Tata: ಟಾಟಾದ ಹೊಸ ಎಲೆಕ್ಟ್ರಿಕ್ ಕಾರಿನ ರೋಡ್ ಟೆಸ್ಟ್.. ಶೀಘ್ರದಲ್ಲೇ ಬಿಡುಗಡೆ, ಬೆಲೆ ಎಷ್ಟಿರಲಿದೆ.. ವಿಶೇಷತೆಗಳೇನು?
ಜನಪ್ರಿಯ ಸ್ವದೇಶಿ ವಾಹನ ತಯಾರಕ ಕಂಪನಿ ಟಾಟಾ ಮೋಟಾರ್ಸ್ (Tata Motors), ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿದೆ. ಇತ್ತಿಚೆಗೆ ನವದೆಹಲಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಉತ್ಪಾದನೆಗೆ ಸಿದ್ಧಗೊಂಡಿರುವ ಹೊಚ್ಚ ಹೊಸ 'ಹ್ಯಾರಿಯರ್ ಇವಿ'ಯನ್ನು ಪ್ರದರ್ಶಿಸಿತ್ತು. ಸದ್ಯ, ಈ ಕಾರು ಪ್ರಾಯೋಗಿಕ ಸಂಚಾರ ನಡೆಸುವಾಗ ಕಂಡುಬಂದಿದ್ದು, ಅದಕ್ಕೆ ಸಂಬಂಧಿಸಿದ ಸ್ಪೈ ಫೋಟೋಗಳು ಆನ್‍ಲೈನ್‍ನಲ್ಲಿ ಕೂಡ ಸೋರಿಕೆಯಾಗಿವೆ. ಎಲ್ಲವು ಅಂದುಕೊಂಡಂತೆ ನಡೆದರೆ, ಶೀಘ್ರದಲ್ಲೇ ಈ ನೂತನ ಕಾರು ಮಾರಾಟಕ್ಕೂ ಬರಲಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಈ ಸ್ಪೈ ಫೋಟೋಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ, ನೂತನ ಟಾಟಾ ಹ್ಯಾರಿಯರ್ ಇವಿ (Tata Harrier EV), ಹೊಸದಾಗಿರುವ 'ಅಲಾಯ್ ವೀಲ್ಸ್' ಹೊಂದಿರುವುದನ್ನು ಗುರುತಿಸಬಹುದು. ಇದು ಬಹುತೇಕ ಮಿಡ್-ಸ್ಪೆಕ್ ಮಾಡೆಲ್ ಆಗಿರಬಹುದು ಎಂದು ಹೇಳಲಾಗಿದೆ. ಜೊತೆಗೆ ಬ್ಲಂಕೆಡ್-ಆಫ್ ಗ್ರಿಲ್, ಟ್ವೀಕ್ಡ್ ಏರ್ ಡ್ಯಾಮ್ ಹಾಗೂ ಆಕರ್ಷಕವಾದ ಎಲ್ಇಡಿ ಟೈಲ್‌ಲೈಟ್‌ಗಳನ್ನು ಒಳಗೊಂಡಿರುವುದನ್ನು ಸಹ ಕಾಣಬಹುದು.

ಹೊಸ ಟಾಟಾ ಹ್ಯಾರಿಯರ್ ಇವಿ, ಶಕ್ತಿಯುತವಾದ ದೊಡ್ಡ ಗಾತ್ರದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿರುವ ನಿರೀಕ್ಷೆಯಿದೆ. ಭರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ಕೊಡಬಹುದು ಎಂದು ಹೇಳಲಾಗಿದೆ. ಈ ಕಾರು ಡುಯಲ್-ಮೋಟಾರ್ ಸೆಟಪ್ & ಆಲ್-ವೀಲ್ ಡ್ರೈವ್ ಟೆಕ್ನಾಲಜಿಯನ್ನು ಪಡೆದಿರಬಹುದು ಎನ್ನಲಾಗಿದೆ.
ನೂತನ ಕಾರು ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಾಧ್ಯತೆಯೂ ಇದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡುಯಲ್ ಜೋನ್ ಆಟೋಮೆಟಿಕ್ ಎಸಿ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 6-ವೇ ಪವರ್ ಡ್ರೈವರ್ ಸೀಟ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ.

ಈ ಟಾಟಾ ಹ್ಯಾರಿಯರ್ ಎಲೆಕ್ಟ್ರಿಕ್ ಎಸ್‌ಯುವಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರಬಹುದು ಎನ್ನಲಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಹೋಲ್ಡ್, ಹಿಲ್-ಡಿಸೆಂಟ್ ಕಂಟ್ರೋಲ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರುವ ಸಾಧ್ಯತೆಯಿದೆ.
ಹೊಸ ಹ್ಯಾರಿಯರ್ ಇವಿ, ಕೊಂಚ ಹೆಚ್ಚಿನ ಬೆಲೆಯಲ್ಲಿ ಮಾರಾಟಕ್ಕೆ ಬರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಇದನ್ನು ರೂ.30 ಲಕ್ಷ (ಎಕ್ಸ್ - ಶೋರೂಂ - ನವದೆಹಲಿ) ದರದಲ್ಲಿ ಪರಿಚಯಿಸುವ ನಿರೀಕ್ಷೆಯಿದೆ. ಹಾಗೆಯೇ ಮಾರ್ಚ್‌ನಲ್ಲಿ ಈ ನೂತನ ಕಾರು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.

ಇನ್ನು, ನೂತನ ಟಾಟಾ ಹ್ಯಾರಿಯರ್ ಇವಿಗೆ ಹುಂಡೈ ಕ್ರೆಟಾ ಎಲೆಕ್ಟ್ರಿಕ್, ಎಂಜಿ ಝಡ್ಎಸ್ ಇವಿ, ಮಹೀಂದ್ರಾ ಎಕ್ಸ್‌ಇವಿ 7ಇ ಹಾಗೂ ಮಾರುತಿ ಸುಜುಕಿ ಇ ವಿಟಾರಾ ಕಾರುಗಳು ಪ್ರಬಲವಾದ ಎದುರಾಳಿಯಾಗಲಿವೆ. ಮುಂಬರುವ ದಿನಗಳಲ್ಲಿ ಈ ಕಾರು, ಬಿಡುಗಡೆಯಾದ ಮೇಲೆ ದೇಶೀಯ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.
Source Link: Rushlane


Click it and Unblock the Notifications