29 ಕಿ.ಮೀ ಮೈಲೇಜ್.. ಬೆಲೆಯೂ ಅಗ್ಗ, ಹೊಸ ಮಾರುತಿ ಸುಜುಕಿ ವಿಕ್ಟೋರಿಸ್ ಕಾರಿನ ಆನ್-ರೋಡ್ ದರವೆಷ್ಟು.. EMI ಏನು?

ನಿನ್ನೆಯಷ್ಟೇ ಹೊಚ್ಚ ಹೊಸ ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಕಾಂಪ್ಯಾಕ್ಟ್ ಎಸ್‌ಯುವಿ ಅದ್ದೂರಿಯಾಗಿ ಮಾರಾಟಕ್ಕೆ ಬಂದಿದೆ. ಇದು ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ನೂತನ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ 'ವಿಕ್ಟೋರಿಸ್' ಅತ್ಯುತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಈ ಕಾರಿನ ಆನ್-ರೋಡ್ ಬೆಲೆ (On-Road Price), ಮೈಲೇಜ್ (Mileage) ಮತ್ತು ಇಎಂಐ (EMI) ಆಯ್ಕೆಯ ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಈ ಎಸ್‌ಯುವಿಯು ಹಲವು ವಿಧದಲ್ಲಿ ಲಭ್ಯವಿದೆ. ಇದರ ಎಲ್ಎಕ್ಸ್ಐ (ಮೈಲ್ಡ್ ಹೈಬ್ರಿಡ್ - ಪೆಟ್ರೋಲ್) ರೂಪಾಂತರ, ರೂ.12.17 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.7.17 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.14,500 ವರೆಗೆ ಇಐಎಂ ಕಟ್ಟಬೇಕು.

New Maruti Suzuki Victoris On Road Price Mileage And Emi Details

ಇದೇ ಕಾರಿನ ವಿಎಕ್ಸ್ಐ (ಮೈಲ್ಡ್ ಹೈಬ್ರಿಡ್ - ಪೆಟ್ರೋಲ್) ರೂಪಾಂತರ, ರೂ.13.66 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.8.66 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.17,500 ವರೆಗೆ ಇಐಎಂ ಪಾವತಿ ಮಾಡಬೇಕು.

ಮತ್ತೊಂದು ವಿಎಕ್ಸ್ಐ (ಸ್ಟ್ರಾಂಗ್ ಹೈಬ್ರಿಡ್ - ಪೆಟ್ರೋಲ್+ಎಲೆಕ್ಟ್ರಿಕ್) ರೂಪಾಂತರ, ರೂ.18.91 ಲಕ್ಷ ಆನ್-ರೋಡ್ ದರವನ್ನು ಹೊಂದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.13,91 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.28,200 ವರೆಗೆ ಇಐಎಂ ಕಟ್ಟಬೇಕು.

ಇನ್ನೊಂದು ಎಲ್ಎಕ್ಸ್ಐ (ಸಿಎನ್‌ಜಿ) ರೂಪಾಂತರ, ರೂ.13.31 ಲಕ್ಷ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.8.31 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.17,000 ವರೆಗೆ ಇಐಎಂ ಪಾವತಿಸಬೇಕು.

ಈ ಕಾರು ಶಕ್ತಿಶಾಲಿಯಾದ ಮೂರು ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀಟರ್ ಮೈಲ್ಡ್ ಹೈಬ್ರಿಡ್ (21.06 ಕಿ.ಮೀ ಮೈಲೇಜ್), 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (28.65 ಕಿ.ಮೀ ಮೈಲೇಜ್) ಹಾಗೂ 1.5-ಲೀಟರ್ ಸಿಎನ್‌ಜಿ (27.02 ಕಿ.ಮೀ ಮೈಲೇಜ್) ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ.

ನೂತನ ವಿಕ್ಟೋರಿಸ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ತನ್ನದಾಗಿಸಿಕೊಂಡಿದೆ. ಸ್ಪ್ಲೆಂಡಿಡ್ ಸಿಲ್ವರ್, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ, ಆರ್ಕ್ಟಿಕ್ ವೈಟ್ ಮತ್ತು ಮಿಸ್ಟಿಕ್ ಗ್ರೀನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವೀಕೆಂಡ್‌ಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 373 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಇದು 10 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, 64 ಕಲರ್ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

ಗಮನಿಸಿ: ಈ ಕಾರಿನ ಕೆಲವೇ ರೂಪಾಂತರಗಳ (ವೇರಿಯೆಂಟ್) ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಅತಿ ಶೀಘ್ರದಲ್ಲೇ ವಿತರಣೆಗಳು ಶುರುವಾಗಲಿದೆ. ಹೆಚ್ಚಿನ ವಿವರಗಳಿಗಾಗಿ ಸಮೀಪದ ಅರೆನಾ ಶೋರೂಂಗೆ ಭೇಟಿ ನೀಡಿರಿ.

More from DriveSpark

Article Published On: Tuesday, September 16, 2025, 12:36 [IST]
English summary
New maruti suzuki victoris on road price mileage and emi details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+