Nissan: 5-ಸೀಟರ್.. ಹೊಸ ನಿಸ್ಸಾನ್ SUV ಪರಿಚಯ, ಬೆಲೆ ಎಷ್ಟು.. ವಿಶೇಷತೆಗಳೇನು?
ಜಪಾನ್ ಮೂಲದ ನಿಸ್ಸಾನ್ (Nissan) ಜಗಮೆಚ್ಚಿದ ವಾಹನ ತಯಾರಕ ಕಂಪನಿ ಎಂದೇ ಹೆಸರುವಾಗಿದೆ. ಭಾರತ ಸೇರಿದಂತೆ ಹತ್ತಾರು ದೇಶಗಳಲ್ಲಿ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಬ್ರೆಜಿಲ್‌ನ ಸಾವೊ ಪಾಲೊದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಹೊಚ್ಚ ಹೊಸ 'ಕೈಟ್' ಹೆಸರಿನ ಎಸ್‌ಯುವಿಯನ್ನು ಜಾಗತಿಕವಾಗಿವಾಗಿ ಪರಿಚಯಿಸಿದೆ. ಬನ್ನಿ, ಈ ಕಾರಿನ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ನೂತನ ನಿಸ್ಸಾನ್ ಕೈಟ್ (Nissan Kait) ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಭಾರತೀಯ ರೂಪಾಯಿ ಪ್ರಕಾರ, ರೂ.20 ಲಕ್ಷ ದರವನ್ನು ಹೊಂದಿದೆ. ಬ್ರೆಜಿಲ್‌ನಲ್ಲಿರುವ ಕಂಪನಿಯ ರೆಸೆಂಡೆ ಉತ್ಪಾದನಾ ಘಟಕದಲ್ಲಿ ಈ ಕಾರನ್ನು ತಯಾರಿಸಲಾಗುತ್ತಿದೆ. 2026ರಿಂದ 20ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡಲು ಸಹ ತೀರ್ಮಾನಿಸಲಾಗಿದೆ.

ಇದು ಆಕ್ಟಿವ್, ಸೆನ್ಸ್ ಪ್ಲಸ್, ಅಡ್ವಾನ್ಸ್ ಪ್ಲಸ್ ಮತ್ತು ಎಕ್ಸ್‌ಕ್ಲೂಸಿವ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಶಾರ್ಪರ್ ಸ್ಪ್ಲಿಟ್ ಎಲ್ಇಡಿ ಹೆಡ್‌ಲೈಟ್‌ಗಳು, ಡೈನಾಮಿಕ್ ಎಲ್ಇಡಿ ಡಿಆರ್‌ಎಲ್‌ಗಳು, ಬಾಡಿ ಕಲರ್ ಡೋರ್ ಹ್ಯಾಂಡಲ್‌ಗಳು, ಶಾರ್ಪರ್ ಕನೆಕ್ಟ್ಡ್ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದೆ.
ಈ ಕಾರು ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,304 ಮಿ.ಮೀ ಉದ್ದ, 1,760 ಮಿ.ಮೀ ಅಗಲ ಹಾಗೂ 1,611 ಮಿ.ಮೀ ಎತ್ತರವಿದೆ. ಜೊತೆಗೆ 2,620 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಹಲವು ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ.
ಹೊಸ 'ನಿಸ್ಸಾನ್ ಕೈಟ್' ಎಸ್‌ಯುವಿ, 5 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 432 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಇದು ಸಾಕಷ್ಟು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.6-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಫ್ಲೆಕ್ಸ್ ಫ್ಯುಯೆಲ್ (ಪೆಟ್ರೋಲ್ + ಎಥೆನಾಲ್) ಎಂಜಿನ್‌ನ್ನು ಹೊಂದಿದೆ. ಇದು 'ಪೆಟ್ರೋಲ್' ಮೋಡ್‌ನಲ್ಲಿ 110 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 146 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ.
ಅದೇ ರೀತಿಯಲ್ಲಿ 'ಎಥೆನಾಲ್' ಮೋಡ್‌ನಲ್ಲಿ 113 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 149 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 11 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7 ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಆಟೋಮೆಟಿಕ್ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ ಮಲ್ಟಿಪಲ್ ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಒಟ್ಟಾರೆಯಾಗಿ, ವಿನೂತನವಾಗಿರುವ 'ನಿಸ್ಸಾನ್ ಕೈಟ್' ಎಸ್‌ಯುವಿ ಪಾದಾರ್ಪಣೆ ಮಾಡಿರುವುದು ನಾನಾ ದೇಶಗಳ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಈ ಕಾರು ನೋಡುಗರ ಕಣ್ಮನ ಸೆಳೆಯುವಂತಿದೆ. ಇದು ಭಾರತದಲ್ಲಿ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬೇಕೆಂಬುದು ದೇಶೀಯ ಖರೀದಿದಾರರ ಆಶಯವಾಗಿದೆ. ಆದರೆ, ಈ ಕುರಿತಂತೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಪ್ರಕಟಗೊಂಡಿಲ್ಲ.


Click it and Unblock the Notifications








