Kia: ಟಾಟಾ ಸಿಯೆರಾ ವೇಗಕ್ಕೆ ಬ್ರೇಕ್! ಹೊಸ ಕಿಯಾ ಸೆಲ್ಟೋಸ್ ಕಾರಿನ ತಯಾರಿಕೆ ಶುರು, ರೂ.10.99 ಲಕ್ಷಕ್ಕೆ ಮಾರಾಟಕ್ಕೆ?
ಟಾಟಾ ಸಿಯೆರಾ (Tata Sierra) ಜನಪ್ರಿಯ ಎಸ್‌ಯುವಿಯಾಗಿದೆ. ಈ ಕಾರು 70,000ಕ್ಕೂ ಅಧಿಕ ಸಂಖ್ಯೆಯಲ್ಲಿ ಬುಕ್ಕಿಂಗ್ ಪಡೆದುಕೊಳ್ಳುವುದರೊಂದಿಗೆ ಹೊಸದೊಂದು ಇತಿಹಾಸ ಬರೆದಿದೆ. ಇದಕ್ಕೆ ಪ್ರಬಲವಾಗಿ ಸ್ಪರ್ಧೆಯೊಡ್ಡಬಲ್ಲ ನೂತನ ಕಿಯಾ ಸೆಲ್ಟೋಸ್ (Kia Seltos) ಎಸ್‌ಯುವಿಯನ್ನು ಡಿ.10 ರಂದು ಅದ್ದೂರಿಯಾಗಿ ಅನಾವರಣಗೊಳಿಸಲಾಯಿತು. ಸದ್ಯ, ಆಂಧ್ರ ಪ್ರದೇಶದ ಪೆನುಗೊಂಡ ಸಮೀಪವಿರುವ ಕಂಪನಿಯ ತಯಾರಿಕಾ ಘಟಕದಲ್ಲಿ ಉತ್ಪಾದನೆಯನ್ನು ಶುರು ಮಾಡಲಾಗಿದೆ.
ಹೊಸ ತಲೆಮಾರಿನ 2026ರ 'ಕಿಯಾ ಸೆಲ್ಟೋಸ್' ಕಾರು, ಜನವರಿ 2 ರಂದು ಬಿಡುಗಡೆಗೊಳಿಸಲಾಗುತ್ತದೆ. ಈಗಾಗಲೇ ಬುಕ್ಕಿಂಗ್ ಪ್ರಾರಂಭವಾಗಿದೆ. ಆಸಕ್ತ ಗ್ರಾಹಕರು, ಸಮೀಪದ ಕಂಪನಿಯ ಡೀಲರ್‌ಶಿಪ್ ಅಥವಾ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ರೂ.25,000 ಮುಂಗಡ ಹಣವನ್ನು ಪಾವತಿಸಿ, ಆರ್ಡರ್ ಮಾಡಬಹುದಾಗಿದೆ.

ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಾಗುವ ನಿರೀಕ್ಷೆಯಿದೆ. ಕನಿಷ್ಠ ರೂ.10.99 ಲಕ್ಷ ಹಾಗೂ ಗರಿಷ್ಠ ರೂ.20.60 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ಪಡೆದಿರಬಹುದು ಎಂದು ಹೇಳಲಾಗಿದೆ. ಹೆಚ್‌ಟಿಇ, ಹೆಚ್‌ಟಿಇ (ಒ), ಹೆಚ್‌ಟಿಕೆ, ಹೆಚ್‌ಟಿಕೆ (ಒ), ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ (ಎ), ಜಿಟಿಎಕ್ಸ್, ಜಿಟಿಎಕ್ಸ್ (ಎ) ಹಾಗೂ ಎಕ್ಸ್-ಲೈನ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.
ಈ ಕಾರು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ಬಂಪರ್, ಟೈಗರ್ ನೋಸ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್ ಡೋರ್ ಹ್ಯಾಂಡಲ್‌ಗಳು, ಫ್ರಂಟ್ - ರೇರ್ ಸ್ಕಿಡ್ ಪ್ಲೇಟ್‌ಗಳು, ವಿಶಾಲ ಗಾತ್ರದ 16-ಇಂಚಿನ ಸ್ಟೀಲ್ ವೀಲ್‌ಗಳು ಮತ್ತು 17/18-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ.

ನೂತನ 'ಕಿಯಾ ಸೆಲ್ಟೋಸ್' ಸಾಕಷ್ಟು ದೊಡ್ಡದಾಗಿದೆ. 4,460 ಮಿ.ಮೀ ಉದ್ದ, 1,830 ಮಿ.ಮೀ ಅಗಲ ಹಾಗೂ 1,635 ಮಿ.ಮೀ ಎತ್ತರವಿದೆ. ಜೊತೆಗೆ 2,690 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಮಾರ್ನಿಂಗ್ ಹೇಸ್, ಮ್ಯಾಗ್ಮಾ ರೆಡ್, ಫ್ರಾಸ್ಟ್ ಬ್ಲೂ ಮತ್ತು ಐವರಿ ಸಿಲ್ವರ್ ಗ್ಲೋಸ್, ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ ಮತ್ತು ಅರೋರಾ ಬ್ಲ್ಯಾಕ್ ಪರ್ಲ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಇದು ಶಕ್ತಿಶಾಲಿಯಾದ 3 ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, 7-ಸ್ಪೀಡ್ ಡಿಸಿಟಿ & ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 17 ರಿಂದ 20.7 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.

ಈ ಕಾರು 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 447 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ಸ್ ಡಿಸ್‌ಪ್ಲೇಗಾಗಿ 12.3-ಇಂಚಿನ ಡುಯಲ್ ಸ್ಕ್ರೀನ್ ಸೆಟಪ್, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಹೊಸ 'ಕಿಯಾ ಸೆಲ್ಟೋಸ್' ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠವಾದ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಡಿಸೆಂಟ್ ಕಂಟ್ರೋಲ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








