Skoda: ಸ್ಕೋಡಾ ಕೈಲಾಕ್ ಕಾರಿಗೆ ಮುಗಿಬಿದ್ದ ಗ್ರಾಹಕರು.. 7.89 ಲಕ್ಷ.. 5-ಸೀಟರ್, 18 ಕಿ.ಮೀ ಮೈಲೇಜ್!

ಸ್ಕೋಡಾ ಆಟೋ ಇಂಡಿಯಾ (Skoda Auto India) ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮಾರಾಟಗೊಳಿಸುವ ಕೈಲಾಕ್ (Kylaq) ಪ್ರಮುಖ ಎಸ್‌ಯುವಿಯಾಗಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಇತ್ತೀಚೆಗೆ, ಪ್ರಮುಖ ವಾಹನ ತಯಾರಕ ಕಂಪನಿಗಳು ಈ ಫೆಬ್ರವರಿ ತಿಂಗಳ ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿವೆ. ಅದರಲ್ಲೂ ಟಾಪ್ 10 ಕಾಂಪ್ಯಾಕ್ಟ್ ಎಸ್‌ಯುವಿಗಳ ಪಟ್ಟಿಯಲ್ಲಿ ಸ್ಕೋಡಾ ಕೈಲಾಕ್ ಸ್ಥಾನ ಪಡೆದಿದ್ದು, ಹತ್ತನೇ ಸ್ಥಾನದಲ್ಲಿದೆ. ಈ ಪಟ್ಟಿಯಲ್ಲಿ 21,461 ಯುನಿಟ್ ಮಾರಾಟದೊಂದಿಗೆ ಮಾರುತಿ ಸುಜುಕಿ ಫ್ರಾಂಕ್ಸ್ ಮೊದಲ ಸ್ಥಾನದಲ್ಲಿದೆ.

ಕಳೆದ ತಿಂಗಳು (ಫೆಬ್ರವರಿ - 2025) ಸ್ಕೋಡಾ ಕಂಪನಿಯು ಸರಿ ಸುಮಾರು 3,636 ಯುನಿಟ್ ಕೈಲಾಕ್ ಕಾರುಗಳನ್ನು ಮಾರಾಟ ಮಾಡಿದೆ. ಇದೇ ಜನವರಿಯಲ್ಲಿ ಮಾರಲ್ಪಟ್ಟ 1,242 ಯುನಿಟ್‌ಗಳಿಗೆ ಹೋಲಿಸಿದರೆ, ತಿಂಗಳಿಂದ ತಿಂಗಳಿಗೆ ಉತ್ತಮವಾದ ಬೆಳವಣಿಗೆಯಾಗಿದೆ. 2024ರ ಡಿಸೆಂಬರ್‌ನಲ್ಲಿ ಬಿಡುಗಡೆಗೊಂಡ ಈ ಕಾರಿಗಾಗಿ 20,000 ಮಂದಿ ಗ್ರಾಹಕರು ಬುಕ್ಕಿಂಗ್ ಮಾಡಿದ್ದಾರೆ.

New Skoda Kylaq February 2025 Sales Report Customer Buys 3 636 Units details

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಸ್ಕೋಡಾ ಕೈಲಾಕ್ (Skoda Kylaq) ಎಸ್‌ಯುವಿ, ಕನಿಷ್ಠ ರೂ.7.89 ಲಕ್ಷ ಹಾಗೂ ಗರಿಷ್ಠ ರೂ.14.40 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಕಾರು ಹೊರಭಾಗದಲ್ಲೂ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಬಹುಮುಖ್ಯವಾಗಿ ಸ್ಪ್ಲಿಟ್ ಎಲ್ಇಡಿ ಹೆಡ್‌ಲೈಟ್‌ಗಳು, ಸ್ಲಿಮ್ಡ್-ಡೌನ್ ಗ್ರಿಲ್ ಮತ್ತು ಸಿಲ್ವರ್ ಫಾಕ್ಸ್ ಬ್ಯಾಷ್ ಪ್ಲೇಟ್‌ನ್ನು ಹೊಂದಿದೆ.

ಈ ಸ್ಕೋಡಾ ಕೈಲಾಕ್ ಕಾರು ಶಕ್ತಿಯುತವಾದ 1.0 - ಲೀಟರ್ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 6 - ಸ್ಪೀಡ್ ಮ್ಯಾನುವಲ್ ಮತ್ತು 6 - ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 15 ರಿಂದ 18 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

New Skoda Kylaq February 2025 Sales Report Customer Buys 3 636 Units details

ನೂತನ 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 446 ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. ಬ್ರಿಲಿಯಂಟ್ ಸಿಲ್ವರ್, ಲಾವಾ ಬ್ಲೂ, ಆಲಿವ್ ಗೋಲ್ಡ್ ಹಾಗೂ ಕಾರ್ಬನ್ ಸ್ಟೀಲ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಹೊಸ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (10-ಇಂಚು), ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ (8-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಟು-ಸ್ಪೋಕ್ ಸ್ಟೀರಿಂಗ್ ವೀಲ್, ಸನ್‌ರೂಫ್, ಕೀಲೆಸ್ ಎಂಟ್ರಿ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

New Skoda Kylaq February 2025 Sales Report Customer Buys 3 636 Units details

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಎಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ಚೈಲ್ಡ್ ಸೀಟ್ ಮೌಂಟ್‌ಗಳು, ಡಿಸ್ಕ್/ ಡ್ರಮ್‌ ಬ್ರೇಕ್‌ಗಳನ್ನು ಒಳಗೊಂಡಿದೆ. ಸ್ಕೋಡಾ ಕೈಲಾಕ್ ಎಸ್‌ಯುವಿಗೆ ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್‌ ಹಾಗೂ ಹ್ಯುಂಡೈ ವೆನ್ಯೂ ಮಾಡೆಲ್‌ಗಳು ಪ್ರಬಲವಾದ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, March 10, 2025, 12:25 [IST]
English summary
New skoda kylaq february 2025 sales report customer buys 3636 units details
Read more on skoda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+