Skoda Kylaq: ಸ್ಕೋಡಾ ಕೈಲಾಕ್ ಕಾರಿನ ವಿಡಿಯೋ ರಿವ್ಯೂ.. ನೀವೇ ನೋಡಿ?
ಸ್ಕೋಡಾ (Skoda) ಪ್ರಖ್ಯಾತ ವಾಹನ ತಯಾರಕ ಕಂಪನಿಯಾಗಿದೆ. ಇತ್ತೀಚೆಗೆ, ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಹೊಚ್ಚ ಹೊಸ 'ಕೈಲಾಕ್' ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ನಮ್ಮ ತಂಡಕ್ಕೆ ಗೋವಾದಲ್ಲಿ ನೂತನ ಕೈಲಾಕ್ ಎಸ್‌ಯುವಿ ಟೆಸ್ಟ್ ಡ್ರೈವ್ ನಡೆಸುವ ಅವಕಾಶ ದೊರೆಯಿತು. ಬನ್ನಿ.. ಈ ಕಾರು ಹೇಗಿದೆ ಎಂಬುದರ ಕುರಿತ ವಿಡಿಯೋ ರಿವ್ಯೂ ನಿಮಗಾಗಿ..
ಸ್ಕೋಡಾ ಕೈಲಾಕ್ (Skoda Kylaq) ಕಾರು, ಬಜೆಟ್ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದು ರೂ.7.89 ಲಕ್ಷದಿಂದ ರೂ.14.40 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಈ ಕಾರು ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಬ್ರಿಲಿಯಂಟ್ ಸಿಲ್ವರ್, ಲಾವಾ ಬ್ಲೂ, ಆಲಿವ್ ಗೋಲ್ಡ್, ಕಾರ್ಬನ್ ಸ್ಟೀಲ್ ಮತ್ತು ಟೊರ್ನಾಡೊ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ ಎಸ್‌ಯುವಿ 1.0-ಲೀಟರ್ ಟಿಎಸ್‌ಟಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 115 ಬಿಹೆಚ್‌ಪಿ ಅಶ್ವ ಶಕ್ತಿ ಮತ್ತು 178 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 15 ರಿಂದ 18 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಜೊತೆಗೆ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಈ ಕಾರು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 8-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟು-ಸ್ಪೋಕ್ ಸ್ಟೀರಿಂಗ್ ವೀಲ್, ಸನ್‌ರೂಫ್, ಕೀಲೆಸ್ ಎಂಟ್ರಿ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್‌ನ್ನು ಹೊಂದಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಹೊಚ್ಚ ಹೊಸ ಸ್ಕೋಡಾ ಕೈಲಾಕ್ ಎಸ್‌ಯುವಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ಚೈಲ್ಡ್ ಸೀಟ್ ಮೌಂಟ್‌ಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








