Kia: ಬುಕ್ಕಿಂಗ್‌ನಲ್ಲಿ ಸುನಾಮಿ.. ಶೋರೂಂಗೆ ಬಂದೇ ಬಿಡ್ತು ಹೊಸ ಕಿಯಾ ಕಾರು, ಫೆ.1ಕ್ಕೆ ಬಿಡುಗಡೆ.. 9 ಲಕ್ಷ ಬೆಲೆ?
ದ.ಕೊರಿಯಾ ಮೂಲದ ಕಿಯಾ ಮೋಟಾರ್ಸ್ (Kia Motors) ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ಡಿ.19ರಂದು ಕಂಪನಿಯು ನೂತನ 'ಸೈರಸ್' ಎಸ್‌ಯುವಿಯನ್ನು ಅದ್ದೂರಿಯಾಗಿ ಅನಾವರಣಗೊಳಿಸಿತ್ತು. ಕೆಲವೇ ದಿನಗಳ ಹಿಂದೆ ಈ ಕಾರಿನ ಬುಕ್ಕಿಂಗ್‌ನ್ನು ಆರಂಭಿಸಿದ್ದು, ಗ್ರಾಹಕರಿಂದಲೂ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಾಖಲೆ ಸಂಖ್ಯೆಯಲ್ಲಿ ಆರ್ಡರ್‌ಗಳನ್ನು ಪಡೆದುಕೊಳ್ಳುತ್ತಿದೆ. ಈ ಕಾರಿನ ಬುಕ್ಕಿಂಗ್ ಸಂಖ್ಯೆ 10,000 ಯುನಿಟ್ ಗಡಿಯನ್ನು ಕೂಡ ದಾಟಿದೆ. ಈಗಲೂ ಖರೀದಿದಾರರು ಹೊಚ್ಚ ಹೊಸ ಸೈರಸ್ ಎಸ್‌ಯುವಿಯನ್ನು ತಾಮುಂದು - ನಾಮುಂದು ಎಂಬಂತೆ ಕಾಯ್ದಿರಿಸುತ್ತಿದ್ದಾರೆ.
ಸದ್ಯ, ನೂತನ ಕಿಯಾ ಸೈರಸ್ (Kia Syros) ಎಸ್‌ಯುವಿಯನ್ನು ದೇಶಾದ್ಯಂತ ವಿವಿಧ ಡೀಲರ್‌ಶಿಪ್‌ಗಳಿಗೆ ತಲುಪಿಸುವ ಕಾರ್ಯಕ್ಕೆ ಕಂಪನಿಯು ಚಾಲನೆ ನೀಡಿದೆ. ಅದಕ್ಕೆ ಸಂಬಂಧಿಸಿದ ಒಂದಷ್ಟು ಪೋಸ್ಟ್‌ಗಳು ಸೋಶಿಯಲ್ ಮೀಡಿಯಾದಲ್ಲಿ ಕಾಣಿಕೊಂಡಿವೆ. ಈ ಹೊಸ ಕಾರನ್ನು ಫೆಬ್ರವರಿ 1 ರಂದು ಬಿಡುಗಡೆಗೊಳಿಸಲಾಗುತ್ತದೆ. ಆ ಬಳಿಕ ವಿತರಣೆಗಳು ಶುರುವಾಗುವ ನೀರಿಕ್ಷೆಯಿದೆ.

ಈ ಕಿಯಾ ಸೈರಸ್ ಎಸ್‌ಯುವಿ ಅತಿ ಕಡಿಮೆ ಬೆಲೆಗೆ ಮಾರಾಟಕ್ಕೆ ಬರುವ ಸಾಧ್ಯತೆಯಿದ್ದು, ರೂ.9 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಹೆಚ್‌ಟಿಕೆ, ಹೆಚ್‌ಟಿಕೆ (ಒ), ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಪ್ಲಸ್ ಹಾಗೂ ಹೆಚ್‌ಟಿಎಕ್ಸ್ ಪ್ಲಸ್ (ಒ) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗಲಿದೆ.
ನೂತನ ಸೈರಸ್ ಕಾರು, ಹೊರಭಾಗದಲ್ಲಿ ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ ಆಕಾರದಲ್ಲಿರುವ ಎಲ್ಇಡಿ ಟೈಲ್ ಲೈಟ್‌ಗಳು, ಫ್ಲಾಟ್ ಟೈಲ್‌ಗೇಟ್, ಅಲಾಯ್ ವೀಲ್‌ಗಳು ಮತ್ತು ಫ್ಲಶ್ - ಟೈಪ್ ಡೋರ್ ಹ್ಯಾಂಡಲ್‌ಗಳನ್ನು ಪಡೆದಿದೆ.

ಹೊಸ ಕಿಯಾ ಸೈರಸ್ ಎಸ್‌ಯುವಿ ಶಕ್ತಿಯುತವಾದ 2 ಪವರ್‌ಟ್ರೇನ್‌ನ್ನು ಪಡೆದಿದೆ. 1-ಲೀಟರ್ ಟರ್ಬೊ ಪೆಟ್ರೋಲ್ & 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 6-ಸ್ಪೀಡ್ ಎಂಟಿ (ಮ್ಯಾನುವಲ್ ಟ್ರಾಸ್ಮಿಷನ್), 6-ಸ್ಪೀಡ್ ಎಟಿ (ಆಟೋಮೆಟಿಕ್ ಟ್ರಾಸ್ಮಿಷನ್) ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್-ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.65 ರಿಂದ 20.75 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ ಎನ್ನಲಾಗಿದೆ.
ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣ ಮಾಡಬಹುದು. ಇದು ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ 12.3-ಇಂಚಿನ ಡುಯಲ್ ಸ್ಕ್ರೀನ್ ಸೆಟಪ್, ಡುಯಲ್ ಜೋನ್ ಎಸಿ, 4-ವೇ ಪವರ್ಡ್ ಡ್ರೈವರ್ ಸೀಟ್, ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ & ರೇರ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಅಪ್/ ಡೌನ್ ಪವರ್ ವಿಂಡೋಗಳು ಹಾಗೂ ಪನೊರೊಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ನೂತನ ಕಾರು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ. ಈ ಹೊಸ ಸೈರಸ್ ಎಸ್‌ಯುವಿಗೆ ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ, ಹ್ಯುಂಡೈ ಕ್ರೆಟಾ ಹಾಗೂ ಮಾರುತಿ ಗ್ರ್ಯಾಂಡ್ ವಿಟಾರಾ ಕಾರುಗಳು ದೊಡ್ಡ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








