7-ಸೀಟರ್.. 6 ಲಕ್ಷ, 20 Km ಮೈಲೇಜ್.. ಈ ಹೊಸ ಫ್ಯಾಮಿಲಿ ಕಾರನ್ನು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಇತ್ತೀಚೆಗೆ ನೂತನ ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ (Renault Triber Facelift) ಎಂಪಿವಿಯನ್ನು ಪರಿಚಯಿಸಲಾಯಿತು. ಇದೊಂದು ಫ್ಯಾಮಿಲಿ ಕಾರಾಗಿದ್ದು, ರೂ.6.29 ಲಕ್ಷದಿಂದ ರೂ.9.16 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಕಾರನ್ನು ಡೀಲರ್‌ಶಿಪ್‌ಗಳಿಗೆ ತಲುಪಿಸುವ ಕಾರ್ಯಕ್ಕೂ ಕಂಪನಿಯು ಚಾಲನೆ ನೀಡಿದೆ. ಅತಿ ಶೀಘ್ರದಲ್ಲೇ ವಿತರಣೆಗಳು ಶುರುವಾಗಲಿದೆ. ನೀವು ಇದೇ ಹೊಸ 'ಟ್ರೈಬರ್' ಎಂಪಿವಿ ಖರೀದಿ ಮಾಡಲು ಆಲೋಚಿಸಿದ್ದೀರಾ.. ನಾವಿಲ್ಲಿ ಈ ಕಾರಿನ ನಿರೀಕ್ಷಿತ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಈ ಎಂಪಿವಿಯು ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ಸಿಗುತ್ತದೆ. ಇದರ ಆಥೆಂಟಿಕ್ ರೂಪಾಂತರ (ವೇರಿಯೆಂಟ್), ರೂ.7.48 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಕೊಂಡುಕೊಂಡರೆ, ರೂ.5.48 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.11,000 ವರೆಗೆ ಇಎಂಐ ಕಟ್ಟಬೇಕು.

New Renault Triber Facelift Mpv Expected On Road Price And Emi Details

ಇನ್ನೊಂದು ಎವಲ್ಯೂಷನ್ ರೂಪಾಂತರ, ರೂ.8.60 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.6.60 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳ ಅವಧಿಗೆ ಮಾಸಿಕ ರೂ.13,000 ವರೆಗೆ ಇಎಂಐ ಪಾವತಿ ಮಾಡಬೇಕು.

ಮತ್ತೊಂದು ಟೆಕ್ನೋ ರೂಪಾಂತರ, ರೂ.9.48 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.7.48 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.15,000 ವರೆಗೆ ಇಎಂಐ ಕಟ್ಟಬೇಕು.

ಇದೇ ಕಾರಿನ ಎಮೋಷನ್ ರೂಪಾಂತರ ರೂ.10.24 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.8.24 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳ ಅವಧಿಗೆ ಮಾಸಿಕ ರೂ.16,000 ವರೆಗೆ ಪಾವತಿಸಬೇಕು.

ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ ವಿಶೇಷತೆಗಳೇನು:

ಈ ಎಂಪಿವಿಯು ತುಂಬಾ ಚೆನ್ನಾಗಿರುವ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಹೊಸದಾಗಿರುವ 2ಡಿ ರೆನಾಲ್ಟ್ ಲೋಗೋ ಹಾಗೂ ಎಲ್ಇಡಿ ಫಾಗ್ ಲ್ಯಾಂಪ್‌ಗಳನ್ನು ತನ್ನದಾಗಿಸಿಕೊಂಡಿದೆ. ಆಂಬರ್ ಟೆರಾಕೋಟಾ, ಜನ್ಸ್ಕರ್ ಬ್ಲೂ ಮತ್ತು ಶ್ಯಾಡೋ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು 7-ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗುವುದಕ್ಕೆ 84 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 3,985 ಎಂಎಂ ಉದ್ದ, 1,739 ಎಂಎಂ ಅಗಲ ಹಾಗೂ 1,643 ಎಂಎಂ ಎತ್ತರ ಕೂಡ ಇದೆ. 182 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,636 ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ ಟ್ರೈಬರ್ ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 20 ಕಿ.ಮೀ ವರೆಗೂ ಮೈಲೇಜ್ ಕೊಡುತ್ತದೆ. 40 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

ಈ ಕಾರು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಮ್ಯಾನುವಲ್ ಎಸಿ, ರಿಮೋಟ್ ಕೀಲೆಸ್ ಎಂಟ್ರಿ, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು 6-ಸ್ಪೀಕರ್ ಸೌಂಡ್ ಸಿಸ್ಟಮ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾದಂತಹ ವೈಶಿಷ್ಟ್ಯಗಳನ್ನು ಹೊಂದಿದೆ.

ನಿಮ್ಮ ಗಮನಕ್ಕೆ.. ನಾವಿಲ್ಲಿ 'ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್'ನ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

More from DriveSpark

Article Published On: Friday, August 29, 2025, 15:27 [IST]
English summary
New renault triber facelift mpv expected on road price and emi details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+