26 Km ಮೈಲೇಜ್, 5-ಸೀಟರ್.. 13 ಲಕ್ಷ, ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಸಿಎನ್‌ಜಿ ಕುರಿತ ಪ್ರಮುಖಾಂಶಗಳಿವು!

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಪ್ರಖ್ಯಾತ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇತ್ತೀಚೆಗೆ ಈ ಕಾರಿನ 2025ರ ಸಿಎನ್‌ಜಿ ಮಾಡೆಲ್‌ನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲಾಯಿತು. ಇದರ ವಿನ್ಯಾಸ ಹಾಗೂ ವೈಶಿಷ್ಟ್ಯಗಳು ಸ್ಟ್ಯಾಂಡರ್ಡ್ ಮಾಡೆಲ್‌ನಂತೆ ಇದ್ದು, ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ. ಆದರೆ, ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಸೇರ್ಪಡೆ ಮಾಡಲಾಗಿದೆ. ಬನ್ನಿ, ನೂತನ 'ಗ್ರ್ಯಾಂಡ್ ವಿಟಾರಾ ಸಿಎನ್‌ಜಿ' ಎಸ್‌ಯುವಿಯ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಪ್ರಮುಖಾಂಶಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ಹೊಚ್ಚ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಸಿಎನ್‌ಜಿ ಎಸ್‌ಯುವಿಯು ಬಜೆಟ್ ಬೆಲೆಯಲ್ಲಿಯೇ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದು ರೂ.13.48 ಲಕ್ಷದಿಂದ ರೂ.15.62 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಡೆಲ್ಟಾ & ಜಿಟಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

New Maruti Suzuki Grand Vitara Cng Suv Top Things

ವಿನ್ಯಾಸ (Design):

ಈ ಕಾರು ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾಗಿರುವ ಹೆಡ್‌ಲೈಟ್‌ಗಳು, ಡಿಆರ್‌ಎಲ್‌ಗಳು ಮತ್ತು ಬಂಪರ್‌ಗಳನ್ನು ಒಳಗೊಂಡಿದೆ. ಇದು 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರವು ಇದೆ. ಜೊತೆಗೆ 210 ಎಂಎಂ ಗ್ರ್ಯಾಂಡ್ ಕ್ಲಿಯರೆನ್ಸ್ ಹಾಗೂ 2600 ಎಂಎಂ ಉದ್ದದ ವೀಲ್ ಬೇಸ್‌ನ್ನು ಪಡೆದಿದೆ.

ಕಾರ್ಯಕ್ಷಮತೆ (Performance):

ನೂತನ ಗ್ರ್ಯಾಂಡ್ ವಿಟಾರಾ ಸಿಎನ್‌ಜಿ ಎಸ್‌ಯುವಿಯು ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀ. ಪೆಟ್ರೋಲ್/ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 87.8 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 121.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 26.6 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ.

New Maruti Suzuki Grand Vitara Cng Suv Top Things

ಆಸನ ಆಯ್ಕೆ (Seating Capacity):

ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸ್ವಲ್ಪ ಮಟ್ಟಿಗೆ ದೂಡ್ಡ ಗಾತ್ರದ ಬೂಟ್ ಸ್ಪೇಸ್‌ನ್ನು ಹೊಂದಿದೆ. ಜೊತೆಗೆ 45 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

ವೈಶಿಷ್ಟ್ಯಗಳು (Features):

ಈ ಕಾರು ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್‌, ರೇರ್ ಎಸಿ ವೆಂಟ್‌ಗಳು, ಕನೆಕ್ಟೆಡ್ ಕಾರ್ ಟೆಕ್ ಮತ್ತು ಕೀಲೆಸ್ ಎಂಟ್ರಿಯನ್ನು ಒಳಗೊಂಡಿದೆ.

New Maruti Suzuki Grand Vitara Cng Suv Top Things

ಸುರಕ್ಷತಾ ವೈಶಿಷ್ಟ್ಯಗಳು (Safety Features):

ನೂತನ ಸಿಎನ್‌ಜಿ ಎಸ್‌ಯುವಿಯು ಸುರಕ್ಷತೆಗೂ ಹೆಸರುವಾಗಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

ಸ್ಟ್ಯಾಂಡರ್ಡ್ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯ ವಿಶೇಷತೆಗಳೇನು:

ಇದು ರೂ.11.42 ಲಕ್ಷದಿಂದ ರೂ.20.68 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀ. ಮೈಲ್ಡ್ ಹೈಬ್ರಿಡ್ ಮತ್ತು 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 19.38 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Article Published On: Thursday, June 19, 2025, 11:25 [IST]
English summary
New maruti suzuki grand vitara cng suv top things
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+