7-ಸೀಟರ್.. 16 ಕಿ.ಮೀ ಮೈಲೇಜ್, 7.99 ಲಕ್ಷ.. ನೂತನ ಮಹೀಂದ್ರಾ ಬೊಲೆರೊ ಕುರಿತ ಪ್ರಮುಖಾಂಶಗಳಿವು!
ಇತ್ತೀಚೆಗೆ 2025ರ ಹೊಚ್ಚ ಹೊಸ ಮಹೀಂದ್ರಾ ಬೊಲೆರೊ ಫೇಸ್‌ಲಿಫ್ಟ್ (Mahindra Bolero Facelift) ಎಸ್‌ಯುವಿಯನ್ನು ಪರಿಚಯಿಸಲಾಗಿದೆ. ಹಳೆಯ ಬೊಲೆರೊಗೆ ಹೋಲಿಸಿದರೆ, ನವೀನ ಶೈಲಿಯ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ನೀವು ಹೊಚ್ಚ ಹೊಸ ಎಸ್‌ಯುವಿವೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ 'ಬೊಲೆರೊ ಫೇಸ್‌ಲಿಫ್ಟ್' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಕಾರಿನ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು (Price & Variants):
ಇದು ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.7.99 ಲಕ್ಷದಿಂದ ರೂ.9.69 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅದಕ್ಕೆ ತಕ್ಕಂತೆ ಬಿ4, ಬಿ6, ಬಿ6 (ಒ) ಮತ್ತು ಬಿ8 ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

ವಿನ್ಯಾಸ & ಬಣ್ಣಗಳು (Design & Colors):
ಈ ಎಸ್‌ಯುವಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಬಂಪರ್, ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಫಾಗ್ ಲೈಟ್‌ಗಳು 15 ಇಂಚಿನ ಅಲಾಯ್ ವೀಲ್‌ಗಳು ಹಾಗೂ ವೈಪರ್ & ವಾಷರ್‌ನ್ನು ಪಡೆದಿದೆ. ಸ್ಟೆಲ್ತ್ ಬ್ಲ್ಯಾಕ್, ಡೈಮಂಡ್ ವೈಟ್, ಡಿಸ್ಯಾಟ್ ಸಿಲ್ವರ್ ಮತ್ತು ರಾಕಿ ಬೀಜ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimensions):
ನೂತನ 'ಮಹೀಂದ್ರಾ ಬೊಲೆರೊ ಫೇಸ್‌ಲಿಫ್ಟ್' ಹೆಚ್ಚು ವಿಶಾಲವಾಗಿದೆ. 3,995 ಮಿ.ಮೀ ಉದ್ದ, 1745 ಮಿ.ಮೀ ಅಗಲ ಮತ್ತು 1880 ಮಿ.ಮೀ ಎತ್ತರವಿದೆ. ಜೊತೆಗಿದು 183 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,680 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 1,620 ತೂಕವಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಇದು 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 370 ಬೂಟ್ ಸ್ಪೇನ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance):
ಈ ಕಾರು ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 75 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 210 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 14 ರಿಂದ 16 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 50 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ. 125 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.

ವೈಶಿಷ್ಟ್ಯಗಳು (Features):
ಹೊಸ 'ಮಹೀಂದ್ರಾ ಬೊಲೆರೊ ಫೇಸ್‌ಲಿಫ್ಟ್' ಎಸ್‌ಯುವಿಯ ಕ್ಯಾಬಿನ್ ವಿನ್ಯಾಸವು ತುಂಬಾನೇ ಅಚ್ಚುಕಟ್ಟಾಗಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ - ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು, ಆರ್ಮ್‌ರೆಸ್ಟ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ರಿಮೋಟ್ ಕೀ ಮತ್ತು ಮ್ಯಾನುಯಲ್ ಎಸಿ ಮತ್ತು ಪವರ್ ವಿಂಡೋಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಇದು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ - ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಐಎಸ್‌ಒಎಫ್‌ಐಎಕ್ಸ್ ಚೈಲ್ಡ್ ಸೀಟ್ ಆಂಕಾರೇಜ್‌ಗಳು ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








