Skoda: ಬುಕ್ಕಿಂಗ್‌ನಲ್ಲಿ ಸುನಾಮಿ.. ಸ್ಕೋಡಾ ಕೈಲಾಕ್ ಕಾರಿಗೆ ಕ್ಯೂ ನಿಂತ ಗ್ರಾಹಕರು, 7.89 ಲಕ್ಷ.. 18 ಕಿ.ಮೀ ಮೈಲೇಜ್!

ಸ್ಕೋಡಾ (Skoda) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಗುರುತಿಕೊಂಡಿದೆ. ಇತ್ತೀಚೆಗೆ, ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಹೊಸ 'ಕೈಲಾಕ್' ಎಸ್‌ಯುವಿಯನ್ನು ಮಾರಾಟಕ್ಕೆ ತಂದಿತ್ತು. ನೂತನ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಡಿಸೆಂಬರ್ 2ರಿಂದ ಈ ಸಬ್ 4-ಮೀಟರ್‌ ಕಾಂಪ್ಯಾಕ್ಟ್ ಎಸ್‌ಯುವಿಗಾಗಿ ಬುಕ್ಕಿಂಗ್‌ ತೆಗೆದುಕೊಳ್ಳುವ ಪ್ರಕ್ರಿಯೆಗೂ ಸ್ಕೋಡಾ ಕಂಪನಿಯು ಅಧಿಕೃತವಾಗಿ ಚಾಲನೆ ನೀಡಿತ್ತು. ಅಂದಿನಿಂದಲೇ ಗ್ರಾಹಕರಿಂದ ಕೂಡ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸದ್ಯ, ಹೊಚ್ಚ ಹೊಸ ಸ್ಕೋಡಾ ಕೈಲಾಕ್ (Skoda Kylaq) ಎಸ್‌ಯುವಿಗಾಗಿ ಸರಿ ಸುಮಾರು 20,000 ಗ್ರಾಹಕರು ಆರ್ಡರ್ ಮಾಡಿದ್ದಾರೆ. ಬುಕ್ಕಿಂಗ್‌ ಆರಂಭಿಸಿದ 2 ತಿಂಗಳೊಳಗೆ ಈ ಮೈಲಿಗಲ್ಲನ್ನು ಸಾಧಿಸಲಾಗಿದೆ. ಇದಕ್ಕೂ ಮೊದಲು ಕೇವಲ 10 ದಿನದಲ್ಲಿ 10,000ಕ್ಕೂ ಅಧಿಕ ಬುಕ್ಕಿಂಗ್‌ಗಳನ್ನು ಪಡೆದುಕೊಂಡಿತ್ತು.

New Skoda Kylaq Suv Get 20 000 Bookings Within 2 Months Details

ಕಿಯಾ ಸೈರಸ್, ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್‌, ಹ್ಯುಂಡೈ ವೆನ್ಯೂನಂತಹ ಜನಪ್ರಿಯ ಕಾಂಪ್ಯಾಕ್ಟ್ ಎಸ್‌ಯುವಿಗಳಿಗೆ ಪ್ರಬಲವಾದ ಸ್ಪರ್ಧೆಯೊಡ್ಡಲು ಸ್ಕೋಡಾ ಕಂಪನಿಯು ಈ 'ಕೈಲಾಕ್' ಕಾರನ್ನು ಪರಿಚಯಿಸಿದೆ. ಇದು ರೂ.7.89 ಲಕ್ಷದಿಂದ ರೂ.14.40 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.

ನೂತನ ಕಾರು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಸ್ಪ್ಲಿಟ್ ಎಲ್ಇಡಿ ಹೆಡ್‌ಲೈಟ್‌ಗಳು, ಸ್ಲಿಮ್ಡ್-ಡೌನ್ ಗ್ರಿಲ್, ಬ್ಲ್ಯಾಕ್ ಕ್ಲಾಡಿಂಗ್ ಹಾಗೂ ಸಿಲ್ವರ್ ಫಾಕ್ಸ್ ಬ್ಯಾಷ್ ಪ್ಲೇಟ್‌ನ್ನು ಹೊಂದಿದೆ. ಬ್ರಿಲಿಯಂಟ್ ಸಿಲ್ವರ್, ಲಾವಾ ಬ್ಲೂ, ಆಲಿವ್ ಗೋಲ್ಡ್, ಕಾರ್ಬನ್ ಸ್ಟೀಲ್ ಮತ್ತು ಟೊರ್ನಾಡೊ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

New Kia Syros Suv Get 20 000 Bookings Within 2 Months Details

ಈ ಸ್ಕೋಡಾ ಕೈಲಾಕ್ ಎಸ್‌ಯುವಿ 1.0-ಲೀ. ಟಿಎಸ್‌ಟಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 115 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 178 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ. 15 ರಿಂದ 18 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೊಸ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 446 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. ಇದರೊಟ್ಟಿಗೆ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಟು-ಸ್ಪೋಕ್ ಸ್ಟೀರಿಂಗ್ ವೀಲ್, ಸನ್‌ರೂಫ್, ಕೀಲೆಸ್ ಎಂಟ್ರಿ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

New Skoda Kylaq Suv Get 20 000 Bookings Within 2 Months Details

ನೂತನ ಸ್ಕೋಡಾ ಕೈಲಾಕ್ ಎಸ್‌ಯುವಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಎಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಚೈಲ್ಡ್ ಸೀಟ್ ಮೌಂಟ್‌ಗಳು, ಡಿಸ್ಕ್/ ಡ್ರಮ್‌ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಇನ್ನು, ಹೊಸ ಸ್ಕೋಡಾ ಕೈಲಾಕ್ ಕಾಂಪ್ಯಾಕ್ಟ್ ಎಸ್‌ಯುವಿ ಭಾರೀ ಸಂಖ್ಯೆಯಲ್ಲಿ ಬುಕ್ಕಿಂಗ್ ಪಡೆದುಕೊಳ್ಳುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಮುಂಬರುವ ದಿನಗಳಲ್ಲಿ ನೂತನ ಕೈಲಾಕ್ ಕಾರಿಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, January 30, 2025, 10:31 [IST]
English summary
New skoda kylaq suv get 20 000 bookings within 2 months details
Read more on skoda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+