ನೂತನ ಮಾರುತಿ ಸುಜುಕಿ ಡಿಜೈರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, ಇಎಂಐ ಏನು?
ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಜನಪ್ರಿಯ ಸೆಡಾನ್ ಆಗಿ ಹೊರಹೊಮ್ಮಿದೆ. ಈ ಕಾರು, ಫೆಬ್ರವರಿ 1ಕ್ಕೆ ಅನ್ವಯವಾಗುವಂತೆ ರೂಪಾಂತರಗಳಿಗೆ (ವೇರಿಯೆಂಟ್) ತಕ್ಕಂತೆ ರೂ.5,000 ರಿಂದ ರೂ.10,000 ಬೆಲೆ ಏರಿಕೆಯನ್ನು ಪಡೆದುಕೊಂಡಿದೆ. ದರ ಹೆಚ್ಚಳ ನಂತರ, ನೂತನ ಸೆಡಾನ್ ಕನಿಷ್ಠ ರೂ.6.84 ಲಕ್ಷ ಮತ್ತು ರೂ.10.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ನೀವು ಹೊಸ ಕಾರನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಮಾರುತಿ ಸುಜುಕಿ ಡಿಜೈರ್ ಅತ್ಯುತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಈ ಸೆಡಾನ್‌ನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಬೆಂಗಳೂರಿನಲ್ಲಿ ಮಾರುತಿ ಸುಜುಕಿ ಡಿಜೈರ್ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದರ ಎಲ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.8.26 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2 ಲಕ್ಷವರೆಗೆ ಡೌನ್-ಪೇಮೆಂಟ್ ಪಾವತಿಸಿ ಈ ಕಾರನ್ನು ಖರೀದಿ ಮಾಡಿದರೆ, ರೂ.6.26 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.13,000 ವರೆಗೆ ಇಎಂಐ ಕಟ್ಟಬೇಕು.

ಈ ಕಾರಿನ ವಿಎಕ್ಸ್ಐ ರೂಪಾಂತರ, ರೂ.9.44 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ಇದನ್ನು ರೂ.2 ಲಕ್ಷವರೆಗೆ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.7,84 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.15,000 ವರೆಗೆ ಇಎಂಐ ಪಾವತಿ ಮಾಡಬೇಕು.
ಮಾರುತಿ ಡಿಜೈರ್ ಸೆಡಾನ್‌ನ ಝಡ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.10.77 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ಈ ಕಾರನ್ನು ರೂ.2 ಲಕ್ಷವರೆಗೆ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.8.77 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.18000 ವರೆಗೆ ಇಎಂಐ ಕಟ್ಟಬೇಕು.
ಡಿಜೈರ್ ಕಾರಿನ ವಿಎಕ್ಸ್ಐ (ಸಿಎನ್‌ಜಿ) ರೂಪಾಂತರ, ರೂ.10.59 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ರೂ.2 ಲಕ್ಷವರೆಗೆ ಡೌನ್-ಪೇಮೆಂಟ್ ಕಟ್ಟಿ ಈ ಕಾರನ್ನು ಮನೆಗೆ ತಂದರೆ, ರೂ.8.59 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ಹಾಕಿ, ವರ್ಷಕ್ಕೆ ತಿಂಗಳಿಗೆ ರೂ.17,500 ವರೆಗೆ ಇಎಂಐ ಪಾವತಿಸಬೇಕು.
ಈ ಡಿಜೈರ್ ಕಾರು 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 24.79 ರಿಂದ 33.73 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 382 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಹೊಂದಿದೆ.
ನೂತನ ಕಾರು, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಮತ್ತು ಆಟೋ ಎಸಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.
ಮಾರುತಿ ಸುಜುಕಿ ಡಿಜೈರ್ ಮಾರಾಟ ವಿವರ: ಕಳೆದ ತಿಂಗಳು (ಜನವರಿ - 2025) ಕಂಪನಿಯು ಬರೋಬ್ಬರಿ 15,383 ಯುನಿಟ್ ಡಿಜೈರ್ ಕಾರುಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 16,773 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ ಶೇಕಡ -8% ಕುಸಿತವಾಗಿದೆ. ಮುಂಬರುವ ದಿನಗಳಲ್ಲಿ ಈ ಮಾರಾಟ ಸಂಖ್ಯೆ ಸುಧಾರಿಸಿಕೊಳ್ಳುವ ನಿರೀಕ್ಷೆಯಿದೆ.
ನಾವಿಲ್ಲಿ ಮಾರುತಿ ಡಿಜೈರ್ ಸೆಡಾನ್‌ನ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಯ ಬಗ್ಗೆ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications