Kia Syros: ನಾಳೆ ಹೊಸ ಕಿಯಾ ಸೈರಸ್ ಕಾರು ಅದ್ದೂರಿಯಾಗಿ ಬಿಡುಗಡೆ.. 9 ಲಕ್ಷ ಬೆಲೆ, 20.75 ಮೈಲೇಜ್?
ಕಿಯಾ ಮೋಟಾರ್ಸ್ (Kia Motors), ಡಿಸೆಂಬರ್ 19ರಂದು ಹೊಚ್ಚ ಹೊಸ 'ಸೈರಸ್' ಎಸ್‌ಯುವಿಯನ್ನು ಅನಾವರಣಗೊಳಿಸಿತ್ತು. ಈಚೆಗೆ ಈ ಕಾರಿಗಾಗಿ ಬುಕ್ಕಿಂಗ್ ತೆಗೆದುಕೊಳ್ಳುವ ಕಾರ್ಯಕ್ಕೂ ಕಂಪನಿಯು ಚಾಲನೆ ನೀಡಿತ್ತು. ನೂತನ ಕಿಯಾ ಸೈರಸ್ ಎಸ್‌ಯುವಿಗಾಗಿ ಬರೋಬ್ಬರಿ 10,000ಕ್ಕೂ ಅಧಿಕ ಗ್ರಾಹಕರು ಆರ್ಡರ್ ಮಾಡಿದ್ದರು. ಅದರಲ್ಲಿ 60%ಗೂ ಹೆಚ್ಚಿನ ಖರೀದಿದಾರರು ಪೆಟ್ರೋಲ್ ಮಾಡೆಲ್‌ಗಳನ್ನು ಕಾಯ್ದಿರಿಸಿದ್ದರು. ನಾಳೆ, ಈ ಕಾರನ್ನು ಕಂಪನಿಯು ಅಧಿಕೃತವಾಗಿ ಬಿಡುಗಡೆಗೊಳಿಸಲಿದ್ದು, ಅತಿ ಶೀಘ್ರದಲ್ಲಿಯೇ ವಿತರಣೆಗಳು ಕೂಡ ಶುರುವಾಗುವ ನಿರೀಕ್ಷೆಯಿದೆ.
ಬೆಲೆ (Price): ಹೊಸ ಕಿಯಾ ಸೈರಸ್ (Kia Syros) ಎಸ್‌ಯುವಿ, ಅತ್ಯಂತ ಕೈಗಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವ ಸಾಧ್ಯತೆಯಿದೆ. ರೂ.9.70 ಲಕ್ಷದಿಂದ ರೂ.16.50 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಈ ಬೆಲೆಯನ್ನು ಕೊಟ್ಟು ಮಧ್ಯಮ ವರ್ಗದ ಜನರು ನೂತನ ಸೈರಸ್ ಎಸ್‌ಯುವಿಯನ್ನು ಖರೀದಿ ಮಾಡಬಹುದು ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ರೂಪಾಂತರಗಳು & ಬಣ್ಣಗಳು (Variants & Colors): ಈ ಕಾರು, ಹೆಚ್‌ಟಿಕೆ, ಹೆಚ್‌ಟಿಕೆ (ಒ), ಹೆಚ್‌ಟಿಕೆ ಪ್ಲಸ್ & ಹೆಚ್‌ಟಿಎಕ್ಸ್ ಒಳಗೊಂಡಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಫ್ರಾಸ್ಟ್ ಬ್ಲೂ, ಸ್ಪಾರ್ಕ್ಲಿಂಗ್ ಸಿಲ್ವರ್, ಗ್ರಾವಿಟಿ ಗ್ರೇ, ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಪ್ಯೂಟರ್ ಆಲಿವ್, ಗ್ಲೇಸಿಯರ್ ವೈಟ್ ಪರ್ಲ್ ಹಾಗೂ ಅರೋರಾ ಬ್ಲ್ಯಾಕ್ ಪರ್ಲ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ವಿನ್ಯಾಸ & ಆಸನ ಆಯ್ಕೆ (Design & Seating Capacity): ನೂತನ ಕಿಯಾ ಸೈರಸ್ ಎಸ್‌ಯುವಿ ಅತ್ಯಾಧುನಿಕ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಡ್ರಾಪ್-ಡೌನ್ ಎಲ್ಇಡಿ ಡಿಆರ್‌ಎಲ್‌ಗಳು, 'ಎಲ್' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಟೈಲ್ ಲೈಟ್‌ಗಳು, ಫ್ಲಾಟ್ ಟೈಲ್‌ಗೇಟ್, ಅಲಾಯ್ ವೀಲ್‌ಗಳು ಹಾಗೂ ಫ್ಲಶ್-ಟೈಪ್ ಡೋರ್ ಹ್ಯಾಂಡಲ್‌ಗಳನ್ನು ಒಳಗೊಂಡಿದೆ. ಜೊತೆಗೆ 5 ಆಸನದೊಂದಿಗೂ ಲಭ್ಯವಿದೆ.

ಕಾರ್ಯಕ್ಷಮತೆ (Performance): ಈ ಕಾರು, ಎರಡು ಪವರ್‌ಟ್ರೇನ್‌ನೊಂದಿಗೆ ದೊರೆಯುತ್ತದೆ. ಇದರ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 120 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 172 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 1.5-ಲೀಟರ್ ಡೀಸೆಲ್ ಎಂಜಿನ್, 116 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 250 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಈ ಕಿಯಾ ಸೈರಸ್ ಎಸ್‌ಯುವಿ, ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಎಂಟಿ (ಮ್ಯಾನುವಲ್), 6-ಸ್ಪೀಡ್ ಎಟಿ (ಆಟೋಮೆಟಿಕ್) ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. ಇದರೊಟ್ಟಿಗೆ ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ ಸರಿ ಸುಮಾರು 17.65 ರಿಂದ 20.75 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ವೈಶಿಷ್ಟ್ಯಗಳು (Features): ನೂತನ ಕಾರು ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ 12.3-ಇಂಚಿನ ಡುಯಲ್ ಸ್ಕ್ರೀನ್ ಸೆಟಪ್, ಡುಯಲ್-ಜೋನ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಪನೊರೊಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








