ನಿನ್ನೆಯಷ್ಟೇ ಬಿಡುಗಡೆ.. ಭೂಲೋಕದ ಚಲಿಸುವ ಅರಮನೆ, 7-ಆಸನಗಳ MG M9 Mpv ಕುರಿತ ಪ್ರಮುಖಾಂಶಗಳಿವು!
ನಿನ್ನೆಯಷ್ಟೇ ಬಹುನಿರೀಕ್ಷಿತ ಎಂಜಿ ಎಂ9 ಎಲೆಕ್ಟ್ರಿಕ್ ಎಂಪಿವಿ (MG M9 Electric Mpv) ಬಿಡುಗಡೆಗೊಂಡಿದೆ. ಇದು ಹೆಚ್ಚು ವಿಶಾಲವಾಗಿರುವ ಕಾರಾಗಿದ್ದು, ತುಂಬಾ ಚೆನ್ನಾಗಿರುವ ವಿನ್ಯಾಸ & ಹಲವು ಅತ್ಯಾಧುನಿಕವಾದ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಜೊತೆಗೆ ಉತ್ತಮವಾದ ಕಾರ್ಯಕ್ಷಮತೆಗೂ ಹೆಸರುವಾಸಿಯಾಗಿದ್ದು, ಹೆಚ್ಚಿನ ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಹೀಗಾಗಿ, 2 ಸಣ್ಣ ಕುಟುಂಬಗಳು ಸುಲಭವಾಗಿ ಪ್ರಮಾಣ ಮಾಡಬಹುದಾಗಿದೆ. ನಾವಿಲ್ಲಿ ಈ ಕಾರಿನ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ (Price):
ಹೊಚ್ಚ ಹೊಸ ಎಂಜಿ ಎಂ9 ಎಲೆಕ್ಟ್ರಿಕ್ ಎಂಪಿವಿ ದುಬಾರಿ ಬೆಲೆಯನ್ನು ಹೊಂದಿದೆ. ಶ್ರೀಮಂತ ಗ್ರಾಹಕರು ಮಾತ್ರ ಖರೀದಿ ಮಾಡಲು ಸಾಧ್ಯವಾಗಲಿದೆ. ಇದು ರೂ.69.90 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬೆಂಗಳೂರಿನಲ್ಲಿ ರೂ.81.52 ಲಕ್ಷ ಆನ್-ರೋಡ್ ಬೆಲೆಯನ್ನು ಒಳಗೊಂಡಿರುವ ನೀರಿಕ್ಷೆಯಿದೆ.

ವಿನ್ಯಾಸ & ಬಣ್ಣಗಳು (Design & Colors):
ಈ ಕಾರು ಹೊರಭಾಗದಲ್ಲಿ ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಅದು ಎಲ್ಲರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಕನೆಕ್ಟ್ಡ್ ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಸ್ಲೈಡಿಂಗ್ ಡೋರ್‌ಗಳು ಮತ್ತು ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಮೆಟಲ್ ಬ್ಲ್ಯಾಕ್, ಕಾಂಕ್ರೀಟ್ ಗ್ರೇ ವಿತ್ ಬ್ಲ್ಯಾಕ್ ರೂಫ್ ಹಾಗೂ ಪರ್ಲ್ ಲಸ್ಟರ್ ವೈಟ್ ವಿತ್ ಬ್ಲ್ಯಾಕ್ ರೂಫ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ನೂತನ ಎಂಜಿ ಎಂ9 ಎಂಪಿವಿಯು 7 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 465 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. 5,200 ಎಂಎಂ ಉದ್ದ, 2,000 ಎಂಎಂ ಅಗಲ, 1,800 ಎಂಎಂ ಎತ್ತರ ಹಾಗೂ 3200 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಕಾರ್ಯಕ್ಷಮತೆ (Performance):
ಇದು ಸಾಕಷ್ಟು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. 90 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 548 ಕಿಲೋಮೀಟರ್ ಓಡುತ್ತದೆ. ಈ ಕಾರಿನಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 242 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಚಾರ್ಜಿಂಗ್ ಸಮಯ & ಡ್ರೈವಿಂಗ್ ಮೋಡ್‌ಗಳು (Charging Timing & Driving Modes):
ಹೊಸ ಎಂಜಿ ಎಂ9 ಎಲೆಕ್ಟ್ರಿಕ್ ಎಂಪಿವಿ 160 ಕೆಡಬ್ಲ್ಯೂ ಡಿಸಿ ಫಾಸ್ಟ್ ಚಾರ್ಜಿಂಗ್ ಆಯ್ಕೆಯಲ್ಲಿ ಕೇವಲ 90 ನಿಮಿಷಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಆಗಿ ಬಿಡುತ್ತದೆ. ಇಕೋ, ನಾರ್ಮಲ್ ಮತ್ತು ಸ್ಪೋರ್ಟ್ ಎಂಬ ಮೂರು ವಿಭಿನ್ನವಾದ ಡ್ರೈವಿಂಗ್ ಮೋಡ್‌ಗಳನ್ನು ಹೊಂದಿದೆ.

ವೈಶಿಷ್ಟ್ಯಗಳು (Features):
ಈ ಕಾರಿನ ಕ್ಯಾಬಿನ್ ವಿನ್ಯಾಸವು ಸಾಕಷ್ಟು ಐಷಾರಾಮಿಯಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ (7-ಇಂಚು), ವೈರ್‌ಲೆಸ್ ಫೋನ್ ಚಾರ್ಜರ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಕಪ್ ಹೋಲ್ಡರ್‌ಗಳು, ಸನ್‌ರೂಫ್, ಪ್ರೀಮಿಯಂ ಜೆಬಿಎಲ್ ಸೌಂಡ್ ಸಿಸ್ಟಮ್, 64-ಕಲರ್ ಆಂಬಿಯೆಂಟ್ ಲೈಟಿಂಗ್ ಹಾಗೂ ಕೀಲೆಸ್ ಎಂಟ್ರಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ನೂತನ ಎಂಜಿ ಎಂ9 ಎಂಪಿವಿಯು ಪ್ರಯಾಣಿಕರ ರಕ್ಷಣೆಗಾಗಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಫ್ರಂಟ್ & ರೇರ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.


Click it and Unblock the Notifications








