Kia: 5-ಸೀಟರ್.. ಲಕ್ಷುರಿ ಫೀಚರ್ಸ್, ಹೊಸ ಕಿಯಾ ಸೈರಸ್ ಕಾರಿನ ಕುರಿತಂತೆ ದಿಢೀರ್ ಅಪ್ಡೇಟ್ ಕೊಟ್ಟ ಕಂಪನಿ!

ದ.ಕೊರಿಯಾ ಮೂಲದ ಕಿಯಾ ಮೋಟಾರ್ಸ್ (Kia Motors), 2019ರ ದೇಶೀಯ ಮಾರುಕಟ್ಟೆಯನ್ನು ಪ್ರವೇಶಿಸಿತ್ತು. ಅತಿ ಕಡಿಮೆ ಅವಧಿಯಲ್ಲಿಯೇ ಕಂಪನಿಯ ಕಾರುಗಳು ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಲು ಯಶಸ್ವಿಯಾದವು. ಇತೀಚೆಗೆ, ಕಿಯಾ ಸಾಮಾನ್ಯ ಜನರ ಕಾರು ಖರೀದಿಸುವ ಕನಸನ್ನು ನನಸು ಮಾಡಲು ಹೊಚ್ಚ ಹೊಸ 'ಸೈರಸ್' ಎಸ್‌ಯುವಿಯನ್ನು ಅನಾವರಣಗೊಳಿಸಿತ್ತು. ಈ ನೂತನ ಕಾರು ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ. ಸದ್ಯ ಬುಕ್ಕಿಂಗ್ ಕುರಿತಂತೆ ಮಹತ್ವದ ಮಾಹಿತಿ ಲಭ್ಯವಾಗಿದೆ.

ಬುಕ್ಕಿಂಗ್ ಯಾವಾಗಿನಿಂದ ಶುರು: ನೂತನ ಕಿಯಾ ಸೈರಸ್ (Kia Syros) ಎಸ್‌ಯುವಿಯನ್ನು ಖರೀದಿ ಮಾಡಲು ಆಸಕ್ತಿ ಹೊಂದಿರುವ ಗ್ರಾಹಕರು, ಇಂದು ಮಧ್ಯರಾತ್ರಿ 12 ಗಂಟೆಯಿಂದ ಕಂಪನಿ ಅಧಿಕೃತ ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್ ಮಾಡಬಹುದು. ಇದು ಸಾಧ್ಯವಾಗದಿದ್ದರೆ, ನಾಳೆಯಿಂದ ಸಮೀಪದ ಡೀಲರ್‌ಶಿಪ್‌ಗೆ ಭೇಟಿ ನೀಡಿ, ರೂ.25,000 ಮುಂಗಡ ಹಣವನ್ನು ಪಾವತಿಸಿ ಆರ್ಡರ್ ಮಾಡಬಹುದು.

New Kia Syros Suv Booking Open Tonight At 12 AM Full Details

ಬೆಲೆ ಎಷ್ಟು & ವಿತರಣೆ ಯಾವಾಗ: ಹೊಸ ಕಿಯಾ ಸೈರಸ್ ಕಾರಿನ ಬೆಲೆ ಬಗ್ಗೆ ಕಂಪನಿಯು ಯಾವುದೇ ಘೋಷಣೆ ಮಾಡಿಲ್ಲ. ಈ ಕಾರು ಕೈಗೆಟುಕುವ ದರದಲ್ಲಿ ಖರೀದಿಗೆ ದೊರೆಯುವ ನೀರಿಕ್ಷೆಯಿದ್ದು, ರೂ.9 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ನೂತನ ಎಸ್‌ಯುವಿ ಫೆಬ್ರವರಿಯಿಂದ ಖರೀದಿದಾರರಿಗೆ ವಿತರಣೆಯಾಗಲಿದೆ.

ವಿನ್ಯಾಸ ಹಾಗೂ ರೂಪಾಂತರಗಳು: ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸ (ಡಿಸೈನ್) ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು, ಫ್ಲಾಟ್ ಟೈಲ್‌ಗೇಟ್ ಮತ್ತು 17-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೊತೆಗೆ ಹೆಚ್‌ಟಿಕೆ, ಹೆಚ್‌ಟಿಕೆ (ಒ), ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಪ್ಲಸ್ & ಹೆಚ್‌ಟಿಎಕ್ಸ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

New Kia Syros Suv Booking Open Tonight At 12 AM Full Details

ಕಾರ್ಯಕ್ಷಮತೆ: ನೂತನ ಕಿಯಾ ಸೈರಸ್ ಎಸ್‌ಯುವಿ ಶಕ್ತಿಯುತವಾದ ಎರಡು ಪವರ್‌ಟ್ರೇನ್‌ ಆಯ್ಕೆಯನ್ನು ಹೊಂದಿದೆ. ಇದರ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 120 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 172 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್, 116 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 250 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೊಮೇಟಿಕ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಮೈಲೇಜ್ ಕುರಿತಂತೆ ಯಾವುದೇ ವಿವರಗಳು ತಿಳಿದುಬಂದಿಲ್ಲ. ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣ ಮಾಡಬಹುದು.

New Kia Syros Suv Booking Open Tonight At 12 AM Full Details

ವೈಶಿಷ್ಟ್ಯಗಳು: ಹೊಸ ಕಿಯಾ ಸೈರಸ್ ಎಸ್‌ಯುವಿ ಹತ್ತಾರು ನವೀನ ವೈಶಿಷ್ಟ್ಯಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್‌ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ 12.3-ಇಂಚಿನ ಡುಯಲ್-ಸ್ಕ್ರೀನ್‌ ಸೆಟಪ್, ಡುಯಲ್-ಜೋನ್ ಎಸಿ, 4-ವೇ ಪವರ್ಡ್ ಡ್ರೈವರ್ ಸೀಟ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ಅಪ್ & ಡೌನ್ ಪವರ್ ವಿಂಡೋಗಳು ಮತ್ತು ವಿಶಾಲವಾದ ಸನ್‌ರೂಫ್‌ನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು: ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ನೀಡುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ನೂತನ ಕಿಯಾ ಸೈರಸ್ ಎಸ್‌ಯುವಿಗೆ ಹ್ಯುಂಡೈ ಕ್ರೆಟಾ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾಗಳು ಪ್ರಬಲವಾದ ಸ್ಪರ್ಧೆಯೊಡ್ಡಲಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, January 2, 2025, 14:15 [IST]
English summary
New kia syros suv booking open tonight at 12 am full details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+