Renault: 5-ಸೀಟರ್.. ಲಕ್ಷುರಿ ಫೀಚರ್‌ನ ಹೊಸ 'ಡಸ್ಟರ್' ಬಿಡುಗಡೆ ಯಾವಾಗ, 10 ಲಕ್ಷಕ್ಕಿಂತ ಅಗ್ಗ.. 24.5+ Km ಮೈಲೇಜ್?

ಫ್ರಾನ್ಸ್ ದೇಶಕ್ಕೆ ಸೇರಿರುವ ರೆನಾಲ್ಟ್ (Renault) ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿ ಜನಮನ್ನಣೆ ಗಳಿಸಿದೆ. ಭಾರತದ ಮಾರುಕಟ್ಟೆಯಲ್ಲಿಯೂ ದಶಕಗಳಿಂದ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಅವುಗಳಲ್ಲಿ 'ಡಸ್ಟರ್' ಜನಪ್ರಿಯ ಎಸ್‌ಯುವಿಯಾಗಿ ಗುರುತಿಸಿಕೊಂಡಿದ್ದು, ಹಲವು ವರ್ಷಗಳ ಕಾಲ ದೇಶೀಯ ರಸ್ತೆಯಲ್ಲಿ ಅಬ್ಬರಿಸಿತ್ತು. 2012 ರಲ್ಲಿ ಬಿಡುಗಡೆಗೊಂಡ ಈ ಕಾರನ್ನು 2020 ರವರೆಗೆ ಯಶಸ್ವಿಯಾಗಿ ಮಾರಾಟಗೊಳಿಸಲಾಗಿತ್ತು. ಸದ್ಯ, ಇದೇ ಡಸ್ಟರ್ ಎಸ್‌ಯುವಿಯನ್ನು ಹೊಸ ರೂಪದಲ್ಲಿ ಪರಿಚಯಿಸಲು ಕಂಪನಿಯು ತೆರೆಮರೆಯಲ್ಲಿ ತಯಾರಿ ಮಾಡಿಕೊಳ್ಳುತ್ತಿದೆ. ಬನ್ನಿ.. ಮುಂಬರಲಿರುವ ನೂತನ 'ರೆನಾಲ್ಟ್ ಡಸ್ಟರ್' ಕಾರಿನ ನಿರೀಕ್ಷಿತ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.

ಬೆಲೆ (Price): ಹೊಸ-ತಲೆಮಾರಿನ ತಲೆಮಾರಿನ ರೆನಾಲ್ಟ್ ಡಸ್ಟರ್ (New-Generation Renault Duster) ಎಸ್‌ಯುವಿ 2026ರಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಕಾರು ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಾಗಲಿದ್ದು, ರೂ.10 ಲಕ್ಷಕ್ಕಿಂತ ಕಡಿಮೆ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

New Renault Duster Suv Expected Launch Timeline Price Mileage And Features Details

ವಿನ್ಯಾಸ (Design): ನೂತನ ರೆನಾಲ್ಟ್ ಡಸ್ಟರ್ ಎಸ್‌ಯುವಿ ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನೀರಿಕ್ಷೆಯಿದೆ. ಈ ಮೊದಲು ರೈಟ್ ಹ್ಯಾಂಡ್ ಡ್ರೈವ್ (ಆರ್‌ಹೆಚ್‌ಡಿ) ಆಯ್ಕೆಯಿರುವ 'ಡಸ್ಟರ್' ಕಾರನ್ನು ದ.ಆಫ್ರಿಕಾ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಲಾಗಿತ್ತು. ಹೊಸ ಕಾರು ಉತ್ತಮವಾಗಿರುವ ಹೆಡ್‌ಲೈಟ್‌ಗಳು, 'ವೈ' ಆಕಾರಕ್ಕೆ ಹೋಲುವ ಎಲ್ಇಡಿ ಡಿಆರ್‌ಎಲ್‌ಗಳು, ಸರ್ಕ್ಯುಲರ್ ಫಾಗ್ ಲೈಟ್‌ಗಳು ಮತ್ತು ಟೈಲ್‌ಲೈಟ್‌ಗಳನ್ನು ಹೊಂದಿದೆ.

ಕಾರ್ಯಕ್ಷಮತೆ (Performance): ಈ ಕಾರು ವಿವಿಧ ಪವರ್‌ಟ್ರೇನ್‌ ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯಬಹುದು ಎನ್ನಲಾಗಿದೆ. ಆದರೆ, ಈ ಕುರಿತಂತೆ ಯಾವುದೇ ಖಚಿತವಾದ ವಿವರಗಳು ಲಭ್ಯವಾಗಿಲ್ಲ. ಇದು 1.3-ಲೀ. ಹೆಚ್ಆರ್13 ಟರ್ಬೊ ಪೆಟ್ರೋಲ್, 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 1.0-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿರಬಹುದು. ಇದರೊಂದಿಗೆ 24.5 ಕೆಎಂಪಿಎಲ್‌ಗೂ ಅಧಿಕ ಮೈಲೇಜ್ ಕೊಡಬಹುದು ಎಂದು ಹೇಳಲಾಗಿದೆ.

New Renault Duster Suv Expected Launch Timeline Price Mileage And Features Details

ಆಸನ ಆಯ್ಕೆ & ಬೂಟ್ ಸ್ಪೇಸ್ (Seat Capacity & Boot Space): ಹೊಸ ರೆನಾಲ್ಟ್ ಡಸ್ಟರ್ ಎಸ್‌ಯುವಿ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 472 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ ಎಂದು ದ.ಆಫ್ರಿಕಾದಲ್ಲಿ ಪರಿಚಯಿಸಲಾಗಿರುವ ಡಸ್ಟರ್ ಕಾರಿನಿಂದ ಗೊತ್ತಾಗಿದೆ.

ವೈಶಿಷ್ಟ್ಯಗಳು (Features): ಈಗಾಗಲೇ ನೂತನ ರೆನಾಲ್ಟ್ ಡಸ್ಟರ್ ಕಾರಿನ ವೈಶಿಷ್ಟ್ಯಗಳ ಕುರಿತಂತೆ ಬಹುತೇಕ ಎಲ್ಲ ಮಾಹಿತಿ ಲಭ್ಯವಾಗಿದೆ. ಈ ಕಾರು 10.1-ಇಂಚಿನ ಟಚ್‌ಸ್ಕ್ರೀನ್‌ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಸ್ಕ್ರೀನ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್ ಮತ್ತು ಅರ್ಕಾಮಿಸ್ 3ಡಿ ಸೌಂಡ್ ಸಿಸ್ಟಮ್‌ ಪಡೆದಿದೆ.

New Renault Duster Suv Expected Launch Timeline Price Mileage And Features Details

ಸುರಕ್ಷತಾ ವೈಶಿಷ್ಟ್ಯಗಳು (Safety Features): ಈ ಎಸ್‌ಯುವಿ ಪ್ರಯಾಣಿಕರ ರಕ್ಷಣೆಗಾಗಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ. ಬಹುಮುಖ್ಯವಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‍ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 4 ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, March 18, 2025, 10:55 [IST]
English summary
New renault duster suv expected launch timeline price mileage and features details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+