24.69 Km ಮೈಲೇಜ್.. 6.79 ಲಕ್ಷ.. ಹೊಸ ಮಾರುತಿ ಡಿಜೈರ್ ಟೂರ್ ಎಸ್ ಕುರಿತ ಪ್ರಮುಖಾಂಶಗಳಿವು.. ನಿಮಗೆ ತಿಳಿದಿರಲಿ!

ಮಾರುತಿ ಸುಜುಕಿ ಇಂಡಿಯಾ (Maruti Suzuki India), ಟ್ಯಾಕ್ಸಿ ಖರೀದಿ ಮಾಡಿ, ಬದುಕು ಕಟ್ಟಿಕೊಳ್ಳಬೇಕು ಎಂದು ಆಲೋಚಿಸಿರುವ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇತ್ತೀಚೆಗೆ ಡಿಜೈರ್' ಸೆಡಾನ್‌ನ ಹೊಚ್ಚ ಹೊಸ ಟ್ಯಾಕ್ಸಿ ವರ್ಷನ್ 'ಟೂರ್ ಎಸ್'ನ್ನು ಮಾರಾಟಕ್ಕೆ ತಂದಿದೆ. ಇದು ಹೆಚ್ಚು ಅತ್ಯಾಧುನಿಕವಾದ ಡಿಸೈನ್ & ಫೀಚರ್‌ಗಳನ್ನು ಹೊಂದಿದೆ. ಬನ್ನಿ.. ಈ ನೂತನ ಡಿಜೈರ್ ಟೂರ್ ಎಸ್ (Dzire Tour S) ಕಾರಿನ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.

ಬೆಲೆ (Price): ಹೊಸ ಮಾರುತಿ ಸುಜುಕಿ ಡಿಜೈರ್ ಟೂರ್ ಎಸ್ ಸೆಡಾನ್‌ ಅತಿ ಕಡಿಮೆ ದರದಲ್ಲೂ ಮಾರಾಟಕ್ಕೆ ಬಂದಿದೆ. ಈ ಕಾರಿನ ಪೆಟ್ರೋಲ್ ಮಾಡೆಲ್ ರೂ.6.79 ಲಕ್ಷ ಬೆಲೆಯನ್ನು ಹೊಂದಿದ್ದರೆ, ಸಿಎನ್‌ಜಿ ಮಾಡೆಲ್ ರೂ. 7.74 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಇದರಿಂದ ಬೆಂಗಳೂರಿನಂತಹ ಮಹಾನಗರದಲ್ಲಿ ಹೊಸ ಟ್ಯಾಕ್ಸಿ ಕೊಂಡುಕೊಳ್ಳಬೇಕು ಎಂದು ಆಲೋಚಿಸಿರುವ ಗ್ರಾಹಕರಿಗೆ ದೊಡ್ಡಮಟ್ಟದ ಅನುಕೂಲವಾಗಲಿದೆ.

New Maruti Suzuki Dzire Tour S Sedan Top Things You Should Must Know

ವಿನ್ಯಾಸ & ಬಣ್ಣಗಳು (Design & Colors): ಈ ಕಾರು ಸಾಮಾನ್ಯ ಡಿಜೈರ್ ಸೆಡಾನ್‌ನಂತೆ ನವೀನವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಇಂಗ್ಲಿಷ್ ಭಾಷೆಯ 'ವೈ' ಅಕ್ಷರಕ್ಕೆ ಹೋಲಿಕೆಯಾಗಬಲ್ಲ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ. ಜೊತೆಗೆ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್ & ಬ್ಲೂಯಿಶ್ ಬ್ಲೂ ಎಂಬ 3 ಬಣ್ಣಗಳೊಂದಿಗೂ ಸಿಗುತ್ತದೆ.

ಕಾರ್ಯಕ್ಷಮತೆ (Performance): ಮಾರುತಿ ಸುಜುಕಿ ಡಿಜೈರ್ ಟೂರ್ ಎಸ್ ಸೆಡಾನ್‌ ಪವರ್‌ಟ್ರೇನ್ ಆಯ್ಕೆಯಲ್ಲಿ ಕೂಡ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಈಗಿರುವ ಡಿಸೈರ್ ಕಾರಿನಂತೆಯೇ 1.2-ಲೀ. 3-ಸಿಲಿಂಡರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ಆದರೆ, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ಗ್ರಾಹಕರ ಖರೀದಿಗೆ ದೊರೆಯುತ್ತದೆ.

New Maruti Suzuki Dzire Tour S Sedan Top Things You Should Must Know

ಟಾಪ್ ಸ್ಪೀಡ್ & ಮೈಲೇಜ್ (Top Speed & Mileage): ಈ ಕಾರು ಗಂಟೆಗೆ 80 ಕಿ.ಮೀ ವರೆಗೆ ಗರಿಷ್ಠ ವೇಗವನ್ನು ಪಡೆಯಲಿದೆ. ಇದರ ಪೆಟ್ರೋಲ್ ಚಾಲಿತ ಮಾಡೆಲ್ 24.69 ಕೆಎಂಪಿಹೆಚ್ ಮೈಲೇಜ್ ನೀಡಲಿದೆ. ಹಾಗೆಯೇ ಸಿಎನ್‌ಜಿ ಚಾಲಿತ ಮಾಡೆಲ್‌ ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದ್ದು, 22.72 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seat Capacity & Boot Space): ಮಾರುತಿ ಡಿಜೈರ್ ಟೂರ್ ಎಸ್ ಸೆಡಾನ್‌ 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಗ್ರಾಹಕರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 382 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ವೈಶಿಷ್ಟ್ಯಗಳು (Features): ಈ ಕಾರು ಅಲಾಯ್ ವೀಲ್‌ಗಳು, ರೇರ್ ಡಿಫಾಗರ್ & ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, March 21, 2025, 8:07 [IST]
English summary
New maruti suzuki dzire tour s sedan top things you should must know
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+