Tata: ಶುಭ ಮಂಗಳವಾರದಂದು ಸಿಹಿಸುದ್ದಿ.. ಹೊಸ ಟಾಟಾ SUVಗಾಗಿ ಬುಕ್ಕಿಂಗ್ ಶುರು.. ಬೆಲೆ ಎಷ್ಟು, ವಿಶೇಷತೆಗಳೇನು?

ಭಾರತದ ಹೆಮ್ಮೆಯ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಮೊದಲ ಬಾರಿಗೆ 1991ರಲ್ಲಿ 'ಸಿಯೆರಾ' ಎಸ್‌ಯುವಿಯನ್ನು ಪರಿಚಯಿಸಲಾಗಿತ್ತು. ಆಗಿನ ಕಾಲಘಟ್ಟಕ್ಕೆ ಶ್ರೀಮಂತ ವರ್ಗದ ಗ್ರಾಹಕರ ನೆಚ್ಚಿನ ಕಾರಾಗಿತ್ತು. ಆದರೆ, ಒಂದಷ್ಟು ಕಾರಣಗಳಿಗೆ 2003ರಲ್ಲಿ ಮಾರಾಟವನ್ನು ಸ್ಥಗಿತಗೊಳಿಸಲಾಯಿತು. ಈ ಕಾರಿನ ಮರುಬಿಡುಗಡೆಗೆ ಖರೀದಿದಾರರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದರು. ಅವರ ಕನಸನ್ನು ನನಸುಗೊಳಿಸಲು ಇದೇ ನವೆಂಬರ್ 25ರಂದು 'ಸಿಯೆರಾ'ವನ್ನು ಹೊಸ ರೂಪದಲ್ಲಿ ಮಾರಾಟಕ್ಕೆ ತರಲಾಯಿತು.

ಇಂದಿನಿಂದ (ಡಿಸೆಂಬರ್ 16) ಹೊಚ್ಚ ಹೊಸ ಟಾಟಾ ಸಿಯೆರಾ (Tata Sierra) ಎಸ್‌ಯುವಿಗಾಗಿ ಬುಕ್ಕಿಂಗ್ ತೆಗೆದುಕೊಳ್ಳುವ ಕಾರ್ಯಕ್ಕೆ ಕಂಪನಿಯು ಚಾಲನೆ ನೀಡಿದೆ. ಆಸಕ್ತರು ಸಮೀಪದ ಡೀಲರ್‌ಶಿಪ್‌ ಅಥವಾ ಅಧಿಕೃತ ವೆಬ್‌ಸೈಟ್‌ನಲ್ಲಿ ರೂ.21,000 ಮುಂಗಡ ಹಣ ಪಾವತಿಸಿ, ಆರ್ಡರ್ ಮಾಡಬಹುದು. ಜನವರಿ 15ರಿಂದ ಅದ್ದೂರಿಯಾಗಿ ವಿತರಣೆಗಳು ಶುರುವಾಗಲಿದೆ.

New Tata Sierra Suv Booking Open Details

ಬೇರೆ ಕಂಪನಿಯ ಕಾರುಗಳಿಗೆ ಹೋಲಿಕೆ ಮಾಡಿದರೆ, ನೂತನ 'ಸಿಯೆರಾ' ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ರೂ.11.49 ಲಕ್ಷದಿಂದ ರೂ.21.29 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್, ಅಡ್ವೆಂಚರ್ ಪ್ಲಸ್, ಅಕಾಂಪ್ಲಿಶ್ಡ್ ಮತ್ತು ಅಕಾಂಪ್ಲಿಶ್ಡ್ ಪ್ಲಸ್ ಎಂಬ 6 ಆಕರ್ಷಕ ರೂಪಾಂತರಗಳೊಂದಿಗೂ ಲಭ್ಯವಿದೆ.

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ & ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,730 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ ಟಾಟಾ ಸಿಯೆರಾ' ಸಾಕಷ್ಟು ಬಲಿಷ್ಠವಾದ ಮೂರು ಪವರ್‌ಟ್ರೇನ್‌ ಆಯ್ಕೆಯನ್ನು ಹೊಂದಿದೆ. ಇದರ 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 106 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 145 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ & 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಮತ್ತೊಂದು 1.5-ಲೀ. ಟರ್ಬೊ ಪೆಟ್ರೋಲ್ ಎಂಜಿನ್, 160 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 255 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಬರೀ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಇನ್ನೊಂದು 1.5-ಲೀ. ಡೀಸೆಲ್ ಎಂಜಿನ್, 118 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 260 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 622 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್​ಪ್ಲೇ), ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌, ಆಟೋಮೆಟಿಕ್ ವೈಪರ್‌ಗಳು, ರೇರ್ ಎಸಿ ವೆಂಟ್‌ಗಳು ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಹೊಸ 'ಸಿಯೆರಾ' ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಇದಕ್ಕೆ ಸಾಲು - ಸಾಲು ಎದುರಾಲಿಗಳಿವೆ. ಹ್ಯುಂಡೈ ಕ್ರೆಟಾ, ಮಹೀಂದ್ರಾ ಸ್ಕಾರ್ಪಿಯೋ ಎನ್ ಹಾಗೂ ಎಂಜಿ ಹೆಕ್ಟರ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Tuesday, December 16, 2025, 13:25 [IST]
English summary
New tata sierra suv booking open details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+