19 Km ಮೈಲೇಜ್.. 5-ಸೀಟರ್, ಬಿಡುಗಡೆಯಾಗಿ ಕೇವಲ 2 ತಿಂಗಳು, ಹೋಂಡಾ ಅಮೇಜ್ ಕಾರಿನ ಬೆಲೆ ಏರಿಕೆ.. ಎಷ್ಟು?
ಹೋಂಡಾ ಕಾರ್ಸ್ ಇಂಡಿಯಾ (Honda Cars India) ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯವಾಗಿ ಕಂಪನಿಯು ಮಾರುತಿ ಡಿಜೈರ್ (Maruti Dzire) ಕಾರಿಗೆ ದೊಡ್ಡ ಮಟ್ಟದಲ್ಲಿ ಸ್ಪರ್ಧೆಯೊಡ್ಡಲು, ಕಳೆದ ಡಿಸೆಂಬರ್‌ನಲ್ಲಿ ಹೊಚ್ಚ ಹೊಸ ಅಮೇಜ್ (Amaze) ಸೆಡಾನ್‌ನ್ನು ಮಾರಾಟಕ್ಕೆ ತಂದಿತ್ತು. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸದ್ಯ, ಹೋಂಡಾ ಕಂಪನಿ ಈ ಅಮೇಜ್ ಕಾರಿನ ಬೆಲೆಯನ್ನು ಏರಿಕೆ ಮಾಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ನೂತನ ಹೋಂಡಾ ಅಮೇಜ್ (Honda Amaze) ಸೆಡಾನ್, ಇಲ್ಲಿಯವರೆಗೂ ರೂ.8 ಲಕ್ಷದಿಂದ ರೂ.10.90 ಲಕ್ಷ (ಎಕ್ಸ್-ಶೋರೂಂ) ಪರಿಚಯಾತ್ಮಕ ಬೆಲೆಯನ್ನು ಮಾತ್ರ ಹೊಂದಿತ್ತು. ಈ ದರ ಜನವರಿ 31 ರವರೆಗೆ ಮಾತ್ರ ಮಾನ್ಯವಾಗಿತ್ತು. ಪ್ರಸ್ತುತ ಈ ಆಫರ್ ಮುಕ್ತಾಯಗೊಂಡಿದ್ದು, ಹೊಸ ಅಮೇಜ್ ಸೆಡಾನ್ ಬೆಲೆ ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ, ರೂ.10,000 ರಿಂದ ರೂ.30,000 ವರೆಗೆ ಹೆಚ್ಚಳಗೊಂಡಿದೆ.

ದರ ಪರಿಷ್ಕರಣೆಯ ನಂತರ, ಹೊಸ ಹೋಂಡಾ ಅಮೇಜ್ ಸೆಡಾನ್, ಕನಿಷ್ಠ ರೂ. 8.10 ಲಕ್ಷ ಹಾಗೂ ಗರಿಷ್ಠ ರೂ.11.20 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. ವಿ, ವಿಎಕ್ಸ್ ಮತ್ತು ಝಡ್ಎಕ್ಸ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ. ಅಬ್ಸಿಡಿಯನ್ ಬ್ಲೂ, ರೇಡಿಯಂಟ್ ರೆಡ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್, ಗೋಲ್ಡನ್ ಬ್ರೌನ್ ಮೆಟಾಲಿಕ್, ಮೆಟಿಯೊರಾಯ್ಡ್ ಗ್ರೇ ಮೆಟಾಲಿಕ್ ಹಾಗೂ ಲೂನಾ ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳನ್ನು ಪಡೆದಿದೆ.
ಈ ಕಾರು, ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 110 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. ಸರಿ ಸುಮಾರು 18.65 ರಿಂದ 19.46 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಸೆಡಾನ್ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್-ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಇದರಲ್ಲಿ 5 ಆಸನಗಳಿದ್ದು, ಲಗೇಜ್ ತೆಗೆದುಕೊಂಡು ಹೋಗಲು 416 ರಿಂದ 420 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಒಳಗೊಂಡಿದೆ.
ಈ ಹೊಸ ಕಾರು ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋಮೆಟಿಕ್ ಎಸಿ ವೈರ್‌ಲೆಸ್ ಫೋನ್ ಚಾರ್ಜರ್, 3-ಸ್ಪೋಕ್ ಸ್ಟೀರಿಂಗ್ ವೀಲ್ ಹಾಗೂ ಪ್ಯಾಡಲ್ ಶಿಫ್ಟರ್‌ಗಳನ್ನು ಪಡೆದಿದೆ.

ನೂತನ ಹೋಂಡಾ ಅಮೇಜ್ ಸೆಡಾನ್ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್ ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಸ್ಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








