Toyota: ಇದೇ ರಸ್ತೆ ಮೇಲಿನ ಬಲಭೀಮ.. ಹೊಸ ಟೊಯೊಟಾ ಕಾರು ಅನಾವರಣ, ಯಾವುದು?
ಜಾಗತಿಕವಾಗಿ ಸೋಮವಾರ 9ನೇ ತಲೆಮಾರಿನ ಹೊಚ್ಚ ಹೊಸ ಟೊಯೊಟಾ ಹಿಲಕ್ಸ್ (Toyota Hilux) ಪಿಕ್ಅಪ್ ಟ್ರಕ್ ಆದ್ದೂರಿಯಾಗಿ ಅನಾವರಣಗೊಂಡಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಬಲಿಷ್ಠವಾದ ಮೈಲ್ಡ್ ಹೈಬ್ರಿಡ್ ಹಾಗೂ ಎಲೆಕ್ಟ್ರಿಕ್ ಪವರ್‌ಟ್ರೇನ್‌ನ್ನು ಹೊಂದಿದೆ. 2025ರ ಡಿಸೆಂಬರ್‌ನಲ್ಲಿ ಉತ್ಪಾದನೆ ಶುರುವಾಗಲಿದೆ. 2026ರಲ್ಲಿ ಮೊದಲಿಗೆ ಯುಕೆ (ಯುನೈಟೆಡ್ ಕಿಂಗ್‌ಡಮ್) ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಆ ನಂತರದಲ್ಲಿ ಭಾರತದಲ್ಲೂ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ.
ನೂತನ 'ಟೊಯೊಟಾ ಹಿಲಕ್ಸ್' ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಹನಿಕೋಂಬ್ ಗ್ರಿಲ್, ಆಲ್-ಬ್ಲ್ಯಾಕ್ ಬಂಪರ್, ಉತ್ತಮವಾದ ಸ್ಲಿಮ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಬೃಹದಾಕಾದ 'ಟೊಯೊಟಾ' ಬ್ಯಾಡ್ಜಿಂಗ್, ಎಲ್‌ಇಡಿ ಫಾಗ್ ಲ್ಯಾಂಪ್‌ಗಳು, 'ಸಿ' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಟೈಲ್‌ಲೈಟ್‌ಗಳು ಹಾಗೂ ಹೈ-ಸ್ಟಾಪ್ ಬ್ರೇಕ್ ಲೈಟ್‌ಗಳನ್ನು ಒಳಗೊಂಡಿದೆ. ವಿಶೇಷವಾಗಿ ಎಲೆಕ್ಟ್ರಿಕ್ ಚಾಲಿತ ಮಾಡೆಲ್, ಮುಂಭಾಗದ ಫೆಂಡರ್‌ನಲ್ಲಿ 'ಚಾರ್ಜಿಂಗ್ ಫ್ಲಾಪ್'ನ್ನು ಹೊಂದಿದೆ.

ಈ ಪಿಕ್ಅಪ್ ಟ್ರಕ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ನವೀನವಾದ ಡ್ಯಾಶ್‌ಬೋರ್ಡ್‌ನ್ನು ಪಡೆದಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 3-ಸ್ಪೋಕ್ ಸ್ಟೀರಿಂಗ್ ವೀಲ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.
ಹೊಸ 'ಟೊಯೊಟಾ ಹಿಲಕ್ಸ್' 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. ಇದು ಐಎಂವಿ (IMV) ಪ್ಲಾಟ್‌ಫಾರ್ಮ್‌ನ್ನು ಆಧರಿಸಿರಲಿದೆ. ಹೆಚ್ಚು ಶಕ್ತಿಶಾಲಿಯಾದ 2.7-ಲೀಟರ್ ಪೆಟ್ರೋಲ್ ಹಾಗೂ 2.8-ಲೀಟರ್ ಮೈಲ್ಡ್-ಹೈಬ್ರಿಡ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ.

ಅದೇ ರೀತಿಯಲ್ಲಿ 'ಹಿಲಕ್ಸ್' ಎಲೆಕ್ಟ್ರಿಕ್, 59.2 ಕಿಲೋ ವ್ಯಾಟ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಡುಯಲ್ ಎಲೆಕ್ಟ್ರಿಕ್ ಮೋಟಾರ್‌ನ್ನು ಹೊಂದಿದೆ. ಎಡಬ್ಲ್ಯೂಡಿ (ಆಲ್ ವೀಲ್ ಡ್ರೈವ್) ಟೆಕ್ನಾಲಜಿ ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 240 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಎಂದು ಕಂಪನಿಯು ಹೇಳಿಕೊಂಡಿದೆ.
ಸದ್ಯ ದೇಶೀಯವಾಗಿ ಖರೀದಿಗೆ ದೊರೆಯುವ 'ಟೊಯೊಟಾ ಹಿಲಕ್ಸ್' ವಿಶೇಷತೆಗಳೇನು:
ಈ ಪಿಕ್ಅಪ್ ಟ್ರಕ್ ರೂ.28.02 ಲಕ್ಷದಿಂದ ರೂ.35.37 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಆಟಿಟ್ಯೂಡ್ ಬ್ಲ್ಯಾಕ್, ಎಮೋಶನಲ್ ರೆಡ್, ಗ್ರೇ ಮೆಟಾಲಿಕ್, ಸೂಪರ್ ವೈಟ್ ಹಾಗೂ ವೈಟ್ ಪರ್ಲ್ ಕ್ರಿಸ್ಟಲ್ ಶೈನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 220 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 3085 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 2,340 ಕೆಜಿ ತೂಕವಿದೆ.

ಇದು 2.8-ಲೀಟರ್ ಮೈಲ್ಡ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 204 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 500 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 12 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 185 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 13 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ನೂತನ 'ಟೊಯೊಟಾ ಹಿಲಕ್ಸ್' 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಡುಯಲ್ ಝೋನ್ ಆಟೋ ಕ್ಲೇಮೇಟ್ ಕಂಟ್ರೋಲ್, ಡುಯಲ್ - ಜೋನ್ ಎಸಿ, ಕೂಲ್ಡ್ ಗ್ಲೋವ್‌ಬಾಕ್ಸ್ ಹಾಗೂ 6-ಸ್ಪೀಕರ್ ಸೌಂಡ್ ಸಿಸ್ಟಮ್‌ನ್ನು ಒಳಗೊಂಡಿದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು ರಿವರ್ಸಿಂಗ್ ಕ್ಯಾಮೆರಾಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








