Swift: ಹೊಸ ಮಾರುತಿ ಸ್ವಿಫ್ಟ್ ಕಾರಿನ ಪರೀಕ್ಷೆ.. 26 ಕಿ.ಮೀ ಮೈಲೇಜ್, ಸೇಫ್ಟಿಗಾಗಿ ADAS ಫೀಚರ್?

ಮಾರುತಿ ಸುಜುಕಿ ಸ್ವಿಫ್ಟ್‌ (Maruti Suzuki Swift) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದುಕೊಂಡಿರುವುದರಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತದೆ. ಕಳೆದ ವರ್ಷ ನಾಲ್ಕನೇ ತಲೆಮಾರಿನ (4th Generation) ಸ್ವಿಫ್ಟ್ ಕಾರನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಆದರೆ, ಈ ಹ್ಯಾಚ್‌ಬ್ಯಾಕ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ 'ಸುಜುಕಿ ಸ್ವಿಫ್ಟ್‌'ನಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿರಲಿಲ್ಲ.

ಸದ್ಯ, ಇದೇ 'ಸುಜುಕಿ ಸ್ವಿಫ್ಟ್‌ ಕಾರನ್ನು ದೇಶೀಯ ರಸ್ತೆಗಿಳಿಸಲು 'ಮಾರುತಿ ಸುಜುಕಿ' ಕಂಪನಿ ತೀರ್ಮಾನಿಸಿದಂತೆ ಭಾಸವಾಗುತ್ತಿದೆ. ನೂತನ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ನವದೆಹಲಿಯಲ್ಲಿ ಪ್ರಾಯೋಗಿಕ ಸಂಚಾರ ನಡೆಸುವಾಗ ಕಂಡುಬಂದಿದೆ. ಅದಕ್ಕೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿವೆ. ಎಲ್ಲವು ಅಂದುಕೊಂಡಂತೆ ನಡೆದರೆ, ಮುಂಬರುವ ಕೆಲವೇ ತಿಂಗಳಲ್ಲಿ ಈ ಹೊಸ ಕಾರು ಬಿಡುಗಡೆಯಾಗಲಿದೆ.

New Maruti Suzuki Swift Spotted Testing Expected Hybrid Engine And ADAS Safety Features Details

ಸ್ಪೈ ಫೋಟೋದಲ್ಲಿ ಕಾಣಿಸಿಕೊಂಡಿರುವ ನೂತನ 'ಮಾರುತಿ ಸುಜುಕಿ ಸ್ವಿಫ್ಟ್‌' ಹ್ಯಾಚ್‌ಬ್ಯಾಕ್, ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಸ್ಪೋರ್ಟಿ ಬಂಪರ್‌ನ್ನು ಪಡೆದಿದೆ. ಈ ಕಾರನ್ನು ಸೂಕ್ಷ್ಮವಾಗಿ ಗಮನಿಸಿದಾಗ ಮುಂಭಾಗವಿರುವ ಗ್ರಿಲ್‌ನಲ್ಲಿ 'ರೇಡಾರ್ ಮಾಡ್ಯೂಲ್' ಹೊಂದಿರುವುದನ್ನು ಕಾಣಬಹುದಾಗಿದೆ. ಈ ಹಿನ್ನೆಲೆ, ನೂತನ ಹ್ಯಾಚ್‌ಬ್ಯಾಕ್ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ವೈಶಿಷ್ಟ್ಯವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಎಡಿಎಎಸ್ ಎಂಬುದು ಸುರಕ್ಷಿತ ವೈಶಿಷ್ಟ್ಯವಾಗಿದೆ. ಇದು ಪ್ರಯಾಣಿಕರ ರಕ್ಷಣೆಗಾಗಿ ಲೈನ್ ಡಿಪಾರ್ಚರ್ ವಾರ್ನಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಬ್ಲೈಂಡ್ ಸ್ಪಾಟ್ ಮಾನಿಟರಿಂಗ್, ಆಟೋಮೆಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಡ್ರೈವರ್ ಅಸಿಸ್ಟೆನ್ಸ್, ರೇರ್ ಕ್ರಾಸ್ ಟ್ರಾಫಿಕ್ ಅಲರ್ಟ್, ಟ್ರಾಕ್ಷನ್ ಕಂಟ್ರೋಲ್ ಮತ್ತು ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ ಸೇರಿದಂತೆ ವಿವಿಧ ಅಂಶಗಳನ್ನು ಒಳಗೊಂಡಿರುತ್ತದೆ.

New Maruti Suzuki Swift Spotted Testing Expected Hybrid Engine And ADAS Safety Features Details

ಪರೀಕ್ಷಾರ್ಥ ಸಂಚಾರದ ವೇಳೆ ಕಾಣಿಸಿಕೊಂಡ ಮಾರುತಿ ಸುಜುಕಿ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್, ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಎಂಜಿನ್ ಹೊಂದಿರುವ ಸಾಧ್ಯತೆಯಿದೆ. ಜೊತೆಗೆ 24.8 ರಿಂದ 26.3 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡಬಹುದು ಎನ್ನಲಾಗಿದೆ. ಪ್ರಸ್ತುತವಿರುವ ಸ್ವಿಫ್ಟ್‌ ಕಾರಿಗೆ ಹೋಲಿಕೆ ಮಾಡಿದರೆ, ಈ ಹೈಬ್ರಿಡ್ ಹ್ಯಾಚ್‌ಬ್ಯಾಕ್ ಸ್ವಲ್ಪ ಹೆಚ್ಚಿನ ದರ ಹೊಂದಿರುವ ನಿರೀಕ್ಷೆಯಿದೆ.

ಇವತ್ತು ದೇಶೀಯ ಮಾರುಕಟ್ಟೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿರುವ ಸಾಮಾನ್ಯ ಮಾರುತಿ ಸ್ವಿಫ್ಟ್‌ ಕಾರು, ಕನಿಷ್ಠ ರೂ.6.49 ಲಕ್ಷ ಮತ್ತು ಗರಿಷ್ಠ ರೂ.9.60 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 24.80 ರಿಂದ 32.85 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರು, 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ನಡೆಸಬಹುದು.

New Maruti Suzuki Swift Spotted Testing Expected Hybrid Engine And ADAS Safety Features Details

ಈ ಕಾರು, ಇನ್ಫೋಟೈನ್‌ಮೆಂಟ್ ಸ್ಕ್ರೀನ್‌ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋ-ಕ್ಲೇಮೇಟ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್ ಮತ್ತು ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, January 23, 2025, 16:54 [IST]
English summary
New maruti suzuki swift spotted testing expected hybrid engine and adas safety features details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+