Maruti Suzuki: ಹೊಸ ಮಾರುತಿ ಸುಜುಕಿ ಇ ವಿಟಾರಾದ ಕ್ರ್ಯಾಶ್ ಟೆಸ್ಟ್‌.. ಶೀಘ್ರ ಬಿಡುಗಡೆ, ಬೆಲೆ ಎಷ್ಟಿರಲಿದೆ?

ಭಾರತದಲ್ಲಿ ಮಾರುತಿ ಸುಜುಕಿ (Maruti Suzuki) ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ 'ಇ-ವಿಟಾರಾ' ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಇದೇ ಕಾರನ್ನು ಕಳೆದ ತಿಂಗಳು ನವದೆಹಲಿಯಲ್ಲಿ ಅದ್ದೂರಿಯಾಗಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿಯೂ ಪ್ರದರ್ಶಿಸಲಾಗಿತ್ತು. ಎಲ್ಲವು ಅಂದುಕೊಂಡಂತೆ ನಡೆದರೆ, ನೂತನ ಇ-ವಿಟಾರಾ ಮುಂದಿನ ತಿಂಗಳು (ಮಾರ್ಚ್) ಅದ್ದೂರಿಯಾಗಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಸದ್ಯ, ಹೊಸ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಕ್ರ್ಯಾಶ್ ಟೆಸ್ಟ್‌ಗೆ ಒಳಗಾಗಿರುವ ವಿವಿಧ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿವೆ. ಕಂಪನಿಯು ಭಾರತ್ ಎನ್‌ಸಿಎಪಿ ಅಥವಾ ಗ್ಲೋಬಲ್ ಎನ್‌ಸಿಎಪಿ ಟೆಸ್ಟ್‌ಗೆ ಈ ಕಾರನ್ನು ಇನ್ನೂ ಒಳಪಡಿಸಿಲ್ಲ. ಇದು ಕಂಪನಿ ಮಟ್ಟದಲ್ಲಿ ನಡೆಯುತ್ತಿರುವ ಆಂತರಿಕ ಪರೀಕ್ಷೆ (internal test) ಆಗಿದೆ ಎಂದು ವರದಿಯಾಗಿದೆ.

New Maruti Suzuki e Vitara Suv Crash Test Details

ಈ ಮಾರುತಿ ಇ-ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿ, ಭಾರತ ಮಾತ್ರವಲ್ಲದೆ, ಹಲವು ವಿದೇಶಿ ಮಾರುಕಟ್ಟೆಯಲ್ಲಿ ಮಾರಾಟವಾಗುವ ಸಾಧ್ಯತೆಯಿರುವುದರಿಂದ ಹೆಚ್ಚಿನ ಸೇಫ್ಟಿ ರೇಟಿಂಗ್ ಪಡೆಯಬಹುದು ಎಂದು ಅಂದಾಜಿಸಲಾಗಿದೆ. ನೂತನ ಕಾರು ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆಯನ್ನು ಒದಗಿಸಲು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

ಪ್ರಮುಖವಾಗಿ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್ಸ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಡಿಸ್ಕ್ ಬ್ರೇಕ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

New Maruti Suzuki e Vitara Suv Crash Test Details

ನೂತನ ಮಾರುತಿ ಸುಜುಕಿ ಇ-ವಿಟಾರಾ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಇದು 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮಿಟರ್‌ ರೇಂಜ್ (ಮೈಲೇಜ್) ಕೊಡಬಹುದು ಎನ್ನಲಾಗಿದೆ.

ಈ ಕಾರು ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. 10.25 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.1 - ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ಆಂಬಿಯೆಂಟ್ ಲೈಟಿಂಗ್, 10-ವೇ ಪವರ್ಡ್ ಡ್ರೈವರ್ ಸೀಟ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್‌ ಹಾಗೂ ಪನೋರಮಿಕ್ ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಹೊಸ ಮಾರುತಿ ಸುಜುಕಿ ಇ-ವಿಟಾರಾ ಎಸ್‌ಯುವಿ ರೂ.17 ಲಕ್ಷದಿಂದ ರೂ.22.50 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಜೊತೆಗೆ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಒಪ್ಯುಲೆಂಟ್ ರೆಡ್ ಮತ್ತು ಬ್ಲೂಯಿಶ್ ಬ್ಲ್ಯಾಕ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೆ ಗ್ರಾಹಕರ ಖರೀದಿಗೆ ಲಭ್ಯವಾಗುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source Link: Carwale

Article Published On: Thursday, February 27, 2025, 8:29 [IST]
English summary
New maruti suzuki e vitara suv crash test details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+