Hyundai Venue: ಇತ್ತೀಚೆಗೆ ಬಿಡುಗಡೆ.. 7.89 ಲಕ್ಷ, ಹೊಸ ಹ್ಯುಂಡೈ ವೆನ್ಯೂ ಕಾರಿನ ಆನ್-ರೋಡ್ ದರವೆಷ್ಟು.. EMI ಏನು?
ನವೆಂಬರ್ 4 ರಂದು ನೂತನ ತಲೆಮಾರಿನ ಹ್ಯುಂಡೈ ವೆನ್ಯೂ (Hyundai Venue) ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. ಇದು ರೂ.7.89 ಲಕ್ಷದಿಂದ ರೂ.15.48 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, 'ವೆನ್ಯೂ' ಅತ್ಯುತ್ತಮವಾದ ಆಯ್ಕೆಯಲ್ಲಿದೆ. ನಾವಿಲ್ಲಿ ಈ ಎಸ್‌ಯುವಿಯ ಆನ್-ರೋಡ್ ಬೆಲೆ (On-Road Price) ಹಾಗೂ ತಿಂಗಳ ಇಎಂಐ (EMI) ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ನೂತನ 'ಹ್ಯುಂಡೈ ವೆನ್ಯೂ' ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ ಹೆಚ್ಎಕ್ಸ್ 2 (ಪೆಟ್ರೋಲ್) ರೂಪಾಂತರ, ರೂ.9.34 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.2 ಲಕ್ಷವರೆಗೆ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.7,34 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.15,000 ವರೆಗೆ ಇಎಂಐ ಕಟ್ಟಬೇಕು.

ಇನ್ನೊಂದು ಹೆಚ್ಎಕ್ಸ್ 5 (ಡೀಸೆಲ್) ರೂಪಾಂತರ, ರೂ.13.18 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.2 ಲಕ್ಷವರೆಗೆ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.11.18 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.23,000 ವರೆಗೆ ಇಎಂಐ ಪಾವತಿಸಬೇಕು.
ಮತ್ತೊಂದು ಹೆಚ್ಎಕ್ಸ್ 7 (ಡೀಸೆಲ್) ರೂಪಾಂತರ, ರೂ.15.48 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ರೂ.2 ಲಕ್ಷವರೆಗೆ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.13 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.27,000 ವರೆಗೆ ಇಎಂಐ ಕಟ್ಟಬೇಕು.
ಇದೇ ಕಾರಿನ ಹೆಚ್ಎಕ್ಸ್ 10 ಟರ್ಬೊ ಡಿಸಿಟಿ (ಪೆಟ್ರೋಲ್) ರೂಪಾಂತರ, ರೂ.17.92 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.2 ಲಕ್ಷವರೆಗೆ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.15.92 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.32,000 ಇಎಂಐ ಪಾವತಿಸಬೇಕು.
ನೂತನ 'ಹ್ಯುಂಡೈ ವೆನ್ಯೂ' ವಿಶೇಷತೆಗಳೇನು:
ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ಅದು ನೋಡುಗರ ಕಣ್ಣು ಕುಕ್ಕುವಂತಿದೆ. ಡ್ರ್ಯಾಗನ್ ರೆಡ್, ಅಬಿಸ್ ಬ್ಲ್ಯಾಕ್, ಟೈಟಾನ್ ಗ್ರೇ, ಮಿಸ್ಟಿಕ್ ಸಫೈರ್, ಅಟ್ಲಾಸ್ ವೈಟ್ ಹಾಗೂ ಹ್ಯಾಜೆಲ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,520 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಹೊಸ 'ವೆನ್ಯೂ' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಡಿಸೇಲ್ ಮತ್ತು 1.0-ಲೀಟರ್ ಟರ್ಬೊ ಪೆಟೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್ ಹಾಗೂ 7-ಸ್ಪೀಡ್ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.9 ರಿಂದ 20.99 ಕಿ.ಮೀ ವರೆಗೆ ಕೊಡುತ್ತದೆ.
ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 375 ಸಾಧ್ಯವಾಗುವಂತೆ ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ ಡಿಸ್‌ಪ್ಲೇಗಾಗಿ ಡುಯಲ್ 12.3 ಇಂಚಿನ ಸ್ಕ್ರೀನ್‌ಗಳು, 8-ಸ್ಪೀಕರ್ ಬೋಸ್ ಮ್ಯೂಸಿಕ್ ಸಿಸ್ಟಮ್ ಹಾಗೂ ಎಲೆಕ್ಟ್ರಿಕ್ ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ನಿಮ್ಮ ಗಮನಕ್ಕೆ.. ಇಲ್ಲಿ 'ಹ್ಯುಂಡೈ ವೆನ್ಯೂ'ನ ಕೆಲವೇ ರೂಪಾಂತರಗಳ (ವೇರಿಯೆಂಟ್) ಆನ್-ರೋಡ್ ದರ ಹಾಗೂ ಇಎಂಐ ಆಯ್ಕೆಯ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








