Maruti Suzuki: 2 ಕುಟುಂಬ ಓಡಾಡಬಹುದಾದ ಹೊಸ ಮಾರುತಿ ಕಾರಿನ ಬಿಡುಗಡೆಗೆ ಸಿದ್ಧತೆ.. ಬೆಲೆ ಇಷ್ಟೇನಾ?
ಮಾರುತಿ ಸುಜುಕಿ ಇಂಡಿಯಾ (Maruti Suzuki India), ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಅರೆನಾ ಮತ್ತು ನೆಕ್ಸಾ ಡೀಲರ್‌ಶಿಪ್ ಮೂಲಕ ಆಲ್ಟೊ ಕೆ10, ಸೆಲೆರಿಯೊ, ವ್ಯಾಗನ್ಆರ್, ಸ್ವಿಫ್ಟ್, ಡಿಜೈರ್, ಬ್ರೆಝಾ, ಫ್ರಾಂಕ್ಸ್ ಮತ್ತು ಬಲೆನೊ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಸದ್ಯ, ಕಂಪನಿಯು 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಹೊಚ್ಚ ಹೊಸ 'ಗ್ರ್ಯಾಂಡ್ ವಿಟಾರಾ' ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ಸಿದ್ಧತೆಯನ್ನು ನಡೆಸುತ್ತಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ವಿನ್ಯಾಸ (Design): ನೂತನ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಸ್‌ಯುವಿ ಹೊರಭಾಗದಲ್ಲಿ ಅತ್ಯಾಧುನಿಕ ವಿನ್ಯಾಸವನ್ನು ಒಳಗೊಂಡುರುವ ನಿರೀಕ್ಷೆಯಿದೆ. 7 ಆಸನಗಳನ್ನು ಹೊಂದಿರುವ ಈ ಕಾರು, ಬಹುತೇಕ 'ಇ-ವಿಟಾರಾ' ಎಲೆಕ್ಟ್ರಿಕ್ ಎಸ್‌ಯುವಿಯಂತೆ ಇರಲಿದೆ. ಆದರೂ, ನವೀನವಾಗಿರುವ ಸ್ಪ್ಲಿಟ್ ಲೈಟಿಂಗ್ ಸೆಟಪ್, ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ಕಾರ್ಯಕ್ಷಮತೆ (Performance): ಹೊಸ ಕಾರು ಹೆಚ್ಚಿನ ಸಾಮರ್ಥ್ಯದ 2 ಪವರ್‌ಟ್ರೇನ್‌ಗಳನ್ನು ಹೊಂದಿರಲಿದೆ ಎಂದು ತಿಳಿದುಬಂದಿದೆ. ಇದು 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.5-ಲೀಟರ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಪಡೆದಿರುವ ಸಾಧ್ಯತೆಯಿದೆ. ಜೊತೆಗೆ ಗರಿಷ್ಠ ಮೈಲೇಜ್ ಕೂಡ ನೀಡಲಿದೆ ಎಂದು ಅಂದಾಜಿಸಲಾಗಿದೆ.
ವೈಶಿಷ್ಟ್ಯಗಳು (Features): ಈ 7 ಆಸನ ಆಯ್ಕೆ ವ್ಯವಸ್ಥೆ ಹೊಂದಿರುವ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಪ್ರಮುಖವಾಗಿ ಈಗಿರುವ ಮಾಡೆಲ್‌ನಂತೆ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಹೆಡ್ಸ್-ಅಪ್ ಡಿಸ್‌ಪ್ಲೇಯನ್ನು ಪಡೆದಿರಬಹುದು ಎನ್ನಲಾಗಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features): ನೂತನ ಗ್ರ್ಯಾಂಡ್ ವಿಟಾರಾ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲಿದೆ ಎಂದು ತಿಳಿದುಬಂದಿದೆ. ಸುರಕ್ಷತೆಯ ದೃಷ್ಟಿಯಿಂದ 6ಕ್ಕೂ ಅಧಿಕ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡುರುವ ನಿರೀಕ್ಷೆಯಿದೆ
ಬೆಲೆ & ನಿರೀಕ್ಷಿತ ಬಿಡುಗಡೆ ದಿನಾಂಕ (Price & Expected launch Date): ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ, ಬಜೆಟ್ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ರೂ.15 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿರಬಹುದು ಎನ್ನಲಾಗಿದೆ. ಜೊತೆಗೆ ಈ ವರ್ಷದ (2025) ಮಧ್ಯಭಾಗ ಅಥವಾ ಅದಕ್ಕೂ ಮುಂಚಿತವಾಗಿ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ.

ಇನ್ನು, 7 ಆಸನಗಳನ್ನು ಪಡೆದಿರುವ ನೂತನ ಗ್ರ್ಯಾಂಡ್ ವಿಟಾರಾ ಕಾರಿಗೆ ಹ್ಯುಂಡೈ ಅಲ್ಕಾಜರ್, ಎಂಜಿ ಹೆಕ್ಟರ್ ಪ್ಲಸ್ ಮತ್ತು ಟಾಟಾ ಸಫಾರಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ. ಈ ಎಸ್‌ಯುವಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡು ದೇಶೀಯ ಮಾರುಕಟ್ಟೆಗೆ ಬಿಡುಗಡೆಯಾಗಬಹುದು ಎನ್ನಲಾಗಿದೆ. ಆ ನಂತರ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications