7-ಸೀಟರ್.. 6.29 ಲಕ್ಷ, 20 ಕಿ.ಮೀ ಮೈಲೇಜ್! ಹೊಸ Renault Triber Facelift ಡೀಲರ್‌ಶಿಪ್‌ಗೆ ಬಂದೇ ಬಿಡ್ತು, ಶೀಘ್ರ ವಿತರಣೆ?
ಇತ್ತೀಚೆಗೆ 2025ರ ಹೊಚ್ಚ ಹೊಸ ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ (Renault Triber Facelift) ಎಂಪಿವಿಯನ್ನು ಬಿಡುಗಡೆಗೊಳಿಸಲಾಯಿತು. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಉತ್ತಮವಾದ ಕಾರ್ಯಕ್ಷಮತೆ ಮತ್ತು ಅತ್ಯಾಧುನಿಕ ನಾವೀನ್ಯತೆಗೂ ಹೆಸರುವಾಸಿಯಾಗಿದೆ. ಅದಕ್ಕೆ ತಕ್ಕಂತೆ ತುಂಬಾ ಕಡಿಮೆ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ.
ಸದ್ಯ, ದೇಶಾದ್ಯಂತ ವಿವಿಧ ಡೀಲರ್‌ಶಿಪ್‌ಗಳಿಗೆ ನೂತನ 'ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್' ಕಾರನ್ನು ತಲುಪಿಸುವ ಕಾರ್ಯಕ್ಕೆ ಕಂಪನಿಯು ಚಾಲನೆ ನೀಡಿದೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಇಂಟರ್‌ನೆಟ್‌ನಲ್ಲಿಯೂ ಕಾಣಿಸಿಕೊಂಡಿವೆ. ಅತಿ ಶೀಘ್ರದಲ್ಲೇ ಈ ಎಂಪಿವಿಯ ವಿತರಣೆಗಳು ಕೂಡ ಪ್ರಾರಂಭವಾಗಲಿದೆ. ಈ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವರದಿಯಾಗಿದೆ.

ಹೊಸ ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ ಎಂಪಿವಿ ಅಗ್ಗದ ದರದಲ್ಲೂ ಲಭ್ಯವಾಗಲಿದೆ. ಕನಿಷ್ಠ ರೂ.6.29 ಲಕ್ಷ ಹಾಗೂ ಗರಿಷ್ಠ ರೂ.9.16 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಆಥೆಂಟಿಕ್, ಎವಲ್ಯೂಷನ್, ಟೆಕ್ನೋ ಹಾಗೂ ಎಮೋಷನ್ ಎಂಬ 4 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವಾದ ವಿನ್ಯಾಸವನ್ನು ಪಡೆದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಐಬ್ರೌ ಶೇಪ್ಡ್ ಎಲ್ಇಡಿ ಡಿಆರ್‌ಎಲ್‌ಗಳು, 2ಡಿ ರೆನಾಲ್ಟ್ ಲೋಗೋ ಮತ್ತು ಎಲ್ಇಡಿ ಫಾಗ್ ಲ್ಯಾಂಪ್‌ಗಳನ್ನು ಹೊಂದಿದೆ. ಆಂಬರ್ ಟೆರಾಕೋಟಾ, ಜನ್ಸ್ಕರ್ ಬ್ಲೂ ಹಾಗೂ ಶ್ಯಾಡೋ ಗ್ರೇ ಎಂಬ ಬಣ್ಣಗಳೊಂದಿಗೂ ದೊರಯುತ್ತದೆ.

ನೂತನ ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ ಕಾರು 3,985 ಎಂಎಂ ಉದ್ದ, 1,739 ಎಂಎಂ ಅಗಲ ಮತ್ತು 1,643 ಎಂಎಂ ಎತ್ತರವು ಇದೆ. ಜೊತೆಗೆ 182 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,636 ವೀಲ್‌ಬೇಸ್‌ನ್ನು ಪಡೆದಿದೆ. 40 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ಹೊಸ ಟ್ರೈಬರ್ ಎಂಪಿವಿಯು 7-ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 84 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಮೂರನೇ ಸಾಲಿನ ಆಸನಗಳನ್ನು ಮಡಚಿದರೆ 625 ಲೀಟರ್‌ಗೆ ವಿಸ್ತರಿಸಬಹುದು.
ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 72 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 96 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 20 ಕಿ.ಮೀ ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. ಹೆಚ್ಚುವರಿಯಾಗಿ ರೂ.52,000 ಪಾವತಿಸಿದರೆ, ಡೀಲರ್‌ಶಿಪ್ ಫಿಟೆಡ್ ಸಿಎನ್‌ಜಿ ಕಿಟ್ ಆಯ್ಕೆಯೊಂದಿಗೂ ಸಿಗುತ್ತದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದೆ. 8-ಇಂಚಿರುವ ಪ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿರುವ ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಮ್ಯಾನುವಲ್ ಎಸಿ, ರಿಮೋಟ್ ಕೀಲೆಸ್ ಎಂಟ್ರಿ, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ 6-ಸ್ಪೀಕರ್ ಸೌಂಡ್ ಸಿಸ್ಟಮ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ನೂತನ ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ ಎಂಪಿವಿ ಸುರಕ್ಷತೆಗೂ ಹೆಸರುವಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್ ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾದಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








