24.5 Km ಮೈಲೇಜ್.. 5-ಸೀಟರ್, ಲಕ್ಷುರಿ ಫೀಚರ್‌.. ಹೊಸ Renault Duster ಮತ್ತೆ ಮಾರಾಟಕ್ಕೆ, 8 ಲಕ್ಷ ಬೆಲೆ?

ರೆನಾಲ್ಟ್ ಡಸ್ಟರ್ (Renault Duster) ಜಬರ್ದಸ್ತ್ ಎಸ್‌ಯುವಿಯಾಗಿದೆ. ದೇಶೀಯವಾಗಿ ಈ ಕಾರನ್ನು 2012ರಲ್ಲಿ ಬಿಡುಗಡೆಗೊಳಿಸಲಾಯಿತು. 2020ರವರೆಗೆ ಮಾರಾಟದಲ್ಲಿತ್ತು. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತಿದ್ದರು. ಆದರೆ, ನಾನಾ ಕಾರಣಗಳಿಗೆ 'ಡಸ್ಟರ್' ಮಾರಾಟವನ್ನು ಸ್ಥಗಿತಗೊಳಿಸಲಾಯಿತು. ಸದ್ಯ, ಇದೇ ಎಸ್‌ಯುವಿಯನ್ನು ಹೊಸ ರೂಪದಲ್ಲಿ ಪರಿಚಯಿಸಲು ಕಂಪನಿ ಸಹ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳುತ್ತಿದೆ. ಬನ್ನಿ, ಮುಂಬರಲಿರುವ ನೂತನ 'ರೆನಾಲ್ಟ್ ಡಸ್ಟರ್' ಕಾರಿನ ಬೆಲೆ ಎಷ್ಟಿರಲಿದೆ.. ವಿಶೇಷತೆಗಳೇನು ಎಂಬುದರ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.

ನೂತನ ಹೊಸ ತಲೆಮಾರಿನ 'ರೆನಾಲ್ಟ್ ಡಸ್ಟರ್' ಎಸ್‌ಯುವಿಯು 2026ರ ಮೊದಲ ತ್ರೈಮಾಸಿಕದಲ್ಲಿ ಬಿಡುಗಡೆಯಾಗಬಹುದು ಎಂದು ಅಂದಾಜಿಸಲಾಗಿದೆ. ತುಂಬಾ ಕಡಿಮೆ ಬೆಲೆಯಲ್ಲಿಯೂ ಲಭ್ಯವಾಗಲಿದ್ದು, ರೂ.8 ಲಕ್ಷದಿಂದ ರೂ.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಹೇಳಲಾಗಿದೆ. ಇದಕ್ಕೆ ಟಾಟಾ ನೆಕ್ಸಾನ್‌ ಮತ್ತು ಹ್ಯುಂಡೈ ಕ್ರೆಟಾ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

New Renault Duster Launch In India 2026 Expected Price Design Mileage And Features Details

ಹೊಸ ರೆನಾಲ್ಟ್ ಡಸ್ಟರ್ ಎಸ್‌ಯುವಿಯು ಹೊರಭಾಗದಲ್ಲಿ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿರುವ ನಿರೀಕ್ಷೆಯೂ ಇದೆ. ಉತ್ತಮವಾದ ಗ್ರಿಲ್, ಎಲ್ಇಡಿ ಹೆಡ್‌ಲೈಟ್‌ಗಳು, 'ವೈ' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು, ಸರ್ಕ್ಯುಲರ್ ಫಾಗ್ ಲೈಟ್‌ಗಳು, ಟೈಲ್‌ಲೈಟ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ.

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿರುವ ಎಲ್ಲ ಲಕ್ಷಣಗಳಿವೆ. 1.3-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದುಕೊಂಡಿರಲಿದೆ. ಜೊತೆಗೆ 24.5 ಕಿಲೋಮೀಟರ್‌ಗೂ ಅಧಿಕ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ.

ಇದರಲ್ಲಿ 5 ಆಸನಗಳಿರಲಿದ್ದು, ಪ್ರಯಾಣಿಕರು ಆರಾಮದಾಯಕ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 472 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ.

ನೂತನ ರೆನಾಲ್ಟ್ ಡಸ್ಟರ್ ಎಸ್‌ಯುವಿಯ ಕ್ಯಾಬಿನ್ ವಿನ್ಯಾಸವು ಹೊಸತನದಿಂದ ಕೂಡಿರಲಿದೆ. 10.1-ಇಂಚಿರುವ ಟಚ್‌ಸ್ಕ್ರೀನ್‌ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿರುವ ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಸ್ಕ್ರೀನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಅರ್ಕಾಮಿಸ್ 3ಡಿ ಸೌಂಡ್ ಸಿಸ್ಟಮ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯೂ ಇದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿರಲಿದ್ದು, ಪ್ರಯಾಣಿಯರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸಲಿದೆ. ಅದಕ್ಕಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‍ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 4 - ಡಿಸ್ಕ್ ಬ್ರೇಕ್‌ಗಳನ್ನು ಹೊಂದಿರಬಹುದು ಎನ್ನಲಾಗಿದೆ.

ಈಚೆಗೆ ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ (Renault Triber Facelift) ಕೂಡ ಬಿಡುಗಡೆಯಾಗಿದೆ:

ಇದು ಎಂಪಿವಿಯಾಗಿದ್ದು, ರೂ.6.29 ಲಕ್ಷದಿಂದ ರೂ.9.16 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಅಂಬರ್ ಟೆರಾಕೋಟಾ, ಜನ್ಸ್ಕರ್ ಬ್ಲೂ ಮತ್ತು ಶ್ಯಾಡೋ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 7-ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

ಈ ಕಾರು 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 20 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 8-ಇಂಚಿರುವ ಪ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿರುವ ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿದೆ.

More from DriveSpark

Article Published On: Saturday, August 9, 2025, 13:24 [IST]
English summary
New renault duster launch in india 2026 expected price design mileage and features details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+