Mahindra: 7.99 ಲಕ್ಷ, 2025ರ ಹೊಸ ಮಹೀಂದ್ರಾ ಬೊಲೆರೊ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಇತ್ತೀಚೆಗೆ 2025ರ ನೂತನ ಮಹೀಂದ್ರಾ ಬೊಲೆರೊ ಫೇಸ್‌ಲಿಫ್ಟ್ (Mahindra Bolero Facelift) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿತ್ತು. ಇದು ವಿನ್ಯಾಸ ಹಾಗೂ ವೈಶಿಷ್ಟ್ಯಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದೆ. ಕನಿಷ್ಠ ರೂ.7.99 ಲಕ್ಷ ಮತ್ತು ಗರಿಷ್ಠ ರೂ.9.69 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ಹೊಸ ಕಾರೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ, 'ಬೊಲೆರೊ' ಅತ್ಯುತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಇದೇ ಎಸ್‌ಯುವಿಯ ಆನ್-ರೋಡ್ ದರ (On-Road Price) ಹಾಗೂ ಇಎಂಐ (EMI) ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಹೊಚ್ಚ ಹೊಸ 'ಮಹೀಂದ್ರಾ ಬೊಲೆರೊ' ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದರ ಬಿ4 ರೂಪಾಂತರ ರೂ.9.52 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.6.52 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.13,000 ವರೆಗೆ ಇಎಂಐ ಕಟ್ಟಬೇಕು.

ಇನ್ನೊಂದು ಬಿ6 ರೂಪಾಂತರ ರೂ.10.35 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.7.35 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.15,000 ವರೆಗೆ ಇಎಂಐ ಪಾವತಿಸಬೇಕು.
ಮತ್ತೊಂದು ಬಿ6 (ಒ) ರೂಪಾಂತರ ರೂ.10.82 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ, ತೆಗೆದುಕೊಂಡರೆ, ರೂ.7.82 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.16,000 ವರೆಗೆ ಇಎಂಐ ಕಟ್ಟಬೇಕು.

ಇದೇ ಕಾರಿನ 'ಬಿ8' ರೂಪಾಂತರ ರೂ.11.52 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿಗೆ ಮಾಡಿದರೆ ರೂ.8,52 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.17,000 ವರೆಗೆ ಇಎಂಐ ಪಾವತಿ ಮಾಡಬೇಕು.
ಮಹೀಂದ್ರಾ ಬೊಲೆರೊ ಫೇಸ್‌ಲಿಫ್ಟ್ ವಿಶೇಷತೆಗಳೇನು:
ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಫಾಗ್ ಲೈಟ್‌ಗಳು ಹಾಗೂ 15 ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸ್ಟೆಲ್ತ್ ಬ್ಲ್ಯಾಕ್, ಡೈಮಂಡ್ ವೈಟ್, ಡಿಸ್ಯಾಟ್ ಸಿಲ್ವರ್ ಹಾಗೂ ರಾಕಿ ಬೀಜ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 183 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,680 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಬರೋಬ್ಬರಿ 1,620 ತೂಕವಿದೆ.

ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 14 ರಿಂದ 16 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 125 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 7 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ದೂರದ ಊರುಗಳಿಗೆ ತೆರಳುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 370 ಬೂಟ್ ಸ್ಪೇನ್‌ನ್ನು ಪಡೆದಿದೆ.
ಹೊಸ 'ಬೊಲೆರೊ' ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ರಿಮೋಟ್ ಕೀ ಹಾಗೂ ಮ್ಯಾನುಯಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.
ನಿಮ್ಮ ಗಮನಕ್ಕೆ.. ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








