Tata: 500 ಕಿಲೋಮೀಟರ್ ಓಡುತ್ತೆ? ಟಾಟಾ ಹೀರೋ ಬರ್ತಿದೆ.. ಇದರ ಬಗ್ಗೆ ಕೇಳಿ ಪ್ರತಿಸ್ಪರ್ಧಿಗಳಿಗೆ ಭಯ ಶುರುವಾಯ್ತು!
ಟಾಟಾ ಮೋಟಾರ್ಸ್ (Tata Motors), ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ಅಗ್ರಪಂಕ್ತಿಯಲ್ಲಿದೆ. ದೇಶೀಯವಾಗಿ ಟಿಯಾಗೊ ಇವಿ, ಪಂಚ್ ಇವಿ, ನೆಕ್ಸಾನ್ ಇವಿ, ಕರ್ವ್ ಇವಿ ಹಾಗೂ ಹ್ಯಾರಿಯರ್ ಇವಿಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. 2026ರ ಮೊದಲ ತ್ರೈಮಾಸಿಕದಲ್ಲಿ (ಜನವರಿ - ಮಾರ್ಚ್) ಸಿಯೆರಾ ಇವಿಯನ್ನು ಕಂಪನಿಯು ಮಾರಾಟಕ್ಕೆ ತರಲಿದೆ ಎಂದು ಹೇಳಲಾಗಿದೆ.
ಎಲ್ಲವು ಅಂದುಕೊಂಡಂತೆ ನಡೆದರೆ, ಇದೇ 2026ರ ಅಂತ್ಯದೊಳಗೆ ಹೊಚ್ಚ ಹೊಸ ಟಾಟಾ ಅವಿನ್ಯಾ ಇವಿ (Tata Avinya EV) ಸಹ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಈ ಎಲೆಕ್ಟ್ರಿಕ್ ಎಸ್‌ಯುವಿ ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿರಲಿದ್ದು, ರೂ.30 ಲಕ್ಷದಿಂದ ರೂ.40 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

ಈ ವರ್ಷದ ಜನವರಿಯಲ್ಲಿ ಆಯೋಜಿಸಿದ್ದ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ-2025'ದಲ್ಲೂ 'ಟಾಟಾ ಅವಿನ್ಯಾ' ಕಾನ್ಸೆಪ್ಟ್ ಎಲೆಕ್ಟ್ರಿಕ್ ಕಾರನ್ನು ಪ್ರದರ್ಶಿಸಲಾಗಿತ್ತು. ಅಲ್ಲಿ ತೋರಿಸಲಾದ ಮಾಡೆಲ್ ಎಲ್‌ಇಡಿ ಹೆಡ್‌ಲೈಟ್‌ಗಳು, ಟಿ-ಆಕಾರದಲ್ಲಿರುವ ಎಲ್‌ಇಡಿ ಡಿಆರ್‌ಎಲ್‌ಗಳು, ಬ್ಲ್ಯಾಂಕೆಡ್-ಆಫ್ ಗ್ರಿಲ್, ಎಲ್‌ಇಡಿ ಟೈಲ್ ಲೈಟ್‌ಗಳನ್ನು ಹೊಂದಿದೆ. ಜೊತೆಗೆ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಾಗುವ ನಿರೀಕ್ಷೆಯಿದೆ.
ನೂತನ 'ಟಾಟಾ ಅವಿನ್ಯಾ ಇವಿ' ಹೆಚ್ಚು ವಿಶಾಲವಾಗಿರಲಿದೆ. ಆದರೆ, ಸುತ್ತಳತೆ ಬಗ್ಗೆ ಹೆಚ್ಚಿನ ವಿವರಗಳು ದೊರೆತಿಲ್ಲ. ಇದು 4300 ಮಿ.ಮೀ ಉದ್ದವಿರಲಿದ್ದು, 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2900 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 615 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.
ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿರಬಹುದು ಎನ್ನಲಾಗಿದೆ. 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿರುವ ನಿರೀಕ್ಷೆಯಿದೆ. ಭರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು ಎಂದು ಊಹಿಸಲಾಗಿದೆ.
ಹೊಸ 'ಟಾಟಾ ಅವಿನ್ಯಾ ಇವಿ' ವಿನ್ಯಾಸವು ಚೆನ್ನಾಗಿರಲಿದೆ. ಒಳಭಾಗದಲ್ಲಿ ಡುಯಲ್ ಟೋನ್ ಕಲರ್ ಥೀಮ್‍ನ್ನು ಹೊಂದಿರಲಿದೆ. 14.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೊರೊಮಿಕ್ ಸನ್‌ರೂಫ್, 10-ಸ್ಪೀಕರ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಆಟೋಮೆಟಿಕ್ ಎಸಿ, 6-ವೇ ಪವರ್ ಡ್ರೈವರ್ ಸೀಟ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಲಿದೆ. ಅದಕ್ಕಾಗಿ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಹೋಲ್ಡ್ ಅಸಿಸ್ಟ್, ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾದಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿರಬಹುದು ಎನ್ನಲಾಗಿದೆ.
ಈ ಕಾರಿಗೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಎಂಜಿ ವಿಂಡ್ಸರ್ ಇವಿ (MG Windsor EV), ಮಹೀಂದ್ರಾ ಬಿಇ 6 (Mahindra BE 6), ಮಹೀಂದ್ರಾ ಎಕ್ಸ್ಇವಿ 9ಇ (Mahindra XEV 9e) ಹಾಗೂ ವಿನ್‌ಫಾಸ್ಟ್ ವಿಎಫ್7 (VinFast VF7) ಎಲೆಕ್ಟ್ರಿಕ್ ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಒಟ್ಟಾರೆಯಾಗಿ 2026ರ ಕೊನೆಯಲ್ಲಿ 'ಟಾಟಾ ಅವಿನ್ಯಾ ಇವಿ' ಪರಿಚಯಗೊಳ್ಳಲಿದೆ ಎಂಬ ವಿಚಾರವು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಹೆಚ್ಚು ಅತ್ಯಾಧುನಿಕವಾಗಿರಲಿದ್ದು, ಭರಪೂರ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ. ಈ ಕಾರು ಬಿಡುಗಡೆಯಾದ ಮೇಲೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.


Click it and Unblock the Notifications








