627 ಕಿ.ಮೀ ರೇಂಜ್.. 5-ಸೀಟರ್.. ಕಲ್ಲು ಬಂಡೆಯಂತಹ ಹೊಸ ಟಾಟಾ ಕಾರಿನ ವಿತರಣೆ ಶುರು, ಸಂಭ್ರಮದಲ್ಲಿ ಗ್ರಾಹಕರು!

ಟಾಟಾ ಹ್ಯಾರಿಯರ್ ಇವಿ (Tata Harrier EV) ಪ್ರಮುಖ ಎಲೆಕ್ಟ್ರಿಕ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ವಿಶ್ವಾಸಾರ್ಹತೆ ಹಾಗೂ ಉತ್ತಮ ಕಾರ್ಯಕ್ಷಮತೆಯಿಂದಲೂ ಹೆಸರುವಾಸಿಯಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಬುಕ್ಕಿಂಗ್ ಪ್ರಾರಂಭಿಸಿದ 24 ಗಂಟೆಯಲ್ಲಿ ಬರೋಬ್ಬರಿ 10,000ಕ್ಕೂ ಹೆಚ್ಚಿನ ಮಂದಿ ಆರ್ಡರ್ ಮಾಡಿದ್ದರು. ಈಗಲೂ ಉತ್ತಮ ಸಂಖ್ಯೆಯಲ್ಲಿ ಬುಕ್ಕಿಂಗ್‌ನ್ನು ಪಡೆದುಕೊಳ್ಳುತ್ತಿದ್ದು, 15 ರಿಂದ 30 ವಾರಗಳ ಕಾಯುವಿಕೆ ಅವಧಿಯನ್ನು ಹೊಂದಿದೆ ಎಂಬ ವಿವರಗಳು ಲಭ್ಯವಾಗಿವೆ.

ಸದ್ಯ, ದೇಶಾದ್ಯಂತ ಹೊಚ್ಚ ಹೊಸ 'ಟಾಟಾ ಹ್ಯಾರಿಯರ್ ಇವಿ'ಯ ವಿತರಣಾ ಕಾರ್ಯಕ್ಕೆ ಕಂಪನಿಯು ಚಾಲನೆ ನೀಡಿದೆ. ಗ್ರಾಹಕರು ಕೂಡ ಸಂಭ್ರಮ - ಸಡಗರದಿಂದ ನೂತನ ಕಾರನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಈ ಬಗ್ಗೆ 'ಕಾರ್‌ವಾಲೆ' ವರದಿ ಮಾಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಈ ಕಾರು, ರೂ.21.49 ಲಕ್ಷದಿಂದ ರೂ.28.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

New Tata Harrier EV Delivery Start Details

ಹೊಸ ಹ್ಯಾರಿಯರ್ ಎಲೆಕ್ಟ್ರಿಕ್ ಎಸ್‌ಯುವಿ ಅಡ್ವೆಂಚರ್, ಅಡ್ವೆಂಚರ್ ಎಸ್, ಫಿಯರ್‌ಲೆಸ್ ಪ್ಲಸ್ ಹಾಗೂ ಎಂಪವರ್ಡ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಹೊರಭಾಗದಲ್ಲೂ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು 19-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ಈ ಕಾರು ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ ಮತ್ತು ಪ್ಯೂರ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 4,607 ಎಂಎಂ ಉದ್ದ, 2,132 ಎಂಎಂ ಅಗಲ, 1,740 ಎಂಎಂ ಎತ್ತರವು ಇದೆ. ಜೊತೆಗೆ 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,741 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

New Tata Harrier EV Delivery Start Details

ಇದು 65 ಹಾಗೂ 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ತನ್ನದಾಗಿಸಿಕೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್ ಓಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 6.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ ಈ ಕಾರಿನ ಬ್ಯಾಟರಿಯು 7.2 ಕೆಡಬ್ಲ್ಯೂ ಎಸಿ ಚಾರ್ಜರ್ ಉಪಯೋಗ ಮಾಡಿದಾಗ, 10 ಗಂಟೆಯಲ್ಲಿ 10 ರಿಂದ 100% ಚಾರ್ಜ್ ಆಗುತ್ತದೆ.

ನೂತನ ಟಾಟಾ ಹ್ಯಾರಿಯರ್ ಎಲೆಕ್ಟ್ರಿಕ್ ಕಾರು 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 502 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

New Tata Harrier EV Delivery Start Details

ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿದೆ. 14.5-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಜೆಬಿಎಲ್ ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಏರ್ ಪ್ಯೂರಿಫೈಯರ್, ಕೀ ಲೆಸ್ ಎಂಟ್ರಿ, ರೇರ್ ಎಸಿ ವೆಂಟ್‌ಗಳು ಮತ್ತು ವಿಂಡೋ ಸನ್‌ಬ್ಲೈಂಡ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಭಾರತ್ ಎನ್‌ಸಿಎಪಿಯು 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಹೋಲ್ಡ್ ಅಸಿಸ್ಟ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಆಲ್ ವೀಲ್ ಡಿಸ್ಕ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾದಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.

More from DriveSpark

Article Published On: Thursday, July 31, 2025, 10:48 [IST]
English summary
New tata harrier ev delivery start details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+