಣನೆ ಶುರುವಾಗಿದೆ. ಈ ಕಾರಿನ ಬರುವಿಕೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ಜಾಗತಿಕವಾಗಿ ಮುಂದಿನ ಸೋಮವಾರವೇ ನೂತನ 'ಹಿಲಕ್ಸ್' ಅದ್ದೂರಿಯಾಗಿ ಅನಾವರಣಗೊಳ್ಳಲಿದೆ. ಸದ್ಯ, ಇದೇ ಪಿಕ್ಅಪ್ ಟ್ರಕ್‌ನ ವಿನ್ಯಾಸದ ಕುರಿತಂತೆ ಬೆಳಕು ಚೆಲ್ಲಬಲ್ಲ ಟೀಸರ್‌ನ್ನು ಬಿಡುಗಡೆಗೊಳಿಸಲಾಗಿದೆ. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲೂ ಹರಿದಾಡುತ್ತಿದೆ.

ಈ ಟೀಸರ್‌ನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಹೊಚ್ಚ ಹೊಸ 'ಟೊಯೊಟಾ ಹಿಲಕ್ಸ್' ಅಗ್ರೆಸಿವ್ ಲುಕ್ ಹೊಂದಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಇದರ ಸ್ಟೈಲಿಂಗ್ ಅಂಶಗಳು ರಿಫ್ರೆಶ್ ಆಗಿವೆ. ಅತ್ಯುತ್ತಮವಾದ ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, 'ಸಿ' ಆಕಾರಕ್ಕೆ ಹೋಲಿಕೆಯಾಬಲ್ಲ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಬ್ಲ್ಯಾಕ್ (ಕಪ್ಪು) ಕಲರ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಜೊತೆಗೆ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುವ ನಿರೀಕ್ಷೆಯಿದೆ.

New Generation Toyota Hilux Teased November 10 Unveiled Details

ಹೊಚ್ಚ ಹೊಸ 'ಟೊಯೊಟಾ ಹಿಲಕ್ಸ್' ಪಿಕ್ಅಪ್ ಟ್ರಕ್‌ ಹೆಚ್ಚು ವಿಶಾಲವಾಗಿಯೂ ಇರಬಹುದು. ಸದ್ಯ ದೇಶೀಯವಾಗಿ ಲಭ್ಯವಿರುವ 'ಹಿಲಕ್ಸ್' 5,325 ಮಿ.ಮೀ ಉದ್ದ, 1,855 ಮಿ.ಮೀ ಅಗಲ ಮತ್ತು 1,815 ಮಿ.ಮೀ ಎತ್ತರವಿದೆ. 220 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 3085 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ನೂತನ 'ಟೊಯೊಟಾ ಹಿಲಕ್ಸ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಲು ಸಾಧ್ಯವಾಗಲಿದೆ. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 435 ಲೀಟರ್‌ಗೂ ಅಧಿಕ ಬೂಟ್ ಸ್ಪೇಸ್‌ನ್ನು ಪಡೆದಿರಬಹುದು ಎನ್ನಲಾಗಿದೆ.

New Generation Toyota Hilux Teased November 10 Unveiled Details

ಮುಂಬರಲಿರುವ ಈ 'ಹಿಲಕ್ಸ್' ಪಿಕ್ಅಪ್ ಟ್ರಕ್‌ ವಿವಿಧ ಪವರ್‌ಟ್ರೇನ್‌ ಆಯ್ಕೆಯಲ್ಲಿಯೂ ಮಾರಾಟಕ್ಕೆ ಬರಬಹುದು ಎಂದು ಹೇಳಲಾಗಿದೆ. ಪ್ರಸ್ತುತ ಭಾರತದಲ್ಲಿ ಸಿಗುವ 'ಟೊಯೊಟಾ ಹಿಲಕ್ಸ್' 2.8-ಲೀಟರ್ ಮೈಲ್ಡ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 204 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 500 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 12 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ಇದು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ. ಬಹುಮುಖ್ಯವಾಗಿ 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಡುಯಲ್ ಝೋನ್ ಆಟೋ ಕ್ಲೇಮೇಟ್ ಕಂಟ್ರೋಲ್, 6-ಸ್ಪೀಕರ್ ಸೌಂಡ್ ಸಿಸ್ಟಮ್ ಹಾಗೂ ಡುಯಲ್ ಜೋನ್ ಎಸಿಯನ್ನು ಒಳಗೊಂಡಿರುವ ನಿರೀಕ್ಷೆಯಿದೆ.

ಹೊಸ ತಲೆಮಾರಿನ 'ಟೊಯೊಟಾ ಹಿಲಕ್ಸ್' ಸುರಕ್ಷತೆಗೂ ಹೆಸರುವಾಸಿಯಾಗಿರಲಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುವ ಸಾಧ್ಯತೆಯಿದೆ. ಅದಕ್ಕಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹೆಚ್ಎಸಿ (ಹಿಲ್ ಅಸಿಸ್ಟ್ ಕಂಟ್ರೋಲ್), ಬ್ರೇಕ್ ಅಸಿಸ್ಟ್, ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿರಬಹುದು ಎಂದು ಹೇಳಲಾಗಿದೆ.

ನೂತನ 'ಟೊಯೊಟಾ ಹಿಲಕ್ಸ್' ಪಿಕ್ಅಪ್ ಟ್ರಕ್‌ ನವೆಂಬರ್ 10 ರಂದು ಥೈಲ್ಯಾಂಡ್ ಮೋಟಾರ್ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿದೆ. ಆ ಬಳಿಕ, 2026ರ ಮಧ್ಯಭಾಗದಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. 2027ರಲ್ಲಿ ದೇಶೀಯವಾಗಿ ಮಾರಾಟಕ್ಕೆ ಬರಬಹುದು ಎನ್ನಲಾಗಿದೆ. ಕನಿಷ್ಠ ರೂ.35 ಲಕ್ಷ ಹಾಗೂ ಗರಿಷ್ಠ ರೂ 45 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೂ ದೊರೆಯಬಹುದು ಎಂದು ಅಂದಾಜಿಸಲಾಗಿದೆ.

Article Published On: Thursday, November 6, 2025, 13:20 [IST]
English summary
New generation toyota hilux teased november 10 unveiled details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+