TATA: 5-ಸೀಟರ್, ಅತಿ ಶೀಘ್ರದಲ್ಲೇ ಸಿಂಹದಂತ ಟಾಟಾ ಕಾರು ಬಿಡುಗಡೆ.. 10 ಲಕ್ಷ ಬೆಲೆ, ವಿಶೇಷತೆಗಳೇನು?
ಟಾಟಾ ಸಿಯೆರಾ (Tata Sierra) 2 ದಶಕಗಳ ಹಿಂದೆ, ತುಂಬಾ ಜನಜನಿತವಾದ ಹೆಸರಾಗಿತ್ತು. 1991 ರಿಂದ 2003 ರವರೆಗೆ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿತ್ತು. ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದರು. ಆದರೆ, ವಿವಿಧ ಕಾರಣಗಳಿಗೆ ಈ ಕಾರಿನ ಮಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಸದ್ಯ, ಇದೇ 'ಸಿಯೆರಾ' ಎಸ್‌ಯುವಿಯನ್ನು ಹೊಸ ಅವತಾರದಲ್ಲಿ ಮಾರಾಟಕ್ಕೆ ತರಲು ಕಂಪನಿಯು ಕೂಡ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಬಿಡುಗಡೆ ಯಾವಾಗ & ಬೆಲೆ ಎಷ್ಟು?
ಟಾಟಾ ಸಿಯೆರಾ ಎಸ್‌ಯುವಿಯನ್ನು ಇಂಧನ (ಪೆಟ್ರೋಲ್/ಡೀಸೆಲ್) ಹಾಗೂ ಎಲೆಕ್ಟ್ರಿಕ್ ಚಾಲಿತ ರೂಪದಲ್ಲಿ ಪರಿಚಯಿಸಲಾಗುತ್ತದೆ. ಮೊದಲಿಗೆ ಈ ಅಕ್ಟೋಬರ್‌ನಲ್ಲಿ ಇಂಧನ ಚಾಲಿತ ಕಾರು ಬಿಡುಗಡೆಯಾಗಬಹುದು ಎನ್ನಲಾಗಿದೆ. ರೂ.10 ಲಕ್ಷ ಬೆಲೆಯನ್ನು ಹೊಂದಿರುವ ನಿರೀಕ್ಷೆಯಿದೆ. ಅದೇ ರೀತಿಯಲ್ಲಿ ಎಲೆಕ್ಟ್ರಿಕ್ ಚಾಲಿತ ಕಾರು 2026ರ ಆಗಸ್ಟ್‌ನಲ್ಲಿ ಮಾರಾಟಕ್ಕೆ ಬರಬಹುದು ಎಂದು ಹೇಳಲಾಗಿದೆ. ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿರುವ ಸಾಧ್ಯತೆಯಿದೆ.

ವಿನ್ಯಾಸ:
ಈ ಟಾಟಾ ಸಿಯೆರಾ ಕಾರನ್ನು ಇದೇ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲೂ ಪ್ರದರ್ಶನ ಮಾಡಲಾಗಿತ್ತು. ನೂತನ ಎಸ್‌ಯುವಿಯು ಹೊರಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಹಾಗೂ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.
ಕಾರ್ಯಕ್ಷಮತೆ:
ಇಂಧನ ಚಾಲಿತ ಟಾಟಾ ಸಿಯೆರಾ ಎಸ್‌ಯುವಿಯು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದುಕೊಂಡಿರಲಿದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿರಲಿದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿರುವ ನಿರೀಕ್ಷೆಯಿದೆ. 18 ರಿಂದ 20 ಕಿ.ಮೀ ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.

ಎಲೆಕ್ಟ್ರಿಕ್ ಚಾಲಿತ ಕಾರು, ಟಾಟಾ ಹ್ಯಾರಿಯರ್ ಇವಿ (Tata Harrier EV) ರೀತಿಯಲ್ಲಿಯೇ ಪವರ್‌ಟ್ರೇನ್‌ನ್ನು ಹೊಂದಿರಲಿದೆ. 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದುಕೊಂಡಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ.
ಆಸನ ಆಯ್ಕೆ:
ಈ ಎಸ್‌ಯುವಿಯು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತಕೊಂಡು ಓಡಾಟ ನಡೆಸಬಹುದು. ವಾರಾಂತ್ಯ & ರಜಾದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 450 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ.

ವೈಶಿಷ್ಟ್ಯಗಳು:
ನೂತನ ಟಾಟಾ ಸಿಯೆರಾ ಕಾರಿನ ಕ್ಯಾಬಿನ್ ವಿನ್ಯಾಸವು ಅಚ್ಚುಕಟ್ಟಾಗಿರಲಿದೆ. ಅದಕ್ಕೆ ತಕ್ಕಂತೆ 14.5-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಜೆಬಿಎಲ್ ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಹಾಗೂ ವಿಂಡೋ ಸನ್‌ಬ್ಲೈಂಡ್‌ನಂತಹ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.
ಸುರಕ್ಷತಾ ವೈಶಿಷ್ಟ್ಯಗಳು:
ಹೊಸ ಟಾಟಾ ಸಿಯೆರಾ ಎಸ್‌ಯುವಿಯು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಲಿದೆ. 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಹೋಲ್ಡ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ಆಲ್ ವೀಲ್ ಡಿಸ್ಕ್ ಬ್ರೇಕ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಡಿರಬಹುದು ಎನ್ನಲಾಗದೆ.


Click it and Unblock the Notifications








