Hyundai: ಶೋರೂಂಗೆ ಬಂದೇ ಬಿಡ್ತು ಹೊಸ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು, 17.99 ಲಕ್ಷ.. 473 ಕಿ.ಮೀ ರೇಂಜ್!
ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India), ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಶುಕ್ರವಾರ ಹೊಚ್ಚ ಹೊಸ ಕ್ರೆಟಾ ಎಲೆಕ್ಟ್ರಿಕ್ (Creta Electric) ಕಾರನ್ನು ಆದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಈ ಕಾರು, ಅಧಿಕೃತವಾಗಿ ಮಾರಾಟಕ್ಕೆ ಬಂದು ಮೂರು ದಿನಗಳಾಗಿದೆ. ಸದ್ಯ, ದೇಶಾದ್ಯಂತ ವಿವಿಧ ಡೀಲರ್‌ಶಿಪ್‌ಗಳಿಗೆ ಕಂಪನಿಯು ನೂತನ ಕ್ರೆಟಾ ಎಲೆಕ್ಟ್ರಿಕ್ ಎಸ್‌ಯುವಿಯನ್ನು ತಲುಪಿಸುವುದಕ್ಕೆ ಶುರು ಮಾಡಿದೆ ಎಂದು ವರದಿಯಾಗಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಕೆಲವೇ ದಿನಗಳಲ್ಲಿ ಈ ಕಾರಿನ ವಿತರಣೆಗಳು ಕೂಡ ಆರಂಭವಾಗಲಿದೆ. ಬನ್ನಿ.. ಹೊಸ 'ಹ್ಯುಂಡೈ ಕ್ರೆಟಾ ಇವಿ' ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ವಿನ್ಯಾಸ (Design): ನೂತನ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric) ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾಗಿ ಹೆಡ್‌ಲೈಟ್‌ಗಳು, ಹೊಸದಾಗಿರುವ ಬಂಪರ್, ಟೈಲ್ ಲೈಟ್‌ಗಳು, ಫ್ರಂಟ್ ಸೆಂಟರ್ ಮೌಂಟೆಡ್ ಚಾರ್ಜಿಂಗ್ ಪೋರ್ಟ್, ಎಲ್ಇಡಿ ಬೂಟ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 17-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಕಾರ್ಯಕ್ಷಮತೆ (Performance): ಈ ಕಾರು ಶಕ್ತಿಯುತವಾದ ಎರಡು ಬ್ಯಾಟರಿ ಪ್ಯಾಕ್‌ಗಳನ್ನು ಹೊಂದಿದೆ. 42 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 51.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿಗಳನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 390 ರಿಂದ 473 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.
ಹೊಸ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರಿನಲ್ಲಿ ಬಳಕೆ ಮಾಡಿರುವ ಬ್ಯಾಟರಿ ಪ್ಯಾಕ್, ಎಸಿ ಹೋಮ್ ಚಾರ್ಜರ್‌ನಲ್ಲಿ ಭರ್ತಿ 4 ಗಂಟೆಯಲ್ಲಿ 10 ರಿಂದ 100% ಚಾರ್ಜ್ ಆಗುತ್ತದೆ. ಮತ್ತೊಂದು ಡಿಸಿ ಫಾಸ್ಟ್ ಚಾರ್ಜಿಂಗ್ ಆಯ್ಕೆಯಲ್ಲಿ ಕೇವಲ 58 ನಿಮಿಷಗಳಲ್ಲಿ ಈ ಕಾರಿನ ಬ್ಯಾಟರಿ ಶೇಕಡ 10 ರಿಂದ 80% ಚಾರ್ಜ್ ಆಗಿ ಬಿಡುತ್ತದೆ. ಇಕೋ, ನಾರ್ಮಲ್ & ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಹೊಂದಿದೆ.

ಆಸನ ಆಯ್ಕೆ & ವೈಶಿಷ್ಟ್ಯಗಳು (Seat Capacity & Features): ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಸ್ಕ್ರೀನ್, ಪನೋರಮಿಕ್ ಸನ್‌ರೂಫ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡುಯಲ್-ಜೋನ್ ಆಟೋ ಎಸಿ, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್‌ನೊಂದಿಗೆ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features): ನೂತನ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಹಿಲ್ ಹೋಲ್ಡ್, ಹಿಲ್ ಡಿಸೆಂಟ್ ಮತ್ತು ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ.

ಬೆಲೆ & ರೂಪಾಂತರಗಳು (Price & Variants): ಈ ಕಾರು ರೂ.17.99 ಲಕ್ಷದಿಂದ ರೂ.23.50 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಕ್ಸಿಕ್ಯೂಟಿವ್, ಸ್ಮಾರ್ಟ್, ಪ್ರೀಮಿಯಂ & ಎಕ್ಸಲೆನ್ಸ್ ಎಂಬ ನಾಲ್ಕು ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಅಟ್ಲಾಸ್ ವೈಟ್, ಸ್ಟಾರಿ ನೈಟ್, ಓಷನ್ ಬ್ಲೂ ಮ್ಯಾಟ್ ಮತ್ತು ಟೈಟಾನ್ ಗ್ರೇ ಮ್ಯಾಟ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಲಭ್ಯವಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








