ಬಿಡುಗಡೆಯಾಗಿ 24 ಗಂಟೆ ಕಳೆದಿಲ್ಲ.. 627 ಕಿ.ಮೀ ಓಡುತ್ತೆ.. ಹೊಸ Tata Harrier EV ಕುರಿತ ಪ್ರಮುಖಾಂಶಗಳಿವು!
ಹೊಚ್ಚ ಹೊಸ ಟಾಟಾ ಹ್ಯಾರಿಯರ್ ಇವಿ (Tata Harrier EV) ಮಂಗಳವಾರ ಮಾರಾಟಕ್ಕೆ ಬಂದಿದೆ. ಇದು ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ ಗರಿಷ್ಠ ದೂರ ಕೂಡ ಓಡಬಲ್ಲದು. ಅದರೊಂದಿಗೆ ಸ್ಪರ್ಧಾತ್ಮಕ ಸಂಖ್ಯೆಯಲ್ಲಿಯೂ ಗ್ರಾಹಕರ ಖರೀದಿಗೆ ಸಿಗುತ್ತದೆ. ನೀವು ನೂತನ 'ಹ್ಯಾರಿಯರ್ ಇವಿ'ಯನ್ನು ಖರೀದಿಸಲು ಆಲೋಚಿಸಿದ್ದೀರಾ.. ನಾವಿಲ್ಲಿ ಈ ಎಲೆಕ್ಟ್ರಿಕ್ ಎಸ್‌ಯುವಿಯ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ವಿನ್ಯಾಸ & ಬಣ್ಣಗಳು (Design & Colors): ನೂತನ ಕಾರು ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಇದು ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು 19-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ ಹಾಗೂ ಪ್ಯೂರ್ ಗ್ರೇ ಸೇರಿದಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

ಕಾರ್ಯಕ್ಷಮತೆ (Performance): ಹೊಸ ಎಲೆಕ್ಟ್ರಿಕ್ ಎಸ್‌ಯುವಿ 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ದೂರದ ಊರುಗಳಿಗೆ ಪ್ರಯಾಣಿಸಲು ಸಾಧ್ಯವಾಗುವಂತೆ ಪೂರ್ತಿ ಚಾರ್ಜ್‌ನಲ್ಲಿ 627 ಕಿಲೋಮೀಟರ್‌ವರೆಗೂ ಕ್ರಮಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.
ಈ ಟಾಟಾ ಹ್ಯಾರಿಯರ್ ಇವಿ ಕೇವಲ 6.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಇದು 120 ಕೆಡಬ್ಲ್ಯೂ ಡಿಸಿ ಫಾಸ್ಟ್ ಚಾರ್ಜರ್ ಬಳಕೆಯಲ್ಲಿ 15 ನಿಮಿಷಗಳಲ್ಲಿಯೇ 250 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುವಷ್ಟು ಚಾರ್ಜ್ ಆಗಿ ಬಿಡುತ್ತದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space): ನೂತನ ಕಾರು, 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 502 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.
ವೈಶಿಷ್ಟ್ಯಗಳು (Features): ಈ ಎಲೆಕ್ಟ್ರಿಕ್ ಎಸ್‌ಯುವಿಯ ಕ್ಯಾಬಿನ್ ಹೆಚ್ಚು ಅತ್ಯಾಧುನಿಕವಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (14.5-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (10.25-ಇಂಚು), ಪನೊರೊಮಿಕ್ ಸನ್‌ರೂಫ್, ಜೆಬಿಎಲ್ ಬ್ಲ್ಯಾಕ್ 10-ಸ್ಪೀಕರ್ ಸೌಂಡ್ ಸಿಸ್ಟಮ್, ವಿಂಡೋ ಸನ್‌ಬ್ಲೈಂಡ್‌ಗಳು, ಆಂಬಿಯೆಂಟ್ ಲೈಟಿಂಗ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features): ಟಾಟಾ ಹ್ಯಾರಿಯರ್ ಇವಿ ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸಿತ್ತದೆ. ಅದಕ್ಕಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳು, ಡಿಜಿಟಲ್ ವಿಡಿಯೋ ರೆಕಾರ್ಡರ್, ಹಿಲ್ ಹೋಲ್ಡ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಆಲ್ ವೀಲ್ ಡಿಸ್ಕ್ ಬ್ರೇಕ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಬೆಲೆ & ರೂಪಾಂತರಗಳು (Price & Variants): ಹೊಸ ಕಾರು ರೂ.21.49 ಲಕ್ಷ ಆರಂಭಿಕ ದರವನ್ನು (ಎಕ್ಸ್-ಶೋರೂಂ - ಪ್ಯಾನ್ ಇಂಡಿಯಾ) ಪಡೆದಿದೆ. ಅಡ್ವೆಂಚರ್, ಫಿಯರ್‌ಲೆಸ್ ಹಾಗೂ ಎಂಪವರ್ಡ್ ಎಂಬ ಮೂರು ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications