ಮಧ್ಯಮ ವರ್ಗದವರಿಗೆ ಸಿಹಿಸುದ್ದಿ: ಟಾಟಾದಿಂದ ಹೊಸ ಕಾರು ಬಿಡುಗಡೆಗೆ ತಯಾರಿ.. ಅತಿಕಡಿಮೆ ಬೆಲೆ?
ಟಾಟಾ ಮೋಟಾರ್ಸ್ (Tata Motors), ಪ್ರತಿವರ್ಷ ಒಂದಿಲ್ಲೊಂದು ಹೊಸ ಕಾರನ್ನು ಅದ್ದೂರಿಯಾಗಿ ಮಾರಾಟಕ್ಕೆ ತರುತ್ತಿರುತ್ತದೆ. ಸದ್ಯ, ಪ್ರೀಮಿಯಂ ಹ್ಯಾಚ್‌ಬ್ಯಾಕ್ 'ಆಲ್ಟ್ರೋಜ್'ನ್ನು ನವೀಕರಿಸಿದ ರೂಪದಲ್ಲಿ ಅಂದರೆ ಫೇಸ್‌ಲಿಫ್ಟ್ ಮಾಡೆಲ್‌ನ್ನು ಬಿಡುಗಡೆಗೊಳಿಸಲು ಕಂಪನಿಯು ತಯಾರಿ ಮಾಡಿಕೊಳ್ಳುತ್ತಿದೆ ಎಂದು ವರದಿಯಾಗಿದೆ. ಹೊಸ ಆಲ್ಟ್ರೋಜ್ ಎನ್ನಲಾದ ಕಾರೊಂದು ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಾಣಿಸಿಕೊಂಡಿದೆ. ಅದಕ್ಕೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ.
ಈ ಫೋಟೊಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ನೂತನ ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ (Tata Altroz Facelift) ಎಂದು ಹೇಳಲಾಗಿರುವ ಹ್ಯಾಚ್‌ಬ್ಯಾಕ್, ಹೊರಭಾಗದ ವಿನ್ಯಾಸದಲ್ಲಿ ಒಂದಷ್ಟು ಬದಲಾವಣೆಗಳನ್ನು ಪಡೆದುಕೊಂಡಿದೆ. ಇದು ಹೊಸದಾಗಿರುವ ಫ್ರಂಟ್ ಫ್ಯಾಸಿಯಾ ಮತ್ತು ಬಂಪರ್‌ನ್ನು ಹೊಂದಿದೆ. ಜೊತೆಗೆ ವಿನೂತನವಾಗಿರುವ ಹೆಡ್‌ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಇದು ಮಾತ್ರವಲ್ಲದೆ, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡು ಶೀಘ್ರದಲ್ಲಿಯೇ ಮಾರಾಟಕ್ಕೆ ಬರುವ ಸಾಧ್ಯತೆಯಿದೆ.

ಈಗಿರುವ ಟಾಟಾ ಆಲ್ಟ್ರೋಜ್ ವಿಶೇಷತೆಗಳೇನು: ಈ ಕಾರು ರೂ.6.65 ಲಕ್ಷದಿಂದ ರೂ.11.30 ಲಕ್ಷ ಎಕ್ಸ್-ಶೋರೂಂ ದರವನ್ನು ಹೊಂದಿದೆ. ಎಕ್ಸ್ಇ, ಎಕ್ಸ್ಎಂ, ಎಕ್ಸ್ಎಂ ಎಸ್, ಎಕ್ಸ್ಎಂ ಪ್ಲಸ್ ಮತ್ತು ಎಕ್ಸ್ಎಂ ಪ್ಲಸ್ ಎಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಇದರಲ್ಲಿ 5 ಮಂದಿ ಸುಲಭವಾಗಿ ಪ್ರಯಾಣ ಮಾಡಬಹುದು.
ನೂತನ ಟಾಟಾ ಆಲ್ಟ್ರೋಜ್ ಹ್ಯಾಚ್‌ಬ್ಯಾಕ್ 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀ. ಟರ್ಬೊ ಪೆಟ್ರೋಲ್, 1.5-ಲೀ. ಡೀಸೆಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19.33 ರಿಂದ 26.20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 8-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ಸಿಂಗಲ್-ಪೇನ್ ಸನ್‌ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಟಾಟಾ ಆಲ್ಟ್ರೋಜ್ ರೇಸರ್ (Tata Altroz Racer) ಕೂಡ ಖರೀದಿಗೆ ಲಭ್ಯ: ಈ ಹ್ಯಾಚ್‌ಬ್ಯಾಕ್ ರೂ.9.50 ಲಕ್ಷದಿಂದ ರೂ.11 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. ಇದು 1.2-ಲೀಟರ್ 3-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿದ್ದು, 120 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 170 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ನೂತನ ಟಾಟಾ ಆಲ್ಟ್ರೋಜ್ ರೇಸರ್ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (7-ಇಂಚು), 8-ಸ್ಪೀಕರ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್, ಆಟೋ ಎಸಿ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications