28.65 Km ಮೈಲೇಜ್.. ಹೊಸ ಮಾರುತಿ ಸುಜುಕಿ ವಿಕ್ಟೋರಿಸ್ ಡೀಲರ್‌ಶಿಪ್‌ಗಳಿಗೆ ಬಂದೇ ಬಿಡ್ತು, ಶೀಘ್ರ ಬಿಡುಗಡೆ.. ಬೆಲೆ ಇಷ್ಟೇನಾ?

ಇದೇ ಬುಧವಾರದಂದು ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಎಸ್‌ಯುವಿಯನ್ನು ಅದ್ದೂರಿಯಾಗಿ ಪರಿಚಯಿಸಲಾಗಿತ್ತು. ಈ ಕಾರು ಅರೆನಾ ಡೀಲರ್‌ಶಿಪ್ ಮೂಲಕ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ಇದು ಹಲವು ಹೊಸತನಗಳಿಗೆ ಸಾಕ್ಷಿಯಾಗಿದ್ದು, ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಅತಿ ಶೀಘ್ರದಲ್ಲಿ ಬಿಡುಗಡೆಯಾಗಲಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುವ ಸಾಧ್ಯತೆಯಿದೆ. ಹ್ಯುಂಡೈ ಕ್ರೆಟಾ, ಹೋಂಡಾ ಎಲಿವೇಟ್, ಟಾಟಾ ನೆಕ್ಸಾನ್‌, ಕಿಯಾ ಸೆಲ್ಟೋಸ್ ಹಾಗೂ ಸ್ಕೋಡಾ ಕುಶಾಕ್‌ ಎಸ್‌ಯುವಿಗಳೊಂದಿಗೂ ಸ್ಪರ್ಧಿಸಬೇಕಾಗಿದೆ.

ಸದ್ಯ, ದೇಶಾದ್ಯಂತ ಡೀಲರ್‌ಶಿಪ್‌ಗಳಿಗೆ ನೂತನ ಮಾರುತಿ ಸುಜುಕಿ ವಿಕ್ಟೋರಿಸ್‌ನ್ನು ತಲುಪಿಸುವ ಕಾರ್ಯಕ್ಕೆ ಕಂಪನಿಯು ಚಾಲನೆ ನೀಡಿದೆ. ಈ ಕಾರು ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ರೂ. 9.70 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಬುಕ್ಕಿಂಗ್ ಕೂಡ ಶುರುವಾಗಿದೆ. ಆಸಕ್ತ ಗ್ರಾಹಕರು ರೂ.11,000 ಮುಂಗಡ ಹಣ ಪಾವತಿಸಿ, ಆರ್ಡರ್ ಮಾಡಬಹುದು.

New Maruti Suzuki Victoris Suv Arrives Dealerships Launch Soon Details

ಹೊಸ ವಿಕ್ಟೋರಿಸ್‌ ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ, ಜಡ್ಎಕ್ಸ್ಐ (ಒ), ಜಡ್ಎಕ್ಸ್ಐ ಪ್ಲಸ್ ಹಾಗೂ ಜಡ್ಎಕ್ಸ್ಐ (ಒ) ಪ್ಲಸ್ ಎಂಬ 6 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. ಸ್ಪ್ಲೆಂಡಿಡ್ ಸಿಲ್ವರ್, ಎಟರ್ನಲ್ ಬ್ಲೂ, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ ಮತ್ತು ಮಿಸ್ಟಿಕ್ ಗ್ರೀನ್ ಒಳಗೊಂಡಂತೆ ಹಲವು ಬಣ್ಣಗಳನ್ನು ಪಡೆದಿದೆ.

ಈ ಕಾರು 4,360 ಎಂಎಂ ಉದ್ದ, 1,655 ಎಂಎಂ ಅಗಲ ಹಾಗೂ 1,795 ಎಂಎಂ ಎತ್ತರ ಕೂಡ ಇದೆ. 2,600 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಬಹುದು.

New Maruti Suzuki Victoris Suv Arrives Dealerships Launch Soon Details

ನೂತನ ಮಾರುತಿ ವಿಕ್ಟೋರಿಸ್ ಕಾರು ಹೆಚ್ಚು ಶಕ್ತಿಯುತವಾಗಿರುವ 3 ಪವರ್‌ಟ್ರೇನ್‌ ಆಯ್ಕೆಯನ್ನು ಒಳಗೊಂಡಿದೆ. ಇದರ 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್, 103 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.

ಮತ್ತೊಂದು 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 116 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 141 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಕೇವಲ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಮಾತ್ರ ಒಳಗೊಡಿದೆ.

New Maruti Suzuki Victoris Suv Arrives Dealerships Launch Soon Details

ಇನ್ನೊಂದು 1.5-ಲೀಟರ್ ಸಿಎನ್‌ಜಿ ಎಂಜಿನ್‌, 88.3 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 121.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಈ ಕಾರು ರೂಪಾಂತರಗಳಿಗೆ ತಕ್ಕಂತೆ ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 19 ರಿಂದ 28.65 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಹೊಸ ಮಾರುತಿ ಸುಜುಕಿ ವಿಕ್ಟೋರಿಸ್ ಎಸ್‌ಯುವಿಯ ಕ್ಯಾಬಿನ್ ವಿನ್ಯಾಸವು ತುಂಬಾ ಅದ್ಭುತವಾಗಿದೆ. 10-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, 64-ಕಲರ್ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ - ಫ್ರಂಟ್ ಸೀಟ್‌ಗಳು ಮತ್ತು ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Source: Cars With Anurag

More from DriveSpark

Article Published On: Saturday, September 6, 2025, 11:11 [IST]
English summary
New maruti suzuki victoris suv arrives dealerships launch soon details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+