ಮಹೀಂದ್ರಾ ಸ್ಕಾರ್ಪಿಯೋ ಎನ್ ಬ್ಯ್ಲಾಕ್ ಎಡಿಷನ್ ಬಿಡುಗಡೆಗೂ ಮುನ್ನವೇ ಡೀಲರ್‌ಶಿಪ್‌ಗೆ ಬಂದೇ ಬಿಡ್ತು.. ಹೇಗಿದೆ?

ಭಾರತದ ಮಾರುಕಟ್ಟೆಯಲ್ಲಿ ಅತಿ ಶೀಘ್ರದಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಎನ್ ಬ್ಯ್ಲಾಕ್ ಎಡಿಷನ್ (Mahindra Scorpio N Black Edition) ಬಿಡುಗಡೆಯಾಗುವ ನಿರೀಕ್ಷೆಯಿದೆ. ಇತ್ತೀಚೆಗೆ, ಕಂಪನಿಯು ಈ ನೂತನ ಎಸ್‌ಯುವಿಯನ್ನು ವಿವಿಧ ಸ್ಥಳೀಯ ಡೀಲರ್‌ಶಿಪ್‌ಗಳಿಗೂ ತಲುಪಿಸುವುದಕ್ಕೂ ಶುರು ಮಾಡಿದೆ. ಹೊಸ ಸ್ಕಾರ್ಪಿಯೋ ಎನ್ ಬ್ಯ್ಲಾಕ್ ಎಡಿಷನ್ ಹೊರಭಾಗದಲ್ಲಿ ಹಲವು ಕಾಸ್ಮೆಟಿಕ್ ಬದಲಾವಣೆಗಳನ್ನು ಹೊಂದಿರುವುದನ್ನು ಗುರುತಿಸಬಹುದು. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಹೊಸ ಮಹೀಂದ್ರಾ ಸ್ಕಾರ್ಪಿಯೋ ಎನ್ ಬ್ಯ್ಲಾಕ್ ಎಡಿಷನ್, ಸಾಮಾನ್ಯ ಸ್ಕಾರ್ಪಿಯೋದ ಗರಿಷ್ಠ ಶ್ರೇಣಿ ರೂಪಾಂತರ (ಟಾಪ್ ಎಂಡ್ ವೇರಿಯೆಂಟ್) 'ಜಡ್8 ಎಲ್'ನ್ನು ಆಧರಿಸಿದೆ. ಹೊರಭಾಗದಲ್ಲಿ ಕಾರಿನ ಬಾಡಿ, ಒಆರ್‌ವಿಎಂ ಹಾಗೂ ಅಲಾಯ್ ವೀಲ್‌ಗಳು ಒಳಗೊಂಡಂತೆ ಎಲ್ಲವುದಕ್ಕೂ ಸಂಪೂರ್ಣವಾಗಿ ಕಪ್ಪು (ಬ್ಲ್ಯಾಕ್) ಬಣ್ಣವನ್ನು ಬಳಿಯಲಾಗಿದೆ.

New Mahindra Scorpio N Black Edition Reaching Dealership Launch Soon Details

ಈ ಕಾರು ಒಳಭಾಗವು ಕಪ್ಪು ಬಣ್ಣದ ಥೀಮ್‌ನ್ನು ಒಳಗೊಂಡಿದೆ. ಇದರೊಟ್ಟಿಗೆ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 2-ಜೋನ್ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್ ಮತ್ತು ಸನ್‌ರೂಫ್‌ನ್ನು ತನ್ನದಾಗಿಸಿಕೊಂಡಿದೆ.

ನೂತನ ಮಹೀಂದ್ರಾ ಸ್ಕಾರ್ಪಿಯೋ ಬ್ಯ್ಲಾಕ್ ಎಡಿಷನ್ ಸಹ ಸಾಮಾನ್ಯ ಸ್ಕಾರ್ಪಿಯೋದಂತೆಯೇ ಎರಡು ಪವರ್‌ಟ್ರೇನ್ ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ ಎಂದು ತಿಳಿದುಬಂದಿದೆ. ಇದರ 2.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 198 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 380 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. ಮತ್ತೊಂದು 2.2-ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 400 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ.

New Mahindra Scorpio N Black Edition Reaching Dealership Launch Soon Details

ಹೊಸ ಕಾರು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿರಲಿದೆ. ಜೊತೆಗೆ 12.12 ರಿಂದ 15.94 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ ಎನ್ನಲಾಗಿದೆ. ಇದು 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದುಕೊಂಡಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ನಡೆಸಬಹುದು.

ಈ ಸ್ಕಾರ್ಪಿಯೋ ಬ್ಯ್ಲಾಕ್ ಎಡಿಷನ್ ಎಸ್‌ಯುವಿಯು ಈಗಿರುವ ಸ್ಕಾರ್ಪಿಯೋ ರೀತಿಯಲ್ಲಿಯೇ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರಲಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

New Mahindra Scorpio N Black Edition Reaching Dealership Launch Soon Details

ದೇಶೀಯ ಮಾರುಕಟ್ಟೆಯಲ್ಲಿ ಸಾಮಾನ್ಯ ಮಹೀಂದ್ರಾ ಸ್ಕಾರ್ಪಿಯೋ ಎನ್, ರೂ.13.99 ಲಕ್ಷದಿಂದ ರೂ.24.69 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. ಅದೇ ರೀತಿಯಲ್ಲಿ 'ಬ್ಯ್ಲಾಕ್ ಎಡಿಷನ್' ಕೂಡ ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಕಾರು ಮಾರಾಟಕ್ಕೆ ಬಂದ ಮೇಲೆ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, February 21, 2025, 12:44 [IST]
English summary
New mahindra scorpio n black edition reaching dealership launch soon details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+