Duster: 24 ಕಿ.ಮೀ ಮೈಲೇಜ್.. ಲಕ್ಷುರಿ ಫೀಚರ್, ಬೆಂಗಳೂರಿನಲ್ಲಿ ಹೊಸ ರೆನಾಲ್ಟ್ ಡಸ್ಟರ್ ಕಾಣಿಸಿಕೊಂಡೆ ಬಿಡ್ತು.. 8 ಲಕ್ಷ ಬೆಲೆ?
ರೆನಾಲ್ಟ್ ಇಂಡಿಯಾ (Renault India), ಅತ್ಯಂತ ಜನಪ್ರಿಯ ಎಸ್‌ಯುವಿಯಾದ 'ಡಸ್ಟರ್'ನ್ನು ಹೊಸ ಅವತಾರದಲ್ಲಿ ಮಾರಾಟಕ್ಕೆ ತರಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. 'ಕೈಗರ್ ಫೇಸ್‌ಲಿಫ್ಟ್' ಬಿಡುಗಡೆ ಸಮಾರಂಭದಲ್ಲೂ ಶೀಘ್ರದಲ್ಲೇ ನೂತನ 'ರೆನಾಲ್ಟ್ ಡಸ್ಟರ್'ನ್ನು ಪರಿಚಯಿಸಲಾಗುತ್ತದೆ ಎಂದು ಕಂಪನಿಯೇ ಅಧಿಕೃತವಾಗಿ ಘೋಷಣೆ ಮಾಡಿತ್ತು. ಇದೇ ಕಾರು ದೇಶೀಯ ಮಾರುಕಟ್ಟೆಯಲ್ಲಿ 2012 ರಿಂದ 2020 ರವರೆಗೆ ಭರ್ಜರಿಯಾಗಿ ಮಾರಾಟಗೊಂಡಿತ್ತು.
ಸದ್ಯ, ಬೆಂಗಳೂರಿನಲ್ಲಿ 5-ಆಸನಗಳ ರೆನಾಲ್ಟ್ ಡಸ್ಟರ್ (Renault Duster) ಎಸ್‌ಯುವಿಯು ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಾಣಿಸಿಕೊಂಡಿದೆ. ಅದಕ್ಕೆ ಸಂಬಂಧಿಸಿದ ಸ್ಪೈ ಫೋಟೋವೊಂದು ಇಂಟರ್‌ನೆಟ್‌ನಲ್ಲಿಯೂ ಸೋರಿಕೆಯಾಗಿದೆ. ಈ ಫೋಟೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಹಿಂಭಾಗದ ವಿನ್ಯಾಸ ಕುರಿತ ಹಲವು ಅಂಶಗಳು ಬಹಿರಂಗಗೊಂಡಿವೆ.

ಬಹುಮುಖ್ಯವಾಗಿ ಈ ಕಾರು 'ವಿ' ಆಕಾರಕ್ಕೆ ಹೋಲಿಕೆಯಾಗಬಲ್ಲ ಟೈಲ್ ಲ್ಯಾಂಪ್‌ಗಳು, ಥೀಕ್ ವೀಲ್ ಆರ್ಚ್ ಕ್ಲಾಡಿಂಗ್, ಶಾರ್ಕ್ ಫಿನ್ ಆಂಟೆನಾ, ರೂಫ್ ರೈಲ್‌ಗಳು, ವಿಂಡ್‌ಶೀಲ್ಡ್, ವಾಷರ್ & ವೈಪರ್‌ನ್ನು ಹೊಂದಿದೆ. ಡಸ್ಟರ್‌ನ ಮುಂಭಾಗದ ವಿನ್ಯಾಸವು ತುಂಬಾ ಚೆನ್ನಾಗಿರುವ ನಿರೀಕ್ಷೆಯಿದೆ. ಉತ್ತಮವಾದ ಬುಲ್-ಬಾರ್ ಸ್ಟೈಲ್ ಗ್ರಿಲ್, ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಸರ್ಕ್ಯುಲರ್ ಫಾಗ್ ಲೈಟ್‌ಗಳನ್ನು ಒಳಗೊಂಡಿರಲಿದೆ ಎನ್ನಲಾಗಿದೆ.
ಹೊಸ ರೆನಾಲ್ಟ್ ಡಸ್ಟರ್ ಎಸ್‌ಯುವಿ 5/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರಲಿದ್ದು, ಪ್ರಯಾಣಿಕರು ಆರಾಮದಾಯಕ ಕುಳಿತುಕೊಂಡು ದೂರದ ಊರುಗಳಿಗೆ ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 472 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿರುವ ಸಾದ್ಯತೆಯಿದೆ.

ಈ ಕಾರು ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ. 1.3-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿರಲಿದೆ. ರೂಪಾಂತರಗಳಿಗೆ ವೇರಿಯೆಂಟ್ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ & ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ 24 ಕಿ.ಮೀ ವರೆಗೆ ಮೈಲೇಜ್ ಕೊಡುವ ನಿರೀಕ್ಷೆಯಿದೆ.
ಇದರ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿರಲಿದೆ. 10 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಸ್ಕ್ರೀನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ರೇರ್ ಎಸಿ ವೆಂಟ್‌ಗಳು ಮತ್ತು ಅರ್ಕಾಮಿಸ್ 3ಡಿ-ಸೌಂಡ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ ಎನ್ನಲಾಗಿದೆ.
ನೂತನ ರೆನಾಲ್ಟ್ ಡಸ್ಟರ್ ಎಸ್‌ಯುವಿಯು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುವ ನಿರೀಕ್ಷೆಯಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‍ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.
ಇತ್ತೀಚೆಗೆ ಬಿಡುಗಡೆಯಾದ ರೆನಾಲ್ಟ್ ಕಂಪನಿಯ ಕೈಗರ್ ಫೇಸ್‌ಲಿಫ್ಟ್ & ಟ್ರೈಬರ್ ಫೇಸ್‌ಲಿಫ್ಟ್ ವಿಶೇಷತೆಗಳೇನು:
ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್ (Renault Kiger Facelift): ಈ ಎಸ್‌ಯುವಿಯು ಕನಿಷ್ಠ ರೂ.5.76 ಲಕ್ಷ ಹಾಗೂ ಗರಿಷ್ಠ ರೂ.10.33 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 19.83 ರಿಂದ 20.38 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ (Renault Triber Facelift): ಇದೊಂದು ಎಂಪಿವಿಯಾಗಿದೆ. ರೂ.5.76 ಲಕ್ಷದಿಂದ ರೂ.8.59 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 20 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
Source Link: Rushlane


Click it and Unblock the Notifications








