Kia Syros: ಶನಿವಾರವಷ್ಟೇ ಹೊಸ ಕಿಯಾ ಸೈರಸ್ ಎಸ್‌ಯುವಿ ಮಾರಾಟಕ್ಕೆ.. ಪ್ರಮುಖಾಂಶಗಳಿವು.. ಯಾರು ಹೇಳಲ್ಲ!

ಕಿಯಾ ಮೋಟಾರ್ಸ್ (Kia Motors), ಶನಿವಾರ (ಫೆಬ್ರವರಿ 1) ನೂತನ 'ಸೈರಸ್' ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಈಗಾಗಲೇ ಈ ಕಾರಿನ ಬುಕ್ಕಿಂಗ್ ಶುರುವಾಗಿದ್ದು, ಆಸಕ್ತ ಗ್ರಾಹಕರು ಆನ್‌ಲೈನ್ ಅಥವಾ ಸಮೀಪದ ಶೋರೂಂಗೆ ಭೇಟಿ ನೀಡಿ ಆರ್ಡರ್ ಮಾಡಬಹುದು. ನೀವು ನೂತನ ಕಿಯಾ ಸೈರಸ್ ಎಸ್‌ಯುವಿಯನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ನಾವಿಲ್ಲಿ ಈ ಕಾರಿನ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತ ಪ್ರಮುಖಾಂಶಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ.

ಬೆಲೆ & ರೂಪಾಂತರಗಳು: ಹೊಸ ಕಿಯಾ ಸೈರಸ್ (Kia Syros) ಎಸ್‌ಯುವಿ ಅತ್ಯಂತ ಕೈಗೆಟುಕುವ ಬೆಲೆಯನ್ನು ಮಾರಾಟಕ್ಕೆ ಬಂದಿದೆ. ಇದು ಕನಿಷ್ಠ ರೂ.8.99 ಲಕ್ಷ ಮತ್ತು ಗರಿಷ್ಠ ರೂ.17.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಹೆಚ್‌ಟಿಕೆ, ಹೆಚ್‌ಟಿಕೆ (ಒ), ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಪ್ಲಸ್, ಹೆಚ್‌ಟಿಎಕ್ಸ್ ಪ್ಲಸ್ (ಒ) ಎಂಬ 6 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

New Kia Syros Suv Top things You Should Must Know

ವಿನ್ಯಾಸ & ಆಸನ ಆಯ್ಕೆ: ಈ ಕಾರು ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, 'ಎಲ್' ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಟೈಲ್ ಲೈಟ್‌ಗಳು, ಅಲಾಯ್ ವೀಲ್‌ಗಳು (17-ಇಂಚು) ಮತ್ತು ಫ್ಲಶ್-ಟೈಪ್ ಡೋರ್ ಹ್ಯಾಂಡಲ್‌ಗಳನ್ನು ಪಡೆದಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 465 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಸುತ್ತಳತೆ & ಬಣ್ಣಗಳು: ನೂತನ ಕಿಯಾ ಸೈರಸ್ ಎಸ್‌ಯುವಿ 3,995 ಎಂಎಂ ಉದ್ದ, 1,800 ಎಂಎಂ ಅಗಲ ಹಾಗೂ 1,665 ಎಂಎಂ ಎತ್ತರವಿದೆ. ಜೊತೆಗೆ 2,550 ಎಂಎಂ ಅಳತೆಯ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸ್ಪಾರ್ಕ್ಲಿಂಗ್ ಸಿಲ್ವರ್, ಗ್ರಾವಿಟಿ ಗ್ರೇ, ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಪ್ಯೂಟರ್ ಆಲಿವ್, ಹಾಗೂ ಅರೋರಾ ಬ್ಲ್ಯಾಕ್ ಪರ್ಲ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

New Kia Syros Suv Top things You Should Must Know

ಕಾರ್ಯಕ್ಷಮತೆ: ಈ ಕಾರು 1-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಎಂಟಿ (ಮ್ಯಾನುವಲ್ ಟ್ರಾಸ್ಮಿಷನ್), 6-ಸ್ಪೀಡ್ ಎಟಿ (ಆಟೋಮೆಟಿಕ್ ಟ್ರಾಸ್ಮಿಷನ್) ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 17.65 ರಿಂದ 20.75 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ವೈಶಿಷ್ಟ್ಯಗಳು: ಹೊಸ ಕಿಯಾ ಸೈರಸ್ ಎಸ್‌ಯುವಿ ಇನ್ಫೋಟೈನ್‌ಮೆಂಟ್‌ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ 12.3-ಇಂಚಿನ ಡುಯಲ್ ಸ್ಕ್ರೀನ್‌ ಸೆಟಪ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 8-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಯಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

New Kia Syros Suv Top things You Should Must Know

ಒಟ್ಟಾರೆಯಾಗಿ ಈ ಕಿಯಾ ಸೈರಸ್ ಕಾರು ಬರೋಬ್ಬರಿ 10,000 ಬುಕ್ಕಿಂಗ್‌ಗಳನ್ನು ಪಡೆದುಕೊಂಡಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಈಗಲೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಆರ್ಡರ್ ಮಾಡುತ್ತಿದ್ದಾರೆ. ನೂತನ ಎಸ್‌ಯುವಿಗೆ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಹಾಗೂ ಹ್ಯುಂಡೈ ಕ್ರೆಟಾ ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, February 3, 2025, 8:30 [IST]
English summary
New kia syros suv top things you should must know
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+