Tata Sierra: ಲಕ್ಷುರಿ ಫೀಚರ್ಸ್.. ಮತ್ತೆ ಮಾರಾಟಕ್ಕೆ ಬರಲು ಟಾಟಾ ಸಿಯೆರಾ ರೆಡಿ, ಬೆಲೆ ಇಷ್ಟು ಅಗ್ಗವೇ.. ಮೈಲೇಜ್ ಏನು?
ಭಾರತದ ರಸ್ತೆಯಲ್ಲಿ ವರ್ಷಗಳ ಹಿಂದೆ, ಟಾಟಾ ಸಿಯೆರಾ (Tata Sierra) ಪ್ರಮುಖ ಕಾರಾಗಿ ಹೊರಹೊಮ್ಮಿತ್ತು. ಆದರೆ, ವಿವಿಧ ಕಾರಣಗಳಿಗೆ 2000ರಲ್ಲಿ ಈ ಕಾರಿನ ಮಾರಾಟವನ್ನು ನಿಲ್ಲಿಸಲಾಗಿತ್ತು. ಸದ್ಯ, ನೂತನ ಸಿಯೆರಾ ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ಕಂಪನಿಯು ಕೂಡ ಸಿದ್ದತೆಯನ್ನು ನಡೆಸುತ್ತಿದೆ. ನವದೆಹಲಿಯಲ್ಲಿ ನಿನ್ನೆ ನಡೆದ ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿ ಉತ್ಪಾದನೆಗೆ ಸಿದ್ಧಗೊಂಡಿರುವ ಸಿಯೆರಾ ಕಾರನ್ನು ಬಹಿರಂಗಪಡಿಸಲಾಗಿತ್ತು. ಈ ಕಾರನ್ನು ಮೊದಲಿಗೆ ಕಂಪನಿಯು ಎಲೆಕ್ಟ್ರಿಕ್ ರೂಪದಲ್ಲಿ ಪರಿಚಯಿಸಲು ಉದ್ದೇಶಿಸಿದೆ. ಆ ನಂತರದ ದಿನಗಳಲ್ಲಿ ಇಂಧನ ಚಾಲಿತ ಆಯ್ಕೆಯಲ್ಲಿಯೂ ಬಿಡುಗಡೆಗೊಳಿಸಲಿದೆ ಎಂದು ತಿಳಿದುಬಂದಿದೆ.
ನೂತನ ಟಾಟಾ ಸಿಯೆರಾ ಎಸ್‌ಯುವಿ ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾಗಿರುವ ಹೆಡ್‌ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು, ಡುಯಲ್ ಟೋನ್ ಅಲಾಯ್ ವೀಲ್‌ಗಳು, ಬಾಡಿ ಕಲರ್ ಬಿ - ಪಿಲ್ಲರ್‌ಗಳು ಮತ್ತು ಕನೆಕ್ಟ್ಡ್ ಎಲ್ಇಡಿ ಲೈಟ್ ಸೆಟಪ್‌ನ್ನು ಹೊಂದಿದೆ.

ಎಲೆಕ್ಟ್ರಿಕ್ ರೂಪದಲ್ಲಿ ಮಾರಾಟಕ್ಕೆ ಬರಲಿರುವ ಟಾಟಾ ಸಿಯೆರಾ ಕಾರು, ದೊಡ್ಡದಾಗಿರುವ ಬ್ಯಾಟರಿ ಪ್ಯಾಕ್‌ನ್ನು ಹೊಂದಿರುವ ನೀರಿಕ್ಷೆಯಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಈ ಬಗ್ಗೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.
ಇಂಧನ ಚಾಲಿತ ಟಾಟಾ ಸಿಯೆರಾ ಎಸ್‌ಯುವಿ ಎರಡು ಪವರ್‌ಟ್ರೇನ್‌ನೊಂದಿಗೆ ಮಾರಾಟಕ್ಕೆ ಬರುವ ನೀರಿಕ್ಷೆಯಿದೆ. ಇದು 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿರಲಿದ್ದು, 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಬಹುದು ಎಂದು ಅಂದಾಜಿಸಲಾಗಿದೆ.

ಮತ್ತೊಂದು 2-ಲೀಟರ್ ಡೀಸೆಲ್ ಎಂಜಿನ್‌ನ್ನು ಕೂಡ ಪಡೆದಿರಲಿದೆ ಎನ್ನಲಾಗಿದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿರುವ ನೀರಿಕ್ಷೆಯಿದೆ. ಜೊತೆಗೆ 18 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ.
ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಮಾರಾಟಕ್ಕೆ ಬರಲಿದೆ. 3-ಸ್ಕ್ರೀನ್ ಸೆಟಪ್, 4-ಸ್ಪೋಕ್ ಸ್ಟೀರಿಂಗ್ ವೀಲ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆಯಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಒಳಗೊಂಡುರಬಹುದು ಎನ್ನಲಾಗಿದೆ.
ಮುಂಬರುವ ತಿಂಗಳಲ್ಲಿ ಹೊಚ್ಚ ಹೊಸ ಟಾಟಾ ಸಿಯೆರಾ ಎಸ್‌ಯುವಿ ಮಾರಾಟಕ್ಕೆ ಬರುವ ನೀರಿಕ್ಷೆಯಿದೆ. ಈ ಕಾರಿನ ಇಂಧನ ಚಾಲಿತ ಮಾಡೆಲ್, ರೂ.10 ಲಕ್ಷ ಹಾಗೂ ಎಲೆಕ್ಟ್ರಿಕ್ ಮಾಡೆಲ್ ರೂ.25 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿರಬಹುದು ಎನ್ನಲಾಗಿದೆ. ಇನ್ನೂ ಅತಿ ಶೀಘ್ರದಲ್ಲಿಯೇ ಈ ಕಾರಿನ ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳ ಕುರಿತಂತೆ ಸಂಪೂರ್ಣವಾದ ಮಾಹಿತಿ ಲಭ್ಯವಾಗಲಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications