Renault: 5-ಸೀಟರ್.. ಲಕ್ಷುರಿ ಫೀಚರ್‌ನ ಹೊಸ ರೆನಾಲ್ಟ್ ಡಸ್ಟರ್ ಬಿಡುಗಡೆಯಾಗುವುದು ಖಚಿತ, 8 ಲಕ್ಷಕ್ಕೆ ಮಾರಾಟಕ್ಕೆ?
ಫ್ರಾನ್ಸ್ ಮೂಲಕ ರೆನಾಲ್ಟ್ (Renault) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ಭಾನುವಾರ ನಡೆದ ಅದ್ದೂರಿ ಸಮಾರಂಭದಲ್ಲಿ ಹೊಚ್ಚ ಹೊಸ 2025ರ 'ಕೈಗರ್ ಫೇಸ್‌ಲಿಫ್ಟ್' ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಗಿದೆ. ಇದೇ ಕಾರ್ಯಕ್ರಮದಲ್ಲಿ ಮುಂಬರುವ ತಿಂಗಳಲ್ಲಿ ದೇಶೀಯವಾಗಿ ಹೊಚ್ಚ ಹೊಸ 'ಡಸ್ಟರ್' ಕಾರನ್ನು ಬಿಡುಗಡೆ ಮಾಡುವುದಾಗಿ ಕಂಪನಿಯೇ ಘೋಷಣೆ ಮಾಡಿದೆ. ಬನ್ನಿ, ನೂತನ ಎಸ್‌ಯುವಿಯ ಬೆಲೆ ಎಷ್ಟಿರಲಿದೆ.. ವಿಶೇಷತೆಗಳೇನು ಎಂಬುದರ ಕುರಿತಂತೆ ಎಲ್ಲ ವಿವರಗಳನ್ನು ತಿಳಿಯೋಣ.
ಎಲ್ಲವು ಅಂದುಕೊಂಡಂತೆ ನಡೆದರೆ, 2026ರ ಆರಂಭದಲ್ಲಿಯೇ ಹೊಸ ರೆನಾಲ್ಟ್ ಡಸ್ಟರ್ (Renault Duster) ಎಸ್‌ಯುವಿಯನ್ನು ಪರಿಚಯಿಸಲಾಗುತ್ತದೆ ಎನ್ನಲಾಗಿದೆ. ಇದು ಕನಿಷ್ಠ ರೂ.8 ಲಕ್ಷ ಹಾಗೂ ಗರಿಷ್ಠ ರೂ.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು.

ಇದು ಹೊರಭಾಗದಲ್ಲಿ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿರಲಿದ್ದು, ನೋಡುಗರ ಕಣ್ಣು ಕುಕ್ಕುವಂತಿರಲಿದೆ ಎಂದು ಹೇಳಲಾಗಿದೆ. ಅತ್ಯುತ್ತಮವಾದ ಗ್ರಿಲ್, ಬಂಪರ್ ಎಲ್ಇಡಿ ಹೆಡ್‌ಲೈಟ್‌ಗಳು, 'ವೈ' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು, ಸರ್ಕ್ಯುಲರ್ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ.
ಈ ಕಾರು ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿರಲಿದೆ. 1.3-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿರಲಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ. 24 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು ಎನ್ನಲಾಗಿದೆ.

ಹೊಸ ಡಸ್ಟರ್ 5 ಆಸನಗಳನ್ನು ಪಡೆದಿರಲಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಮತ್ತು ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ನೆರವಾಗುವಂತೆ 472 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿರುವ ನಿರೀಕ್ಷೆಯಿದೆ.
ನೂತನ ಡಸ್ಟರ್ ಎಸ್‌ಯುವಿಯ ಕ್ಯಾಬಿನ್ ವಿನ್ಯಾಸವು ಚೆನ್ನಾಗಿರಲಿದ್ದು, 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಸ್ಕ್ರೀನ್, ವೆಂಟಿಲೇಟೆಡ್ ಸೀಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಅರ್ಕಾಮಿಸ್ 3ಡಿ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‍ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 4 ಡಿಸ್ಕ್ ಬ್ರೇಕ್‌ಗಳನ್ನು ಹೊಂದಿರಬಹುದು ಎಂದು ಹೇಳಬಹುದು.
ನಿನ್ನೆಯಷ್ಟೇ ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್ ಬಿಡುಗಡೆಯಾಗಿದೆ ವಿಶೇಷತೆಗಳೇನು:
ಇದು ರೂ.6.29 ಲಕ್ಷದಿಂದ ರೂ.11.2 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ರೇಡಿಯಂಟ್ ರೆಡ್, ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್ ಮತ್ತು ಪರ್ಲ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 5 ಆಸನಗಳನ್ನು ಪಡೆದಿದೆ. ಜಾಸ್ತಿ ಲಗೇಜ್ ತೆಗೆದುಕೊಂಡು ಹೋಗಲು 455 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಹೊಸ ಕೈಗರ್ 1.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ರೇರ್ ಎಸಿ ವೆಂಟ್‌ಗಳು ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








