Kia: 5-ಸೀಟರ್, ಕೈಗೆಟುಕುವ ಬೆಲೆ.. ಹೊಸ ಕಿಯಾ ಸೈರಸ್ ಎಸ್‌ಯುವಿ ಖರೀದಿಸಬೇಕೇ.. ಆನ್-ರೋಡ್ ದರವೆಷ್ಟು, EMI ಏನು?
ಕಿಯಾ ಮೋಟಾರ್ಸ್ (Kia Motors), ಇದೇ ಫೆ.1ರಂದು ಹೊಸ 'ಸೈರಸ್' ಎಸ್‌ಯುವಿಯನ್ನು ಮಾರಾಟಕ್ಕೆ ತಂದಿತ್ತು. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ಅದಕ್ಕೆ ತಕ್ಕಂತೆ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ನೀವು ನೂತನ ಕಾರನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಕಿಯಾ ಸೈರಸ್ (Kia Syros) ಉತ್ತಮವಾದ ಆಯ್ಕೆಯಾಗಲಿದೆ ಎಂದು ಹೇಳಬಹುದು. ನಾವಿಲ್ಲಿ ಈ ಹೊಸ ಎಸ್‌ಯುವಿಯ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ದೇಶೀಯ ಮಾರುಕಟ್ಟೆಯಲ್ಲಿ ಕಿಯಾ ಸೈರಸ್ ಎಸ್‌ಯುವಿ ಹಲವು ವಿಧದಲ್ಲಿ ಖರೀದಿಗೆ ದೊರೆಯುತ್ತದೆ. ಬೆಂಗಳೂರಿನಲ್ಲಿ ಇದರ ಹೆಚ್‌ಟಿಕೆ ಟರ್ಬೊ ಪೆಟ್ರೋಲ್ ಮಾಡೆಲ್, ರೂ.10.77 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಈ ಕಾರನ್ನು ಖರೀದಿ ಮಾಡಿದರೆ, ರೂ.8.77 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.17,800 ವರೆಗೆ ಇಎಂಐ ಕಟ್ಟಬೇಕು.

ಈ ಕಿಯಾ ಸೈರಸ್ ಕಾರಿನ ಹೆಚ್‌ಟಿಕೆ (ಒ) ಟರ್ಬೊ ಪೆಟ್ರೋಲ್ ಮಾಡೆಲ್, ರೂ.12.35 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.10.35 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷದ ಅವಧಿಗೆ ತಿಂಗಳಿಗೆ ರೂ.21,000 ವರೆಗೆ ಇಎಂಐ ಪಾವತಿ ಮಾಡಬೇಕು.
ನೂತನ ಸೈರಸ್ ಎಸ್‌ಯುವಿಯ ಹೆಚ್‌ಟಿಕೆ (ಒ) ಡೀಸೆಲ್ ಮಾಡೆಲ್, ರೂ.13.65 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ಈ ಕಾರನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.11.65 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.23,600 ವರೆಗೆ ಇಎಂಐ ಕಟ್ಟಬೇಕು.

ಹೊಸ ಕಾರಿನ ಹೆಚ್‌ಟಿಕೆ ಪ್ಲಸ್ ಡಿಸೇಲ್ ಮಾಡೆಲ್, ರೂ.15.46 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.13.46 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ಹಾಕಿ 5 ವರ್ಷದ ಅವಧಿಗೆ ತಿಂಗಳಿಗೆ ರೂ.27,000 ವರೆಗೆ ಇಎಂಐ ಪಾವತಿ ಮಾಡಬೇಕು.
ಹೊಸ ಕಿಯಾ ಸೈರಸ್ ಎಸ್‌ಯುವಿ 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 17.65 ರಿಂದ 20.75 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಹೆಚ್ಚಿನ ಲಗೇಜ್ ಸಾಗಿಸಲು 465 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಕಾರು, ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಅಲಾಯ್ ವೀಲ್‌ಗಳು ಹಾಗೂ ಫ್ಲಶ್-ಟೈಪ್ ಡೋರ್ ಹ್ಯಾಂಡಲ್‌ಗಳನ್ನು ತನ್ನದಾಗಿಸಿಕೊಂಡಿದೆ. ಸ್ಪಾರ್ಕ್ಲಿಂಗ್ ಸಿಲ್ವರ್, ಗ್ರಾವಿಟಿ ಗ್ರೇ, ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್ ಮತ್ತು ಪ್ಯೂಟರ್ ಆಲಿವ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುತ್ತದೆ.
ನೂತನ ಎಸ್‌ಯುವಿ ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್, ಆಟೋಮೆಟಿಕ್-ಕ್ಲೇಮೇಟ್ ಕಂಟ್ರೋಲ್, 8-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ನಿಮ್ಮ ಗಮನಕ್ಕೆ.. ಈ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








