Tata: ಜೂನ್ 3 ರಂದು 'ಗಜ' ಗಾತ್ರದ ಟಾಟಾ ಹ್ಯಾರಿಯರ್ ಇವಿ ಬಿಡುಗಡೆ.. ಬೆಲೆ ಎಷ್ಟಿರಲಿದೆ, ನಿರೀಕ್ಷೆಗಳೇನು?

ಬಹುನಿರೀಕ್ಷಿತ ಟಾಟಾ ಹ್ಯಾರಿಯರ್ ಇವಿ (Tata Harrier EV), ಇದೇ ಜೂನ್ 3 ರಂದು ಬಿಡುಗಡೆಯಾಗಲಿದೆ. ಈ ಕಾರನ್ನು ಮಾರಾಟಕ್ಕೆ ತರಲು ಕಂಪನಿ ಕೂಡ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಡೀಸೆಲ್ ಚಾಲಿತ ಹ್ಯಾರಿಯರ್ ಎಸ್‌ಯುವಿಗೆ ಹೋಲಿಕೆ ಮಾಡಿದರೆ, ನೂತನ ಎಲೆಕ್ಟ್ರಿಕ್ ಕಾರು ಹಲವು ಹೊಸತನಗಳಿಗೂ ಸಾಕ್ಷಿಯಾಗಿರಲಿದೆ. ಬನ್ನಿ, ಈ 'ಹ್ಯಾರಿಯರ್ ಇವಿ'ಯ ಬೆಲೆ ಎಷ್ಟಿರಲಿದೆ.. ಯಾವೆಲ್ಲ ವಿಶೇಷತೆಗಳನ್ನು ಹೊಂದಿರಲಿದೆ ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ವಿನ್ಯಾಸ (Design): ಹೊಸ ಟಾಟಾ ಹ್ಯಾರಿಯರ್ ಇವಿ ಹೆಚ್ಚು ಆಕರ್ಷಕ ವಿನ್ಯಾಸವನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಹೊರಭಾಗ ನೋಡುಗರ ಕಣ್ಮನ ಸೆಳೆಯುವಂತಹ ಎಲ್ಇಡಿ ಹೈಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಕ್ಲೋಸ್ಡ್ - ಆಫ್ ಗ್ರಿಲ್, ಉತ್ತಮವಾಗಿರುವ ಬಂಪರ್‌ ಮತ್ತು ಅಲಾಯ್ ವೀಲ್‌ಗಳನ್ನು ಪಡೆದುಕೊಂಡಿರುವುದು ಬಹುತೇಕ ಖಚಿತವಾಗಿದೆ.

New Tata Harrier EV Launch On June 3 What Expected

ಈ ಎಲೆಕ್ಟ್ರಿಕ್ ಎಸ್‌ಯುವಿ ಒಳಭಾಗದಲ್ಲೂ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿರುವ ಸಾಧ್ಯತೆಯಿದೆ. 'ಕ್ಯಾಬಿನ್' ಡ್ಯುಯಲ್ ಟೋನ್ (ಬ್ಲ್ಯಾಕ್ & ವೈಟ್) ಕಲರ್ ಥೀಮ್ ಒಳಗೊಂಡಿರಬಹುದು. ಅದು ಡೀಸೆಲ್ ಚಾಲಿತ ಹ್ಯಾರಿಯರ್ ಕಾರಿಗೆ ಹೋಲಿಕೆಯಾಗುವ ನಿರೀಕ್ಷೆಯಿದೆ. ಇನ್ನುಳಿದಂತೆ 'ಕ್ಯಾಬಿನ್'ನ ಮತ್ತಷ್ಟು ವಿನ್ಯಾಸವು ನೆಕ್ಸಾನ್ & ಕರ್ವ್ ಇವಿಗಳಂತೆ ಇರಬಹುದು ಎನ್ನಲಾಗಿದೆ.

ಕಾರ್ಯಕ್ಷಮತೆ (Performance): ನೂತನ 'ಹ್ಯಾರಿಯರ್ ಇವಿ' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಈ ಕಾರು 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದ್ದು, ಭರ್ತಿ ಚಾರ್ಜ್‌ನಲ್ಲಿ 500 ಕಿ.ಮೀ ಕ್ರಮಿಸಬಹುದು ಎಂದು ಹೇಳಲಾಗಿದೆ. ಎಡಬ್ಲ್ಯೂಡಿ (ಆಲ್-ವೀಲ್-ಡ್ರೈವ್) ಟೆಕ್ನಲಾಜಿಯನ್ನು ಪಡೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

New Tata Harrier EV Launch On June 3 What Expected

ವೈಶಿಷ್ಟ್ಯಗಳು (Features): ಈ ಎಲೆಕ್ಟ್ರಿಕ್ ಎಸ್‌ಯುವಿ ಯಾವುದೇ ಐಷಾರಾಮಿ ಕಾರುಗಳಿಗೆ ಕಮ್ಮಿಯಿಲ್ಲದ ರೀತಿಯಲ್ಲಿ ಹಲವು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರಲಿದೆ. ಬಹುಮುಖ್ಯವಾಗಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡುಯಲ್ ಜೋನ್ ಆಟೋಮೆಟಿಕ್ ಎಸಿ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಸನ್‌ರೂಫ್‌ನ್ನು ಒಳಗೊಂಡಿರುವ ನಿರೀಕ್ಷೆಯಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features): ಹೊಸ ಹ್ಯಾರಿಯರ್ ಇವಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಂದರೆ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

New Tata Harrier EV Launch On June 3 What Expected

ಆಸನ ಆಯ್ಕೆ & ಬೆಲೆ (Seating Capacity & Price): ನೂತನ ಎಲೆಕ್ಟ್ರಿಕ್ ಎಸ್‌ಯುವಿ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು. ಜೊತೆಗೆ ಈ ಕಾರು ಕೊಂಚ ದುಬಾರಿ ಬೆಲೆಯನ್ನುಪಡೆದಿರಲಿದ್ದು, ರೂ.30 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಮಾರಾಟಕ್ಕೆ ಬರಬಹುದು ಎನ್ನಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, May 29, 2025, 16:58 [IST]
English summary
New tata harrier ev launch on june 3 what expected
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+