5-ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿರುವ ಹೊಸ ಮಾರುತಿ ಡಿಜೈರ್ ಕಾರಿಗೆ ಭಾರೀ ಬೇಡಿಕೆ
ಜನಪ್ರಿಯ ಮತ್ತು ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ (Maruti Suzuki) ತನ್ನ ಹೊಸ ನಾಲ್ಕನೇ ತಲೆಮಾರಿನ ಡಿಜೈರ್ (4th Generation Dzire) ಸೆಡಾನ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.6.79 ಲಕ್ಷವಾಗಿದೆ. ಈ ಹೊಸ ಡಿಜೈರ್ ಕಾರಿಗಾಗಿ ಈಗಾಗಲೇ ಬುಕ್ಕಿಂಗ್ ಪ್ರಾರಂಭವಾಗಿದೆ. ಈ ಡಿಜೈರ್ ಕಾರಿಗೆ ಡಿಜೈರ್ ಓಪನ್ ಬುಕ್ಕಿಂಗ್ ಅನ್ನು ಪಡೆದುಕೊಂಡಿದೆ. ಕಳೆದ ತಿಂಗಳು ಮಾತ್ರ ಮಾರುತಿ ಡಿಜೈರ್ ಕಾರಿನ 10,709 ಯುನಿಟ್‌ಗಳು ಮಾರಾಟವಾಗಿವೆ.
ಮಾರುತಿ ಡಿಜೈರ್ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ರೂ.11 ಸಾವಿರ ಟೋಕನ್ ಮೊತ್ತವನ್ನು ಮುಂಗಡವಾಗಿ ಪಾವತಿಸುವ ಮೂಲಕ 'ಡಿಜೈರ್' ಕಾರನ್ನು ಬುಕ್ಕಿಂಗ್ ಮಾಡಬಹುದು. ಈ ಹೊಚ್ಚ ಹೊಸ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಸೆಡಾನ್ ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸ ಒಳಗೊಂಡಿದೆ. ಕೆಲವೇ ದಿನಗಳ ಹಿಂದೆ ಈ ಕಾರನ್ನು ಅನಾವರಣಗೊಳಿಸಲಾಗಿದ್ದು, ವಿನ್ಯಾಸ ಸಂಬಂಧ ಹಲವಾರು ವಿಚಾರಗಳು ಬಹಿರಂಗಗೊಂಡಿವೆ.

ಈ ಡಿಜೈರ್ ಕಾರು, ಮಧ್ಯಮ ವರ್ಗದ ಜನರನ್ನು ತನ್ನತ್ತ ಆಕರ್ಷಿಸುವ ಸಲುವಾಗಿ ಪ್ರೀಮಿಯಂ ಲುಕ್‌ನ್ನು ನೀಡಲಾಗಿದೆ. ಮಾರುತಿ ಡಿಜೈರ್ ಕಾರು, ಮುಂಭಾಗ (ಫ್ರಂಟ್) ಬೃಹದಾಕಾರದ ಗ್ರಿಲ್, ಅತ್ಯುತ್ತಮವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳನ್ನು ಹೊಂದಿದೆ. ಹಿಂಭಾಗ (ರೇರ್) ಸಹ ಉತ್ತಮವಾಗಿರುವ ವಿನ್ಯಾಸ ಹೊಂದಿದ್ದು, ಇಂಗ್ಲಿಷ್ ಭಾಷೆಯ 'ವೈ' ಅಕ್ಷರದ ಆಕಾರಕ್ಕೆ ಹೋಲಿಕೆಯಾಗುವ ಟೈಲ್‌ಲೈಟ್‌ಗನ್ನು ಪಡೆದಿದೆ.
ಜೊತೆಗೆ ಡ್ಯುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಈ ಮಾರುತಿ ಡಿಜೈರ್ ಕಾರು ಕಾರಿನ ಬದಿಯು ಇದರ ಹಿಂದಿನ ಮಾದರಿಗಿಂತ ಹೆಚ್ಚು ಆಕರ್ಷಕವಾಗಿದೆ. ಇನ್ನು ಒಳಭಾಗದಲ್ಲಿ ಹೆಚ್ಚಾಗಿ ಬೀಜ್ ಇಂಟೀರಿಯರ್ ಥೀಮ ಅನ್ನು ಒಳಗೊಂಡಿದೆ. ಈ ಮಾರುತಿ ಸೆಡಾನ್ ಹತ್ತಾರು ಫೀಚರ್ಸ್ ಗಳನ್ನು ಹೊಂದಿದ್ದು, ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಅನ್ನು ಹೊಂದಿದೆ.

ಈ ಮಾರುತಿ ಡಿಜೈರ್ ಕಾರು ಕಾರಿನ ಬದಿಯು ಇದರ ಹಿಂದಿನ ಮಾದರಿಗಿಂತ ಹೆಚ್ಚು ಆಕರ್ಷಕವಾಗಿದೆ. ಇನ್ನು ಒಳಭಾಗದಲ್ಲಿ ಹೆಚ್ಚಾಗಿ ಬೀಜ್ ಇಂಟೀರಿಯರ್ ಥೀಮ ಅನ್ನು ಒಳಗೊಂಡಿದೆ. ಈ ಮಾರುತಿ ಸೆಡಾನ್ ಹತ್ತಾರು ಫೀಚರ್ಸ್ ಗಳನ್ನು ಹೊಂದಿದ್ದು, ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಅನ್ನು ಹೊಂದಿದೆ.
ಇದರೊಂದಿಗೆ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್ ಮತ್ತು 3-ಸ್ಪೋಕ್ ಸ್ಟೀರಿಂಗ್ ವೀಲ್‌ನ್ನು ಒಳಗೊಂಡಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್ ಪ್ಲೇ ಅನ್ನು ಹೊಂದಿದೆ. ಇನ್ನು ಈ ಕಾರಿನಲ್ಲಿ ಸನ್‌ರೂಫ್ (ಸಿಂಗಲ್ ಪ್ಯಾನೆಲ್), ಕಪ್‌ಹೋಲ್ಡರ್‌ಗಳೊಂದಿಗೆ ಹಿಂಭಾಗದ ಮಧ್ಯಭಾಗದ ಆರ್ಮ್‌ರೆಸ್ಟ್, ಹಿಂಭಾಗದ AC ದ್ವಾರಗಳೊಂದಿಗೆ ಆಟೋಮ್ಯಾಟಿಕ್ HVAC ಸಿಸ್ಸ್Fಅ , ವೈರ್‌ಲೆಸ್ ಚಾರ್ಜರ್, ಕ್ರೂಸ್ ಕಂಟ್ರೋಲ್ ಮತ್ತು 360-ಡಿಗ್ರಿ ಸರೌಂಡ್ ಕ್ಯಾಮೆರಾವನ್ನು ಹೊಂದಿದೆ.

ಈ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಕಾರು, ಸ್ವಿಫ್ಟ್‌ನಂತೆ 1.2-ಲೀಟರ್ 3-ಸಿಲಿಂಡರ್ ಜಡ್-ಸೀರೀಸ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 80 ಬಿಹೆಚ್‍ಪಿ ಪವರ್ ಮತ್ತು 112 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿರಲಿದೆ ಎನ್ನಲಾಗಿದೆ.
ಈ ಡಿಜೈರ್ ಕಾರಿನಲ್ಲಿ ಆರು ಏರ್‌ಬ್ಯಾಗ್‌ಗಳು, ESP, ಹಿಲ್ ಹೋಲ್ಡ್ ಅಸಿಸ್ಟ್, EBD ಜೊತೆಗೆ ABS, ಬ್ರೇಕ್ ಅಸಿಸ್ಟ್, ಎಲ್ಲಾ ಸೀಟ್‌ಗಳಿಗೆ ಮೂರು-ಪಾಯಿಂಟ್ ಸೀಟ್ ಬೆಲ್ಟ್‌ಗಳು ಮತ್ತು ISOFIX ಮೌಂಟ್‌ಗಳಂತಹ ಸುರಕ್ಷತಾ ಫೀಚರ್ಸ್ ಗಳಿವೆ. ಶುಕ್ರವಾರ ಗ್ಲೋಬಲ್ ಎನ್‌ಸಿಎಪಿ ಕ್ರ್ತಾಶ್ ಟೆಸ್ಟ್ ನಲ್ಲಿ ಈ ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್ ಲಭಿಸಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications