Tata: 5-ಸೀಟರ್.. ಕಲ್ಲು ಬಂಡೆಯಂತಿರುವ ಟಾಟಾದ ಈ ಜನಪ್ರಿಯ ಕಾರಿನ ಬೆಲೆ ಏರಿಕೆ.. ಎಷ್ಟಾಗಿದೆ?
ಭಾರತವು ವಿಶ್ವದಲ್ಲಿಯೇ 3ನೇ ಅತಿದೊಡ್ಡ ವಾಹನ ಮಾರುಕಟ್ಟೆಯನ್ನು ಹೊಂದಿದೆ. ಜನವರಿ ಆರಂಭದಿಂದಲೇ ವಿವಿಧ ಆಟೋಮೊಬೈಲ್ ಬ್ರಾಂಡ್‌ಗಳು, ಬಹುತೇಕ ಎಲ್ಲ ಕಾರುಗಳ ಬೆಲೆಯನ್ನು ಹೆಚ್ಚಿವೆ. ಅದಕ್ಕೆ ಜನಪ್ರಿಯ ವಾಹನ ತಯಾರಕ ಕಂಪನಿ ಟಾಟಾ ಮೋಟಾರ್ಸ್ (Tata Motors) ಕೂಡ ಹೊರತಾಗಿಲ್ಲ. ಸದ್ಯ, ಕಂಪನಿಯು ಪ್ರಖ್ಯಾತ ಮಿಡಲ್-ಸೈಜ್ ಎಸ್‌ಯುವಿ ಹ್ಯಾರಿಯರ್ (Harrier) ದರವನ್ನು ಸ್ಪರ್ಧಾತ್ಮಕವಾಗಿ ಹೆಚ್ಚಳ ಮಾಡಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಟಾಟಾ ಹ್ಯಾರಿಯರ್ (Tata Harrier) ಎಸ್‌ಯುವಿಯ ಆರಂಭಿಕ ಶ್ರೇಣಿ ರೂಪಾಂತರ (ಎಂಟ್ರಿ-ಲೆವೆಲ್ ವೇರಿಯೆಂಟ್) ಸ್ಮಾರ್ಟ್ ಎಂಟಿ ಬೆಲೆ ಅತಿ ಕಡಿಮೆ ಅಂದರೆ ರೂ.1,000 ಏರಿಕೆಯಾಗಿದೆ. ಪ್ಯೂರ್ ಪ್ಲಸ್ (ಎಸ್) ಡಾರ್ಕ್ ಎಡಿಷನ್ ಎಟಿ ರೂ.21,000 ದರ ಏರಿಕೆಯನ್ನು ಪಡೆದುಕೊಂಡಿದೆ. ಉಳಿದೆಲ್ಲ ರೂಪಾಂತರಗಳ ಬೆಲೆ ರೂ.36,000ದಷ್ಟು ಅಧಿಕಗೊಂಡಿದೆ.

ದರ ಏರಿಕೆ ಬಳಿಕ, ಹೊಸ ಟಾಟಾ ಹ್ಯಾರಿಯರ್ ಎಸ್‌ಯುವಿ, ಕನಿಷ್ಠ ರೂ.15 ಲಕ್ಷ ಮತ್ತು ಗರಿಷ್ಠ ರೂ.26.25 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. ಸ್ಮಾರ್ಟ್, ಪ್ಯೂರ್, ಅಡ್ವೆಂಚರ್ & ಫಿಯರ್‌ಲೆಸ್ ಎಂಬ ರೂಪಾಂತರಗಳನ್ನು ಹೊಂದಿದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಪಡೆದಿದ್ದು, ಸನ್‌ಲಿಟ್ ಯೆಲ್ಲೋ, ಕೋರಲ್ ರೆಡ್, ಪೆಬಲ್ ಗ್ರೇ, ಲೂನಾರ್ ವೈಟ್, ಒಬೆರಾನ್ ಬ್ಲ್ಯಾಕ್ ಮತ್ತು ಸೀವೀಡ್ ಗ್ರೀನ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಟಾಟಾ ಹ್ಯಾರಿಯರ್ ಕಾರು ವಿಶಾಲವಾದ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 445 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಹೊಸ ಟಾಟಾ ಹ್ಯಾರಿಯರ್ ಎಸ್‌ಯುವಿ ಶಕ್ತಿಯುತವಾದ 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 14.60 ರಿಂದ 16.8 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.
ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಡುಯಲ್ ಜೋನ್ ಆಟೋಮೆಟಿಕ್ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಪನೊರೊಮಿಕ್ ಸನ್‌ರೂಫ್, ಏರ್ ಪ್ಯೂರಿಫೈಯರ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.

ಟಾಟಾ ಹ್ಯಾರಿಯರ್ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಅಸಿಸ್ಟ್, ಕ್ರೂಸ್ ಕಂಟ್ರೋಲ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications